ಶಿವಮೊಗ್ಗ: ಹಿಂದೂ ಧರ್ಮದ ಎಲ್ಲಾ ಸಮುದಾಯದ ಬಡವರ ಏಳಿಗೆಗಾಗಿ ರಾಯಣ್ಣ ಚನ್ನಮ್ಮ ಬ್ರಿಗೇಡ್ (Rayanna Channamma Brigade) ಆರಂಭಿಸುತ್ತಿದ್ದು, ಅ.20 ರಂದು ಬಾಗಲಕೋಟೆಯ (Bgalkote) ಚರಂತಿಮಠ ಸಭಾಂಗಣದಲ್ಲಿ ಚಿಂತನ ಮಂಥನ ಸಭೆ ಆಯೋಜಿಸಲಾಗಿದೆ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ (KS Eshwarappa) ತಿಳಿಸಿದರು.
ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ಹಿಂದೆ ರಾಯಣ್ಣ ಬ್ರಿಗೇಡ್ ಸ್ಥಾಪನೆ ಮಾಡಿದ್ದೆ. ಆಗ ಈ ಬ್ರಿಗೇಡ್ ನಿಲ್ಲಿಸುವಂತೆ ಯಡಿಯೂರಪ್ಪ ಅವರು ತಿಳಿಸಿದ್ದರು. ಹೀಗಾಗಿ ಬ್ರಿಗೇಡ್ ಸ್ಥಗಿತಗೊಳಿಸಿದ್ದೆ. ಆದರೆ ಈ ಬಾರಿ ಅಂತಹ ತಪ್ಪು ಮಾಡುವುದಿಲ್ಲ ಎಂದರು. ಇದನ್ನೂ ಓದಿ: ಇಸ್ರೇಲ್ ಜೊತೆ ಮೋದಿಗೆ ಉತ್ತಮ ಸಂಬಂಧವಿದೆ – ಕಾಂಗ್ರೆಸ್‌ನಿಂದ ಇವಿಎಂ-ಪೇಜರ್ ಅನುಮಾನ
Advertisement
Advertisement
ಬಾಗಲಕೋಟೆಯಲ್ಲಿ ನಡೆಯುವ ಸಭೆಯಲ್ಲಿ ಉತ್ತರ ಕರ್ನಾಟಕ ಭಾಗದ 25 ಮಂದಿ ಸಾಧು ಸಂತರು ಭಾಗವಹಿಸಲಿದ್ದು, ಸುಮಾರು ಎರಡೂವರೆ ಸಾವಿರ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ಹಾವೇರಿ| ಡಿವೈಡರ್‌ಗೆ ಡಿಕ್ಕಿ ಹೊಡೆದು ಆಟೋ ಮೇಲೆ ಬಿದ್ದ ಕಾರು – ಇಬ್ಬರು ಸ್ಥಳದಲ್ಲೇ ಸಾವು, ಓರ್ವ ಗಂಭೀರ
Advertisement