ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಅವರ ನೇತೃತ್ವದ ಹಣಕಾಸು ನೀತಿ ಸಮಿತಿ(ಎಂಪಿಸಿ) ಸಭೆಯಲ್ಲಿ ರೆಪೋ ದರ ಮತ್ತೆ ಕಡಿಮೆಯಾಗಿದೆ. ರೆಪೋದ ದರದಲ್ಲಿ .25 ಮೂಲಾಂಕದಷ್ಟು ಕಡಿತ ಮಾಡಲಾಗಿದ್ದು ಇದು ಗೃಹ ಸಾಲದ ಇಎಂಐ ಮತ್ತು ಇತರ ಸಾಲಗಳ ಮೇಲಿನ ಬಡ್ಡಿದರ ಇಳಿಕೆಯಾಗುವ ಸಾಧ್ಯತೆಯಿದೆ.
ಇದರಿಂದ ರೆಪೋ ದರ ಈ ಮೊದಲಿದ್ದ ಶೇ.6.00 ರಿಂದ ಶೇ. 5.75 ಕ್ಕೆ ಇಳಿಕೆಯಾಗಿದ್ದು, ಮನೆ ಹಾಗೂ ಕಾರು ಖರೀದಿ ಮಾಡುವವರಿಗೆ ಸಹಾಯವಾಗಲಿದೆ. ರೆಪೋ ದರ ಇಳಿಕೆಯಿಂದ ಆರ್ಥಿಕ ಹೆಚ್ಚಿನ ವೇಗ ನೀಡಬಹುದು ಎಂಬ ಕಾರಣಕ್ಕೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಆರ್ಥಿಕ ವಿಶ್ಲೇಷಕರು ಹೇಳಿದ್ದಾರೆ.
Advertisement
Governor about to address press conference post release of second bi-monthly monetary policy #rbitoday #rbigovernor #monetarypolicy pic.twitter.com/dXlxbELCXU
— ReserveBankOfIndia (@RBI) June 6, 2019
Advertisement
ಈ ನಿರ್ಧಾರದ ಜೊತೆಗೆ ಜಿಡಿಪಿ ಬೆಳವಣಿಗೆಯ ದರವನ್ನು ಕಡಿತಗೊಳಿಸಲಾಗಿದೆ. ಈ ಹಿಂದೆ 2019-20ರಲ್ಲಿ ಶೇ.7.2 ರಷ್ಟು ಜಿಡಿಪಿ ಬೆಳವಣಿಗೆ ಸಾಧಿಸಲಿದೆ ಎಂದು ಆರ್‌ಬಿಐ ಅಂದಾಜಿಸಿತ್ತು. ಆದರೆ ಈಗ ಈ ದರವನ್ನು ಶೇ.7ಕ್ಕೆ ತಗ್ಗಿಸಲಾಗಿದೆ. ರಿವರ್ಸ್ ರೆಪೋ ದರದಲ್ಲಿ .25 ರಷ್ಟು ಕಡಿತಗೊಳಿಸಲಾಗಿದೆ. ಹೀಗಾಗಿ ಈಗ ಶೇ.5.75 ರಿಂದ ಶೇ.5.50ಕ್ಕೆ ಇಳಿಸಲಾಗಿದೆ.
Advertisement
ಎಂಪಿಸಿ ಸಭೆಯು ಕಳೆದ ಏಪ್ರಿಲ್‍ನಲ್ಲಿ ನಡೆದಿತ್ತು. ಆಗ ರೆಪೋ ದರವನ್ನು 25 ಅಂಶಗಳಷ್ಟು ಇಳಿಕೆ ಮಾಡಲಾಗಿತ್ತು. ಅದಕ್ಕೂ ಮುನ್ನ ಫೆಬ್ರವರಿಯಲ್ಲಿ ನಡೆದ ಸಭೆಯಲ್ಲಿ 25 ಬೇಸಿಕ್ ಪಾಯಿಂಟ್‍ನಷ್ಟು ರೆಪೋ ದರ ಇಳಿಕೆ ಮಾಡಲಾಗಿತ್ತು.
Advertisement
— ReserveBankOfIndia (@RBI) June 6, 2019
ಆರ್‌ಬಿಐನ ಆರು ಮಂದಿ ಸದಸ್ಯರಾದ ರವೀಂದ್ರ ದೋಲಾಕಿಯ, ಪಾಮಿ ದುವಾ, ಮೈಕೆಲ್ ಪಾತ್ರ, ಗವರ್ನರ್ ಶಕ್ತಿಕಾಂತ್ ದಾಸ್, ಡೆಪ್ಯೂಟಿ ಗವರ್ನರ್ ವಿರಾಳ್ ಆಚಾರ್ಯ, ಚೇತನ್ ಘಾಟ್ಗೆ ಎಲ್ಲರೂ ಸರ್ವಾನುಮತದಿಂದ ಈ ನಿರ್ಧಾರವನ್ನು ಬೆಂಬಲಿಸಿದ್ದಾರೆ. ಈ ಹಿಂದಿನ ಎಂಸಿಸಿ ಸಭೆಯಲ್ಲಿ ವಿರಾಳ್ ಆಚಾರ್ಯ, ಚೇತನ್ ಘಾಟ್ಗೆ ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವ ನಿರ್ಧಾರವನ್ನು ಬೆಂಬಲಿಸಿದ್ದರು. ಹೀಗಾಗಿ ಪ್ರಸ್ತಾವನೆಗೆ 4:2 ಮತಗಳು ಬಿದ್ದ ಹಿನ್ನೆಲೆಯಲ್ಲಿ ರೆಪೋ ದರ ಇಳಿಸುವ ನಿರ್ಧಾರವನ್ನು ಕೈಗೊಳ್ಳಲಾಗಿತ್ತು.
ಮಾರ್ಚ್ 31ಕ್ಕೆ ಅಂತ್ಯವಾದ 2018-19ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಕುಸಿದು ಶೇ.6.8ಕ್ಕೆ ಇಳಿದಿತ್ತು. ಭಾರತವು ಮುಂದಿನ 3 ವರ್ಷಗಳಲ್ಲಿ ಶೇ.7.5ರ ಆರ್ಥಿಕ ಬೆಳವಣಿಗೆಯನ್ನು ದಾಖಲಿಸಲಿದೆ ಎಂದು ವಿಶ್ವಬ್ಯಾಂಕ್ ತನ್ನ ವರದಿಯಲ್ಲಿ ತಿಳಿಸಿದೆ.
ರೆಪೋ ದರ: ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಿಂದ ಪಡೆಯುವ ಅಲ್ಪಾವಧಿ ಸಾಲನ ಮೇಲಿನ ಬಡ್ಡಿದರಕ್ಕೆ ರೆಪೋ ದರ ಎಂದು ಕರೆಯಲಾಗುತ್ತದೆ. ರೆಪೋ ದರ ಕಡೆಮೆಯಾದರೆ ಬ್ಯಾಂಕ್ ಗಳು ಕಡಿಮೆ ಬಡ್ಡಿ ದರದಲ್ಲಿ ಹೆಚ್ಚು ಹಣವನ್ನು ಪಡೆಯಬಹುದು.
ರಿವರ್ಸ್ ರೆಪೋ: ವಾಣಿಜ್ಯ ಬ್ಯಾಂಕುಗಳು ಆರ್‌ಬಿಐನಲ್ಲಿ ಇಡುವ ಠೇವಣಿಗಳ ಮೇಲೆ ಪಡೆಯುವ ಬಡ್ಡಿದರವೇ ವಿರುದ್ಧ ರೆಪೋ ರೇಟ್. ಆರ್ಬಿಐನಲ್ಲಿ ಠೇವಣಿ ಇಡುವುದು ಬ್ಯಾಂಕುಗಳಿಗೆ ಸುರಕ್ಷಿತ. ರಿವಸ್ರ್ರೆಪೋ ದರ ಹೆಚ್ಚಾದಾಗ ಬ್ಯಾಂಕುಗಳು ಹೆಚ್ಚಿನ ಮೊತ್ತವನ್ನು ಆರ್‍ಬಿಐಗೆ ವರ್ಗಾಯಿಸುತ್ತದೆ.