ನವದೆಹಲಿ: ಸತತ ಐದನೇ ಬಾರಿಗೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ಬುಧವಾರದಿಂದ ತಕ್ಷಣದಿಂದ ಜಾರಿಗೆ ಬರುವಂತೆ ರೆಪೊ ದರವನ್ನು(Repo Rate) 35 ಬೇಸಿಸ್ ಪಾಯಿಂಟ್ (ಬಿಪಿಎಸ್) ಹೆಚ್ಚಿಸಿದೆ. ಈ ನಿರ್ಧಾರದಿಂದ ರೆಪೋ ದರ ಶೇ. 6.25ಕ್ಕೆ ಏರಿಕೆಯಾದಂತಾಗಿದೆ.
ಗವರ್ನರ್ ಶಕ್ತಿಕಾಂತ ದಾಸ್ (Governor Shaktikanta Das) ನೇತೃತ್ವದ ಆರು ಸದಸ್ಯರ ಹಣಕಾಸು ನೀತಿ ಸಮಿತಿಯು (MPC) ಸಭೆ ನಡೆಸಿ ರೆಪೋ ದರವನ್ನು ಏರಿಸುವ ನಿರ್ಧಾರವನ್ನು ತೆಗೆದುಕೊಂಡಿದೆ. ಈ ದರವು ಆಗಸ್ಟ್ 2018 ರಿಂದ ಅತ್ಯಧಿಕ ಮಟ್ಟದಾಗಿದೆ.
Advertisement
Advertisement
ಇತ್ತೀಚಿನ ಏರಿಕೆಯೊಂದಿಗೆ, ಹಣದುಬ್ಬರವನ್ನು ನಿಯಂತ್ರಿಸುವ ಸಲುವಾಗಿ ಆರ್‌ಬಿಐ ಈ ವರ್ಷ ಒಟ್ಟಾರೆಯಾಗಿ 225 ಬೇಸಿಸ್ ಪಾಯಿಂಟ್ ಏರಿಕೆ ಮಾಡಿದೆ.
Advertisement
“ಜಾಗತಿಕ ಆರ್ಥಿಕತೆಯು ಇನ್ನೂ ಅನಿಶ್ಚಿತತೆಯಿಂದ ಕೂಡಿದೆ. ಐಎಂಎಫ್ ಪ್ರಕಾರ ಮೂರನೇ ಒಂದು ಭಾಗದಷ್ಟು ಆರ್ಥಿಕತೆಗಳು ಈ ವರ್ಷ ಅಥವಾ ಮುಂದಿನ ವರ್ಷ ಸಂಕುಚಿತಗೊಳ್ಳುತ್ತವೆ. ಹಣದುಬ್ಬರವು ಇತರ ದೇಶಗಳಲ್ಲಿ ಹೆಚ್ಚಾಗಿದ್ದರೂ ಭಾರತದಲ್ಲಿ ನಿಯಂತ್ರಣ ಮಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ.
Advertisement
ಹಿಂದಿನ ಮೂರು ನೀತಿ ಪರಾಮರ್ಶೆಗಳಲ್ಲಿ ತಲಾ 50 ಬಿಪಿಎಸ್ ಹೆಚ್ಚಳವಾಗಿದ್ದರೆ ಮೇ ತಿಂಗಳಿನಲ್ಲಿ 40 ಬಿಪಿಎಸ್ ಏರಿಕೆಯಾಗಿತ್ತು. ಈ ಹೆಚ್ಚಳಕ್ಕೆ ಹೋಲಿಸಿದರೆ ಈ ಬಾರಿ ಹೆಚ್ಚಳದ ಪ್ರಮಾಣ ಕಡಿಮೆಯಾಗಿದೆ. ರೆಪೋ ದರ ಏರಿಕೆಯಾದ ಕಾರಣ ಗೃಹ, ವಾಹನ ಸಾಲದ ಬಡ್ಡಿ ದರ ಏರಿಕೆಯಾಗಲಿದೆ.
ಏರಿಕೆ ಮಾಡಿದ್ದು ಯಾಕೆ?
ಕೋವಿಡ್ 19 ಮತ್ತು ರಷ್ಯಾ, ಉಕ್ರೇನ್ ನಡುವಿನ ಯುದ್ಧದ ಬಳಿಕ ವಿಶ್ವಾದ್ಯಂತ ವಸ್ತುಗಳ ಬೆಲೆ ಏರಿಕೆಯಾಗುತ್ತಿದೆ. ಹಣದುಬ್ಬರವನ್ನು ತಗ್ಗಿಸಲು ಆರ್‌ಬಿಐ ರೆಪೋ ದರವನ್ನು ಏರಿಸುತ್ತಾ ಬಂದಿದೆ. ಅಕ್ಟೋಬರ್‌ನಲ್ಲಿ ಹಣದುಬ್ಬರವು ಶೇ. 6.77ಕ್ಕೆ ಇಳಿದಿತ್ತು. ಇದು ಮೂರು ತಿಂಗಳ ಕನಿಷ್ಠ ಮಟ್ಟವಾಗಿತ್ತು. ಆರ್‌ಬಿಐ ಚಿಲ್ಲರೆ ಹಣದುಬ್ಬರ ಶೇ. 4ಕ್ಕೆ ಇಳಿಸಲು ಪ್ರಯತ್ನಿಸುತ್ತಿದೆ.
ಆರ್‌ಬಿಐ 2022ರ ಏಪ್ರಿಲ್‌ನಿಂದ ಇಲ್ಲಿಯವರೆಗೆ 225 ಬಿಪಿಎಸ್ ಏರಿಕೆ ಮಾಡಿದ್ದರೆ ಅಮೆರಿಕದ ಕೇಂದ್ರ ಬ್ಯಾಂಕ್ ಫೆಡರಲ್ ರಿಸರ್ವ್ 350 ಬಿಪಿಎಸ್ ಏರಿಕೆ ಮಾಡಿದೆ. ಇದನ್ನೂ ಓದಿ: ಆರ್ಥಿಕತೆಯಲ್ಲಿ ವೇಗವಾಗಿ ಬೆಳವಣಿಗೆಯಾಗುತ್ತಿರುವ ಟಾಪ್ 10 ರಾಜ್ಯಗಳು – ಕರ್ನಾಟಕಕ್ಕೆ ಎರಡನೇ ಸ್ಥಾನ
ರೆಪೋ ರೇಟ್ ಎಂದರೇನು?
ವಾಣಿಜ್ಯ ಬ್ಯಾಂಕ್‌ಗಳ ರಿಸರ್ವ್ ಬ್ಯಾಂಕ್‍ನಿಂದ ಪಡೆಯುವ ಅಲ್ಪಾವಧಿ ಸಾಲದ ಮೇಲಿನ ಬಡ್ಡಿ ದರಕ್ಕೆ ರೆಪೋ ದರ ಎನ್ನುತ್ತಾರೆ. ರೆಪೋ ದರ ಕಡಿಮೆಯಾದರೆ ಬ್ಯಾಂಕ್‌ಗಳು ಕಡಿಮೆ ದರದಲ್ಲಿ ಹೆಚ್ಚಿನ ಹಣವನ್ನು ಪಡೆಯಬಹುದು. ಬ್ಯಾಂಕ್‍ಗಳು ತಮ್ಮಲ್ಲಿ ಹಣದ ಕೊರತೆಯಾದಾಗ ಆರ್‌ಬಿಐನಿಂದ ಹಣ ಪಡೆಯುತ್ತಿರುತ್ತವೆ.