ನವದೆಹಲಿ: ಹೆಚ್ಚುತ್ತಿರುವ ಹಣದುಬ್ಬರ ನಿಯಂತ್ರಣಕ್ಕಾಗಿ ರೆಪೊ ದರದಲ್ಲಿ 40 ಬೇಸಿಸ್ ಪಾಯಿಂಟ್ಸ್ (ಮೂಲಾಂಶ) ಹೆಚ್ಚಳ ಮಾಡಿದ್ದು, ಶೇ. 4.40ಗೆ ನಿಗದಿಪಡಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಶಕ್ತಿಕಾಂತ್ ದಾಸ್ ಘೋಷಿಸಿದ್ದಾರೆ.
ಆರ್‌ಬಿಐನ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ, ಏರುತ್ತಿರುವ ಹಣದುಬ್ಬರ ನಿಯಂತ್ರಣದ ಉದ್ದೇಶದಿಂದ ರೆಪೊ ದರ ಹೆಚ್ಚಿಸಲು ನಿರ್ಧರಿಸಿದೆ ಎಂದು ಶಕ್ತಿಕಾಂತ್ ದಾಸ್ ತಿಳಿಸಿದ್ದಾರೆ. ಇದನ್ನೂ ಓದಿ: ಹನುಮಾನ್ ಚಾಲೀಸಾ ನುಡಿಸುವುದು ಒಂದು ದಿನದ ವಿಷಯವಲ್ಲ, ಅದು ಮುಂದುವರಿಯಬೇಕು: ರಾಜ್ ಠಾಕ್ರೆ
Advertisement
Advertisement
ನಗದು ಮೀಸಲು ಅನುಪಾತ (ಕ್ಯಾಶ್ ರಿಸರ್ವ್ ರೇಷಿಯೊ) ಬೇಡಿಕೆಯ 50 ಮೂಲಾಂಶ ಹೆಚ್ಚಿಸಲಾಗಿದ್ದು, ಶೇ. 4.5ಕ್ಕೆ ನಿಗದಿಪಡಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
ಅಂತರರಾಷ್ಟ್ರೀಯ ಹಣಕಾಸು ನಿಧಿಯ (ಐಎಂಎಫ್) ವರದಿಯನ್ನು ಉಲ್ಲೇಖಿಸಿದ ಶಕ್ತಿಕಾಂತ್ ದಾಸ್, ಯುದ್ಧವು ಜಾಗತಿಕ ಆರ್ಥಿಕತೆ ಮೇಲೆ ಪರಿಣಾಮ ಬೀರಿದೆ. ಇದರಿಂದ ಸರಕು ಮತ್ತು ಹಣಕಾಸು ಮಾರುಕಟ್ಟೆಯಲ್ಲಿ ಕೊರತೆ ಹೆಚ್ಚಾಗಿದೆ. ಸೂಕ್ತ ನಿರ್ಧಾರಗಳೊಂದಿಗೆ ಭಾರತ ಆರ್ಥಿಕ ಬಿಕ್ಕಟ್ಟನ್ನು ಸಮರ್ಥವಾಗಿ ಎದುರಿಸುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೆಲ್ಫಿ ವೀಡಿಯೋ ಮಾಡುತ್ತಿದ್ದ ಯುವಕ- ರೈಲಿಗೆ ಸಿಲುಕಿ ಸಾವು