ನವದೆಹಲಿ: ದೇಶದಲ್ಲಿನ ಕಪ್ಪುಹಣಕ್ಕೆ ಬ್ರೇಕ್ ಹಾಕುವ ಉದ್ದೇಶದಿಂದ, ನೋಟು ನಿಷೇಧ ನಿರ್ಧಾರದ ಸಮಯದಲ್ಲಿ ಚಲಾವಣೆಗೆ ತಂದಿದ್ದ 2 ಸಾವಿರ ರೂ. ಮುಖಬೆಲೆಯ ನೋಟುಗಳ ಮುದ್ರಣವನ್ನು ಭಾರತೀಯ ರಿಸರ್ವ್ ಬ್ಯಾಂಕ್ ಹಂತ ಹಂತವಾಗಿ ಕಡಿಮೆ ಮಾಡಲಿದೆ ಎಂದು ಹಣಕಾಸು ಸಚಿವಾಲಯ ಮಾಹಿತಿ ನೀಡಿದೆ.
ನವೆಂಬರ್ 8, 2016ರಲ್ಲಿ ನೋಟ್ ಬ್ಯಾನ್ ಆದ ಸಂದರ್ಭದಲ್ಲಿ ಆರ್ಬಿಐ 2 ಸಾವಿರ ರೂ.ನಷ್ಟು ದೊಡ್ಡ ಮೊತ್ತದ ನೋಟುಗಳನ್ನು ಹಣಕಾಸು ಕೊರತೆಯನ್ನು ಭರಿಸುವ ಉದ್ದೇಶದಿಂದ ಚಲಾವಣೆಗೆ ತಂದಿತ್ತು.
Advertisement
Advertisement
ಈ ದೊಡ್ಡ ಮೊತ್ತದ ನೋಟು ಕಾಳಧನಿಕರಿಗೆ ಶತ್ರುವಾಗಿ ಪರಿಣಮಿಸುವ ಬದಲಾಗಿ ಸ್ನೇಹಿಯಾಗಿ ಮಾರ್ಪಾಡಾಗತೊಡಗಿವೆ. ಹೆಚ್ಚು ಮೌಲ್ಯ ಹೊಂದಿರುವ ಕಾರಣಕ್ಕೆ ಈ ಮುಖಬೆಲೆಯ ನೋಟ್ಗಳನ್ನು ಸುಲಭವಾಗಿ ಶೇಖರಿಸಿ ಇಡಬಹುದು ಮತ್ತು ಸಾಗಿಸಬಹುದು ಅಂತ ಕಾಳಧನಿಕರು ಉಪಾಯ ಮಾಡಿದ್ದಾರೆ. ಆದರಿಂದ ಈ ನೋಟುಗಳನ್ನು ಹೆಚ್ಚು ಶೇಖರಿಸಿಡುತ್ತಿದ್ದಾರೆ ಎಂಬ ಶಂಕೆ ಬಂದ ಹಿನ್ನೆಲೆಯಲ್ಲಿ ಆರ್ಬಿಐ ಹಂತಹಂತವಾಗಿ 2 ಸಾವಿರ ಮುಖಬೆಲೆಯ ನೋಟುಗಳ ಮುದ್ರಣವನ್ನು ನಿಲ್ಲಿಸುತ್ತಿದೆ.
Advertisement
Advertisement
2 ಸಾವಿರ ರೂ. ನೋಟುಗಳ ಮುದ್ರಣವನ್ನು ಕಡಿಮೆ ಮಾಡಿ, ಮುಂದಿನ ದಿನಗಳಲ್ಲಿ ಕಡಿಮೆ ಮೌಲ್ಯದ ನೋಟುಗಳ ಚಲಾವಣೆಯನ್ನು ಸರ್ಕಾರ ಹೆಚ್ಚಿಸಲಿದೆ. ಇದು ಹೊಸ ಪ್ರಕ್ರಿಯೆ ಏನಲ್ಲ ಎಂದು ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.
ಮಾರ್ಚ್ 2017ರ ಅಂತ್ಯದಲ್ಲಿ 328 ಕೋಟಿ ರೂ. 2 ಸಾವಿರ ಮುಖಬೆಲೆಯ ನೋಟುಗಳು ದೇಶದಲ್ಲಿ ಚಲಾವಣೆಯಾಗಿತ್ತು. ಬಳಿಕ ಮಾರ್ಚ್ 2018ರ ಅಂತ್ಯದಲ್ಲಿ ಈ ಸಂಖ್ಯೆ 336 ಕೋಟಿಗೆ ಏರಿಕೆಯಾಗಿತ್ತು. ಆರಂಭದಲ್ಲಿ ಶೇ. 86ರಷ್ಟು 2 ಸಾವಿರ ನೋಟುಗಳು ಚಲಾವಣೆಯಲ್ಲಿದ್ದವು. ಆದರೆ 2018ರ ಮಾರ್ಚ್ 31ಕ್ಕೆ ಚಲಾವಣೆಯಲ್ಲಿರುವ ನೋಟುಗಳ ಪ್ರಮಾಣ ಶೇ.37.3ಕ್ಕೆ ಕುಸಿದಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv