– ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಆರ್‌ಸಿಬಿ V/S ಡೆಲ್ಲಿ ಫೈಟ್
ಬೆಂಗಳೂರು: ತವರಿನಲ್ಲಿ ಇಂದು (ಭಾನುವಾರ) ರಾಯಲ್ ಚಾಲೆಂಜರ್ಸ್ ಬೆಂಗಳೂರು (Royal Challengers Bengaluru) ತಂಡ ಡೆಲ್ಲಿ ಕ್ಯಾಪಿಟಲ್ಸ್ (Delhi Capitals) ವಿರುದ್ಧ ನಿರ್ಣಾಯಕ ಕದನಕ್ಕೆ ಸಜ್ಜಾಗಿದೆ. ಈ ಪಂದ್ಯ ಗೆದ್ದರಷ್ಟೇ ಆರ್‌ಸಿಬಿಗೆ (RCB) ಪ್ಲೇ-ಆಫ್‌ಗೇರುವ ಕನಸು ಜೀವಂತವಾಗಿರಲಿದೆ. ಒಂದರ್ಥದಲ್ಲಿ ಇದು ಆರ್‌ಸಿಬಿಗೆ ಮಾಡು ಇಲ್ಲವೇ ಮಡಿ ಪಂದ್ಯವಾಗಲಿದೆ.
Advertisement
ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಇಂದು ನಡೆಯುವ ಪಂದ್ಯದಲ್ಲಿ ಒಂದು ವೇಳೆ ಆರ್‌ಸಿಬಿ ಸೋತರೆ ನಾಕೌಟ್‌ನಿಂದ ಅಧಿಕೃತವಾಗಿ ಹೊರಬೀಳಲಿದೆ. ಡೆಲ್ಲಿ ಕ್ಯಾಪಿಟಲ್ಸ್‌ಗೂ (DC) ಪಂದ್ಯವನ್ನು ಗೆಲ್ಲಲೇಬೇಕಾದ ಅನಿವಾರ್ಯತೆ ಇದೆ. ಸೋತರೆ ನಾಕೌಟ್ ಹಾದಿ ಕಠಿಣವಾಗಲಿದೆ. ಇದನ್ನೂ ಓದಿ: ಪ್ಲೇ-ಆಫ್‌ಗೆ ಎಂಟ್ರಿ ಕೊಟ್ಟ ಕೆಕೆಆರ್
Advertisement
Advertisement
ಆರ್‌ಸಿಬಿ ಒಟ್ಟು 12 ಪಂದ್ಯಗಳನ್ನು ಆಡಿದ್ದು, 5 ಪಂದ್ಯಗಳಲ್ಲಿ ಜಯಗಳಿಸಿದೆ. ಟೂರ್ನಿಯ ಆರಂಭಿಕ 8 ಪಂದ್ಯಗಳಲ್ಲಿ ಡು ಪ್ಲೆಸಿಸ್ ನಾಯಕತ್ವದ ಆರ್‌ಸಿಬಿ 7 ರಲ್ಲಿ ಸೋತಿದೆ. ಆದರೆ ಕಳೆದ 4 ಪಂದ್ಯಗಳಲ್ಲಿ ಅಭೂತಪೂರ್ವ ಪ್ರದರ್ಶನದೊಂದಿಗೆ ಜಯಭೇರಿ ಬಾರಿಸಿದೆ. ಗುಜರಾತ್ ವಿರುದ್ಧ 9 ವಿಕೆಟ್‌ಗಳ ಗೆಲುವು ಮತ್ತು ಪಂಜಾಬ್ ವಿರುದ್ಧ 60 ರನ್‌ಗಳ ಜಯ ಆರ್‌ಸಿಬಿ ತಂಡದ ರನ್ ನೆಟ್ ರೇಟನ್ನು ಹೆಚ್ಚಿಸಿರುವುದು ಪ್ಲಸ್ ಪಾಯಿಂಟ್ ಆಗಿದೆ. ಸದ್ಯ ತಂಡಕ್ಕೆ ಎರಡು ಪಂದ್ಯಗಳಿದ್ದು, ಭಾರಿ ಅಂತರದಲ್ಲಿ ಗೆಲ್ಲಬೇಕಿದೆ. ಅದೃಷ್ಟ ಖುಲಾಯಿಸಿದರೆ ಪ್ಲೇ-ಆಫ್‌ಗೇರುವ ಸಾಧ್ಯತೆ ಇದೆ.
Advertisement
ಡೆಲ್ಲಿ 12 ರಲ್ಲಿ 6 ಪಂದ್ಯಗಳನ್ನು ಗೆದ್ದಿದೆ. ತಂಡ 12 ಅಂಕ ಸಂಪಾದಿಸಿದ್ದು, ಪ್ಲೇ-ಆಫ್‌ಗೇರಲು ಉಳಿದಿರುವ ಎರಡೂ ಪಂದ್ಯಗಳನ್ನು ಗೆಲ್ಲಬೇಕು. ಆರ್‌ಸಿಬಿ ವಿರುದ್ಧ ಇಂದು ನಡೆಯುವ ಪಂದ್ಯದಲ್ಲಿ ಸೋತರೆ ಡೆಲ್ಲಿಗೆ ಪ್ಲೇ-ಆಫ್ ಹಾದಿ ಇನ್ನೂ ಕಠಿಣವಾಗಲಿದೆ. ಇದನ್ನೂ ಓದಿ: ಟೆಸ್ಟ್‌ಗೆ ಇಂಗ್ಲೆಂಡ್ ಕ್ರಿಕೆಟ್ ದಂತಕಥೆ ಜೇಮ್ಸ್ ಆಂಡರ್ಸನ್ ನಿವೃತ್ತಿ
ವಿರಾಟ್ ಕೊಹ್ಲಿ ಉತ್ತಮ ಲಯದಲ್ಲಿದ್ದಾರೆ. ಪಂದ್ಯಗಳಲ್ಲಿ ದಾಖಲೆ ಕೂಡ ಬರೆಯುತ್ತಿದ್ದಾರೆ. ತವರಿನಲ್ಲಿ ಕೊಹ್ಲಿ ಆಟವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಕಾತರರಾಗಿದ್ದಾರೆ. ವಿಲ್ ಜಾಕ್ಸ್, ರಜತ್ ಪಾಟೀದಾರ್ ಕೂಡ ನಿರೀಕ್ಷೆ ಮೂಡಿಸಿದ್ದಾರೆ. ಡು ಪ್ಲೆಸಿಸ್ ಮತ್ತು ದಿನೇಶ್ ಕಾರ್ತಿಕ್ ತಂಡದ ಕೈ ಹಿಡಿಯಬೇಕಿದೆ. ಬೌಲರ್‌ಗಳು ಕಳೆದ ನಾಲ್ಕು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರುತ್ತಿದ್ದಾರೆ. ಅದನ್ನೇ ಮುಂದುವರಿಸಿದರೆ ತಂಡಕ್ಕೆ ಸಹಕಾರಿಯಾಗಲಿದೆ.
ಡೆಲ್ಲಿ ತಂಡದಲ್ಲೂ ಜೇಕ್ ಫ್ರೇಸರ್, ಅಭಿಷೇಕ್ ಪೊರೆಲ್ ಮೇಲೆ ಹೆಚ್ಚಿನ ನಿರೀಕ್ಷೆ ಇದೆ. ಬ್ಯಾಟಿಂಗ್ ಸ್ನೇಹಿ ಪಿಚ್‌ನಲ್ಲಿ ಡೆಲ್ಲಿ ಬೌಲರ್‌ಗಳು ಆರ್‌ಸಿಬಿ ಬ್ಯಾಟರ್‌ಗಳನ್ನು ಕಟ್ಟಿಹಾಕಬೇಕಿದೆ. ಇಂದು ಸಂಜೆ 7:30 ಪಂದ್ಯ ನಡೆಯಲಿದೆ.