ಬೆಂಗಳೂರು: 2025ರ ಇಂಡಿಯನ್ ಪ್ರೀಮಿಯರ್ ಲೀಗ್ (IPL 2025) ಮೆಗಾ ಹರಾಜಿಗೂ ಮುನ್ನವೇ ವಿರಾಟ್ ಕೊಹ್ಲಿ (Virat Kohli) ಆರ್‌ಸಿಬಿ ತಂಡದ ಕ್ಯಾಪ್ಟನ್ ಆಗಿ ರೀ ಎಂಟ್ರಿ ಕೊಡಲಿದ್ದಾರೆ ಎಂಬ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು ಎರಚಿದೆ.
Advertisement
ಮಾಜಿ ನಾಯಕ ಫಾಫ್ ಡು ಪ್ಲೆಸಿಸ್ (Faf du Plessis) ಅವರು 2022 ರಿಂದ 2024ರ ವರೆಗೆ ಆರ್‌ಸಿಬಿ ತಂಡವನ್ನು ಮುನ್ನಡೆಸಿದರು. ಎರಡು ಬಾರಿ ಪ್ಲೇ ಆಫ್ ಹಂತ ತಲುಪಿಸಿದ್ದರೂ, ಟ್ರೋಫಿ ಗೆಲ್ಲುವಲ್ಲಿ ವಿಫಲವಾಯಿತು. ಈ ಬಾರಿ ಆರ್‌ಸಿಬಿ ರಿಟೇನ್ ಆಟಗಾರರ ಪಟ್ಟಿಯಿಂದ ಡುಪ್ಲೆಸಿ ಅವರನ್ನು ಹೊರಗಿಟ್ಟ ಬಳಿಕ ಕೊಹ್ಲಿ ನಾಯಕತ್ವ ವಹಿಸಿಕೊಳ್ಳುತ್ತಾರೆ ಎನ್ನಲಾಗಿತ್ತು. ತಂಡದ ಮ್ಯಾನೇಜ್‌ಮೆಂಟ್ ನಾಯಕತ್ವದ ಬದಲಾವಣೆಯ ಬಗ್ಗೆ ಈಗಾಗಲೇ ಚರ್ಚಿಸಿದೆ. ನಾಯಕತ್ವದ ಸ್ಥಾನ ಅಲಂಕರಿಸಲು ಕೊಹ್ಲಿ ಉತ್ಸುಕರಾಗಿದ್ದಾರೆ ಎಂಬ ವದಂತಿ ಹರಿದಾಡಿತ್ತು. ಆದ್ರೆ ಕೋಟ್ಯಂತರ ಅಭಿಮಾನಿಗಳ ಆಸೆಗೆ ಫ್ರಾಂಚೈಸಿ ತಣ್ಣೀರು ಎರಚಿದೆ.
Advertisement
Advertisement
ವದಂತಿಗಳ ಕುರಿತು ಪ್ರತಿಕ್ರಿಯೆ ನೀಡಿರುವ ಆರ್‌ಸಿಬಿಯ ಕ್ರಿಕೆಟ್ ನಿರ್ದೇಶಕ ಮೊ ಬೊಬಾಟ್, ಈ ವಿಷಯದಲ್ಲಿ ಇನ್ನೂ ಯಾವುದೇ ನಿರ್ಧಾರ ತೆಗೆದುಕೊಂಡಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: IPL Retention | ಡುಪ್ಲೆಸಿ ಔಟ್, ಆರ್‌ಸಿಬಿಯಲ್ಲಿ ತ್ರಿಬಲ್ ಸ್ಟಾರ್; ಕೊಹ್ಲಿ ಸಂಭಾವನೆಯಲ್ಲಿ ದಿಢೀರ್ 6 ಕೋಟಿ ಏರಿಕೆ
Advertisement
ಕೊಹ್ಲಿ ಈ ಹಿಂದೆ 2013 ರಿಂದ 2021 ರವರೆಗೆ ಆರ್‌ಸಿಬಿ ನಾಯಕತ್ವ ವಹಿಸಿದ್ದರು. ತಂಡವನ್ನು ನಾಲ್ಕು ಬಾರಿ ಪ್ಲೇ ಆಫ್‌ಗೆ ತಲುಪಿಸುವಲ್ಲಿ ಶ್ರಮಿಸಿದ್ದರು. ಇದೀಗ 18ನೇ ಆವೃತ್ತಿಗೂ ಕೊಹ್ಲಿ ಆರ್‌ಸಿಬಿ ತಂಡವನ್ನೇ ಪ್ರತಿನಿಧಿಸಿದ್ದಾರೆ. ಮುಂದಿನ ಐಪಿಎಲ್‌ಗೆ ಕೊಹ್ಲಿಯನ್ನು ಫ್ರಾಂಚೈಸಿ 21 ಕೋಟಿ ರೂ.ಗಳಿಗೆ ಏರಿಕೆಯಾಗಿದೆ. ಇದನ್ನೂ ಓದಿ: IPL 2025: ಆರ್‌ಸಿಬಿ ಕ್ಯಾಪ್ಟನ್ ಆಗಿ ವಿರಾಟ್ ಕೊಹ್ಲಿ ರೀ ಎಂಟ್ರಿ?
ರಿಟೇನ್ ಆಟಗಾರರು ಯಾರು – ಎಷ್ಟು ಸಂಭಾವನೆ?
ವಿರಾಟ್ ಕೊಹ್ಲಿ – 21 ಕೋಟಿ ರೂ.
ರಜತ್ ಪಾಟೀದಾರ್ – 11 ಕೋಟಿ ರೂ.
ಯಶ್ ದಯಾಳ್ – 5 ಕೋಟಿ ರೂ.