ನೆಲಮಂಗಲ: ಆರ್‌ಸಿಬಿ (RCB) ಸತತ 2ನೇ ಬಾರಿಗೆ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದ್ದು, ಸಂಭ್ರಮಾಚರಣೆ ಮುಗಿಸಿ ಮನೆಗೆ ವಾಪಸ್ ಬರುತ್ತಿದ್ದ ಅಭಿಮಾನಿಯೊಬ್ಬ ಸಾವಿಗೀಡಾಗಿರುವ ಘಟನೆ ನಡೆದಿದೆ.
ಬೆಂಗಳೂರು ಉತ್ತರ (Bengaluru North) ತಾಲೂಕಿನ ಮಾದನಾಯಕನಹಳ್ಳಿ ಲಕ್ಷ್ಮೀಪುರ ಗ್ರಾಮದ ಬಳಿ 2 ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಯುವಕ ಸಾವನ್ನಪ್ಪಿದ್ದಾನೆ. ಮನೋಜ್ (21) ಮೃತ ಯುವಕ. ಇದನ್ನೂ ಓದಿ: ಆರ್‌ಸಿಬಿ ಮುಖ್ಯ ಕೋಚ್ ಆ್ಯಂಡಿ ಫ್ಲವರ್‌ಗೆ ಐಸ್ ಕ್ಯೂಬ್ ಸುರಿದು ಸಂಭ್ರಮಿಸಿದ ಸಾಲ್ಟ್, ಡೇವಿಡ್

ಘಟನೆಯಲ್ಲಿ ಓರ್ವ ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇದನ್ನೂ ಓದಿ: 19 ವರ್ಷ, 19 ಆವೃತ್ತಿ – ಆರ್‌ಸಿಬಿ ಸೋಲು-ಗೆಲುವಿನ ರೋಚಕ ಇತಿಹಾಸ!
ಮೃತ ಮನೋಜ್ ಚಿತ್ರದುರ್ಗ (Chitradurga) ಮೂಲದ ನಿವಾಸಿಯಾಗಿದ್ದು, ಮಾಕಳಿಯ ಹೆಗ್ಗಡದೇವನಪುರದಲ್ಲಿ ರೂಮ್ ಮಾಡಿಕೊಂಡು ವಾಸವಿದ್ದ. ಖಾಸಗಿ ಕಂಪನಿಯಲ್ಲಿ ಮೆಷಿನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ. ಮ್ಯಾಚ್ ಮುಗಿಸಿಕೊಂಡು ವಾಪಸ್ ತನ್ನ ರೂಮಿಗೆ ಬರುವಾಗ ಅಪಘಾತದಲ್ಲಿ ಸಾವನ್ನಪ್ಪಿದ್ದಾನೆ.
ಈ ಘಟನೆ ಸಂಬಂಧ ಚಿಕ್ಕಬಾಣಾವರ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಯುಡಿಆರ್ ಪ್ರಕರಣ ದಾಖಲಾಗಿದೆ. ಇನ್ನೂ ಮೃತದೇಹವನ್ನು ನೆಲಮಂಗಲ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆಗಾಗಿ ರವಾನೆ ಮಾಡಲಾಗಿದೆ. ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ. ಇದನ್ನೂ ಓದಿ: ಆರ್‌ಸಿಬಿ ಚಾಂಪಿಯನ್ – 2027ರ ಐಪಿಎಲ್‌ಗೂ ಇದೇ ತಂಡ?
