ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB Womens) ತಂಡವು 2025ರ ಮಹಿಳಾ ಪ್ರೀಮಿಯರ್ ಲೀಗ್‌ನ (WPL 2025) ಮೊದಲ ಪಂದ್ಯದಲ್ಲೇ ಗುಜರಾತ್ ಜೈಂಟ್ಸ್ ವಿರುದ್ಧ ಭರ್ಜರಿ ಜಯ ಸಾಧಿಸುವ ಮೂಲಕ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ. ಆರಂಭಿಕ ಪಂದ್ಯದಲ್ಲೇ ದಾಖಲೆಯ ಚೇಸಿಂಗ್‌ನೊಂದಿಗೆ ಪ್ರಶಸ್ತಿ ಉಳಿಸಿಕೊಳ್ಳುವತ್ತ ಮೊದಲ ಹೆಜ್ಜೆ ಇಟ್ಟಿದೆ.
Advertisement
ಈ ನಡುವೆಯೇ ಆರ್‌ಸಿಬಿಗೆ ಕೊಂಚ ಆಘಾತವೂ ಎದುರಾಗಿದೆ. ಕಳೆದ ಬಾರಿ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಆರ್‌ಸಿಬಿ ಟ್ರೋಫಿ ಗೆಲ್ಲಲು ಪ್ರಮುಖ ಪಾತ್ರ ವಹಿಸಿದ್ದ ಯುವ ಆಟಗಾರ್ತಿ, ಕನ್ನಡತಿ ಶ್ರೇಯಾಂಕ ಪಾಟೀಲ್ (Shreyanka Patil) ಈ ಬಾರಿ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ ಎಂದು ಹೇಳಲಾಗ್ತಿದೆ. ಇದನ್ನೂ ಓದಿ: ಜಿಯೋ ಹಾಟ್‌ಸ್ಟಾರ್ ವಿಲೀನ | ಇನ್ಮುಂದೆ ಐಪಿಎಲ್ ಉಚಿತ ವೀಕ್ಷಣೆ ಇಲ್ಲ- ಎರಡನ್ನೂ ಸಬ್‌ಸ್ಕ್ರೈಬ್ ಮಾಡಿದವರ ಕಥೆ ಏನು?
Advertisement
Advertisement
ಯೆಸ್.. ಕನ್ನಡತಿ ಶ್ರೇಯಾಂಕಾ ಪಾಟೀಲ್ ಗಾಯದ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಇದೇ ಕಾರಣಕ್ಕಾಗಿ ವೆಸ್ಟ್ ಇಂಡೀಸ್ ಹಾಗೂ ಐರ್ಲೆಂಡ್ ವಿರುದ್ಧದ ಟೂರ್ನಿಗೂ ಅಲಭ್ಯರಾಗಿದ್ದರು. ಮಹಿಳಾ ಪ್ರೀಮಿಯರ್ ಲೀಗ್ ಶುರುವಾಗುವ ಹೊತ್ತಿಗೆ ಶ್ರೇಯಾಂಕ ಫಿಟ್ ಆಗಲಿದ್ದಾರೆ ಎಂದು ಹೇಳಲಾಗ್ತಿತ್ತು. ಆದ್ರೆ ಗುಜರಾತ್ ಜೈಂಟ್ಸ್ ವಿರುದ್ಧ ನಡೆದ ಉದ್ಘಾಟನಾ ಪಂದ್ಯಕ್ಕೆ ಅಲಭ್ಯರಾಗುವ ಮೂಲಕ ಅವರು ಸಂಪೂರ್ಣ ಫಿಟ್ ಆಗಿಲ್ಲ ಎಂಬುದು ಗೊತ್ತಾಗಿದೆ. ಇದನ್ನೂ ಓದಿ: Champions Trophy | ವಿಜೇತ ತಂಡಕ್ಕೆ ಸಿಗಲಿದೆ 19.45 ಕೋಟಿ – ಗೆದ್ದ ಪ್ರತಿ ಪಂದ್ಯಕ್ಕೂ ಸಿಗುತ್ತೆ ಹಣ
Advertisement
ಹೀಗಾಗಿ ಶ್ರೇಯಾಂಕಾ ಪಾಟೀಲ್ ಟೂರ್ನಿಯಿಂದಲೇ ಹೊರಗುಳಿದಿದ್ದಾರೆ ಎನ್ನಲಾಗುತ್ತಿದೆ. ಶ್ರೇಯಾಂಕ ಬದಲಿಗೆ ಸ್ನೇಹ್ ರಾಣಾ ಸೇರ್ಪಡೆಗೊಳ್ಳುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: WPL 2025 | ಗುಜರಾತ್ ವಿರುದ್ಧ ರಿಚಾ ಘರ್ಜನೆ – ಆರ್‌ಸಿಬಿ ಗೆಲುವಿನ ಶುಭಾರಂಭ