ಜೈಪುರ: ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ವೇಗಿ ಯಶ್ ದಯಾಳ್‌ಗೆ (Yash Dayal) ವಿರುದ್ಧ ಪೋಕ್ಸೋ ಪ್ರಕರಣ (POCSO Case)ಲಾಗಿದೆ.
ಹೌದು. 2025ರ ಐಪಿಎಲ್ (IPL 2025) ಮುಕ್ತಾಯಗೊಂಡ ಕೆಲ ದಿನಗಳಿಂದ ಸ್ಟಾರ್ ವೇಗಿಗೆ ಮೇಲಿಂದ ಮೇಲೆ ಸಂಕಷ್ಟ ಎದುರಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಈ ಸಂಬಂಧ ಕೇಸ್ ಕೂಡ ದಾಖಲಾಗಿತ್ತು. ಇದೀಗ ಅಪ್ರಾಪ್ತೆ ಮೇಲೆ ಅತ್ಯಾಚಾರ (Minor Girl Rape) ಎಸಗಿರುವ ಆರೋಪ ಮೇಲೆ ಪೋಕ್ಸೋ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಹಲವು ಮಹಿಳೆಯರ ಜೊತೆ ಅಫೇರ್ ಇಟ್ಕೊಂಡಿದ್ದ – ಯಶ್ ದಯಾಳ್ ವಿರುದ್ಧ ಮಹಿಳೆಯಿಂದ ಮತ್ತೊಂದು ಆರೋಪ
ಬಾಲಕಿಯೊಬ್ಬಳ ಮೇಲೆ 2 ವರ್ಷಗಳಿಂದ ಅತ್ಯಾಚಾರ ಎಸಗಿರುವ ಆರೋಪದ ಮೇಲೆ ಜೈಪುರದ ಸಂಗನೇರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಭಾವನಾತ್ಮಕವಾಗಿ ನನ್ನನ್ನ ಕಟ್ಟಿಹಾಕಿ, ಕ್ರಿಕೆಟ್ ವೃತ್ತಿ ಜೀವನದಲ್ಲಿ ಉತ್ತಮ ಅವಕಾಶ ಕೊಡಿಸುವುದಾಗಿ ಆಮಿಷ ಒಡ್ಡಿದ್ದಾನೆ. ಆಮಿಷ ಒಡ್ಡಿ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ದೂರಿನಲ್ಲಿ ತಿಳಿಸಿದ್ದಾಳೆ. ಇದನ್ನೂ ಓದಿ: ಆರ್‌ಸಿಬಿ ಆಟಗಾರ ಯಶ್ ದಯಾಳ್ ವಿರುದ್ಧ FIR – ಸಂತ್ರಸ್ತೆ ಹೇಳಿಕೆ ದಾಖಲಿಸಿಕೊಂಡ ಬಳಿಕ ಪೊಲೀಸರ ಕ್ರಮ
ಹೋಟೆಲ್‌ನಲ್ಲಿ ಮೊದಲ ಬಾರಿಗೆ ಲೈಂಗಿಕ ದೌರ್ಜನ್ಯ
ಕ್ರಿಕೆಟ್ ವೃತ್ತಿಜೀವನದ ಬಗ್ಗೆ ಸಲಹೆ ನೀಡುವುದಾಗಿ, ಉತ್ತಮ ಭವಿಷ್ಯ ಕಲ್ಪಿಸುವುದಾಗಿ ಹೇಳಿದ್ದ ದಯಾಳ್ ಜೈಪುರದ ಸೀತಾಪುರ ಹೋಟೆಲ್‌ಗೆ ಕರೆದಿದ್ದ. ಅಲ್ಲಿ ಮೊದಲ ಬಾರಿಗೆ ನನ್ನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. ಪ್ರಕರಣ ನಡೆದಾಗ ನನಗೆ 17 ವರ್ಷ ವಯಸ್ಸಾಗಿತ್ತು. ಅಲ್ಲಿಂದ 2 ವರ್ಷಗಳ ಕಾಲ ಪದೇ ಪದೇ ನನ್ನ ಮೇಲೆ ದೌರ್ಜನ್ಯ ಎಸಗಿದ್ದಾನೆ ಎಂದು ಸಂತ್ರಸ್ತೆ ಹೇಳಿಕೊಂಡಿದ್ದಾಳೆ. ಈ ಹಿನ್ನೆಲೆ ಪೋಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಕೆಲ ದಿನಗಳ ಹಿಂದಷ್ಟೇ ಗಾಜಿಯಾಬಾದ್‌ನ ಯುವತಿಯೊಬ್ಬಳು ಯಶ್ ದಯಾಳ್ ವಿರುದ್ಧ ಲೈಂಗಿಕ ದೌರ್ಜನ್ಯ ಎಸಗಿರುವುದಾಗಿ ಆರೋಪಿಸಿ, ದೂರು ದಾಖಲಿಸಿದ್ದರು. ಎಫ್‌ಐಆರ್ ಕೂಡ ದಾಖಲಾಗಿತ್ತು. ಈ ನಡುವೆ ಅಲಹಾಬಾದ್ ಹೈಕೋರ್ಟ್ ದಯಾಳ್ ಬಂಧನಕ್ಕೆ ತಡೆ ನೀಡಿತ್ತು. ಇದಾದ ಕೆಲ ದಿನಗಳಲ್ಲೇ ಪೋಕ್ಸೋ ಕೇಸ್ ದಾಖಲಾಗಿದೆ. ಇದನ್ನೂ ಓದಿ: ಆರ್‌ಸಿಬಿ ಸ್ಟಾರ್ ವೇಗಿ ಯಶ್ ದಯಾಳ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ – FIR ದಾಖಲು