ಆರ್‌ಸಿಬಿ ವಿಜಯೋತ್ಸವ – ಟಿಕೆಟ್‌, ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿಗೆ ಎಂಟ್ರಿ

Public TV
1 Min Read
RCB Victory Celebration Entry to Chinnaswamy stadium is only allowed to those with tickets and passes

ಬೆಂಗಳೂರು: ಅಧಿಕೃತ ಟಿಕೆಟ್‌ ಮತ್ತು ಪಾಸ್‌ ಹೊಂದಿದವರಿಗೆ ಮಾತ್ರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ (Chinnaswamy Stadium) ಆರ್‌ಸಿಬಿ (RCB) ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಲು ಅನುಮತಿ ನೀಡಲಾಗುತ್ತದೆ.

ಚಿನ್ನಸ್ವಾಮಿ ಕ್ರೀಡಾಂಗಣದತ್ತ ಸಾಕಷ್ಟು ಸಂಖ್ಯೆಯಲ್ಲಿ ಅಭಿಮಾನಿಗಳು ಬರುತ್ತಿರುವ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸರು ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಹೇಳಿಕೆಯಲ್ಲಿ ಏನಿದೆ?
ಕೆಎಸ್‌ಸಿಎ ವತಿಯಿಂದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಈ ದಿನ ಸಂಜೆ 5 ಗಂಟೆಗೆ ಆರ್‌ಸಿಬಿ ತಂಡದ ಎಲ್ಲಾ ಆಟಗಾರರಿಗೆ ವಿಶೇಷ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ. ಈ ಸಮಾರಂಭಕ್ಕೆ ಅಧಿಕೃತ ಟಿಕೆಟ್‌ ಮತ್ತು ಪಾಸ್ ಹೊಂದಿದವರಿಗೆ ಮಾತ್ರ ಪ್ರವೇಶವನ್ನು ಕಲ್ಪಿಸಲಾಗಿದೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಿಯಮಿತ ವಾಹನಗಳ ಪಾರ್ಕಿಂಗ್ ವ್ಯವಸ್ಥೆ ಇರುವುದರಿಂದ ಸಮಾರಂಭಕ್ಕೆ ಆಗಮಿಸುವವರು ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋವನ್ನು ಬಳಸಬೇಕೆಂದು ಪೊಲೀಸರು ಜನರಲ್ಲಿ ಮನವಿ ಮಾಡಿದ್ದಾರೆ.

Share This Article