ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮತ್ತು ಚೆನ್ನೈ ಸೂಪರ್ ಕಿಂಗ್ಸ್ (CSK) ನಡುವಿನ ಪಂದ್ಯನ್ನು ಮದುವೆ (Marriage) ಮನೆಯಲ್ಲೇ ನೇರಪ್ರಸಾರ ಮಾಡಲಾಗಿದೆ.
ಆರ್‌ಸಿಬಿ ಮತ್ತು ಸಿಎಸ್‌ಕೆ ನಡುವಿನ ಪಂದ್ಯ ಮದಗಜಗಳ ಕಾಳಗ ಇದ್ದಂತೆ. ಎರಡೂ ತಂಡಗಳಿಗೆ ಹೆಚ್ಚಿನ ಸಂಖ್ಯೆಯ ಅಭಿಮಾನಿಗಳಿದ್ದಾರೆ. ಈ ಕಾರಣಕ್ಕೆ ಬಂದ ಆರ್‌ಸಿಬಿ ಅಭಿಮಾನಿಗಳು ಪಂದ್ಯ ವೀಕ್ಷಿಸುವಂತೆ ಮಾಡಲು ಆರತಕ್ಷತೆ ಕಾರ್ಯಕ್ರಮದಲ್ಲೇ ದೊಡ್ಡ ಸ್ಕ್ರೀನ್‌ನಲ್ಲಿ ಪಂದ್ಯವನ್ನು ನೇರ ಪ್ರಸಾರ ಮಾಡಲಾಗಿತ್ತು ಇದನ್ನೂ ಓದಿ: ಚೆನ್ನೈ ಎಡವಟ್ಟಿನಿಂದ ಆರ್‌ಸಿಬಿಗೆ ಗೆಲುವು – ಬಿಸಿ ಬಿಸಿ ಚರ್ಚೆಗೆ ಗ್ರಾಸವಾದ DRS
ಶನಿವಾರದ ಪಂದ್ಯ ಅಂತೂ ಕೊನೆಯ ಎಸೆತವರೆಗೂ ತುದಿಗಾಲಿನಲ್ಲಿ ನಿಲ್ಲಿಸಿತ್ತು. ಕೊನೆಯ ಓವರ್‌ನಲ್ಲಿ ಪಂದ್ಯ ಗೆಲ್ಲಲು 15 ರನ್ ಬೇಕಿದ್ದರೆ ಕೊನೆಯ ಎಸೆತದಲ್ಲಿ ಪಂದ್ಯ ಗೆಲ್ಲಲು ಚೆನ್ನೈಗೆ 4 ರನ್‌ಗಳ ಅಗತ್ಯವಿತ್ತು. ಯಶ್ ದಯಾಳ್ ಎಸೆದ ಕೊನೆಯ ಎಸೆತದಲ್ಲಿ ಶಿವಂ ದುಬೆ 1 ರನ್ ಓಡುತ್ತಿದ್ದಂತೆ ಹಾಲ್‌ನಲ್ಲಿದ್ದ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸಿ ಜೈ ಆರ್‌ಸಿಬಿ ಎಂದು ಘೋಷಣೆ ಕೂಗಿದರು. ಸಾಮಾಜಿಕ ಜಾಲತಾಣದಲ್ಲಿ ಈ ವಿಡಿಯೋ ಈಗ ಹೆಚ್ಚು ಹರಿದಾಡುತ್ತಿದೆ.
View this post on Instagram
ಚೆನ್ನೈ ವಿರುದ್ಧದ ಪಂದ್ಯದಲ್ಲಿ ಆರ್‌ಸಿಬಿ ರೋಚಕ 2 ರನ್‌ಗಳ ಜಯ ಸಾಧಿಸಿದೆ. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ 5 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿತು. ಕಠಿಣ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ 5 ವಿಕೆಟ್ ನಷ್ಟಕ್ಕೆ 211 ರನ್ ಹೊಡೆದು ರೋಚಕ ಸೋಲನ್ನು ಅನುಭವಿಸಿತು. ಇದನ್ನೂ ಓದಿ: IPL 2025 | ಆರ್‌ಸಿಬಿಗೆ 2 ರನ್‌ಗಳ ರೋಚಕ ಜಯ – 16 ವರ್ಷಗಳ ಬಳಿಕ ಹೊಸ ಮೈಲುಗಲ್ಲು
ಐಪಿಎಲ್ ಇತಿಹಾಸದಲ್ಲಿ ಆರ್‌ಸಿಬಿ ಇಲ್ಲಿಯವರೆಗೆ ಒಂದೇ ಆವೃತ್ತಿಯಲ್ಲಿ ಎರಡು ಬಾರಿ ಚೆನ್ನೈ ವಿರುದ್ಧ ಗೆಲುವು ಸಾಧಿಸಿರಲಿಲ್ಲ. ಮಾರ್ಚ್ 28 ರಂದು ನಡೆದ ಚೆನ್ನೈನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಆರ್‌ಸಿಬಿ 50 ರನ್‌ಗಳ ಜಯ ಸಾಧಿಸಿತ್ತು. ಆರ್‌ಸಿಬಿ 7 ವಿಕೆಟ್ ನಷ್ಟಕ್ಕೆ 196 ರನ್ ಹೊಡೆದರೆ ಚೆನ್ನೈ 8 ವಿಕೆಟ್ ನಷ್ಟಕ್ಕೆ 146 ರನ್ ಹೊಡೆದಿತ್ತು.