ಬೆಂಗಳೂರು: ಆರ್‌ಸಿಬಿ vs ಜಿಟಿ (RCB vs GT) ನಡುವಿನ ಬಹುನಿರೀಕ್ಷಿತ ಫೈನಲ್ ಪಂದ್ಯಕ್ಕೆ ಕ್ಷಣಗಣನೆ ಬಾಕಿಯಿದೆ. ಈ ಹೊತ್ತಿನಲ್ಲೇ ಸಿಲಿಕಾನ್ ಸಿಟಿಯಲ್ಲಿ ಸೆಲಬ್ರೇಷನ್ ಮಾಡಲು ಕಾಯುತ್ತಿದ್ದ ಅಭಿಮಾನಿಗಳಿಗೆ ಬೆಂಗಳೂರು ಪೊಲೀಸರು (Bengaluru Police) ಶಾಕ್ ಕೊಟ್ಟಿದ್ದಾರೆ.
ನಗರದ ಪ್ರಮುಖ ಫ್ಲೈಓವರ್‌ಗಳನ್ನು (Bengaluru Flyovers) ರಾತ್ರಿ 11 ಗಂಟೆ ಬಳಿಕ ಬಂದ್ ಮಾಡುವಂತೆ ಸೂಚನೆ ನೀಡಲಾಗಿದೆ. ಇಂದು (ಮೇ 31) ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆ ತನಕ ಬಂದ್ ಮಾಡಲು ಸೂಚಿಸಲಾಗಿದೆ. ಇದನ್ನೂ ಓದಿ: IPL Final | ಚಾಂಪಿಯನ್, ರನ್ನರ್‌ಅಪ್ ತಂಡಕ್ಕೆ ಸಿಗುವ ಬಹುಮಾನದ ಮೊತ್ತ ಎಷ್ಟು?

ಈಗಾಗಲೇ ಎಲೆಕ್ಟ್ರಾನಿಕ್ ಸಿಟಿಯ ಎಲಿವೇಟೆಡ್ ಫ್ಲೈಓವರ್, ರಾಗಿಗುಡ್ಡ ಡಬಲ್ ಡೆಕ್ಕರ್ ಫ್ಲೈಓವರ್ ಬಂದ್ ಮಾಡಲು ಸೂಚಿಸಿಲಾಗಿದೆ. ಆಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪಂದ್ಯ ವೀಕ್ಷಿಸಲು ಎಲ್ಲೆಲ್ಲಿ ಸ್ಕ್ರೀನ್ ಅಳವಡಿಸಿದ್ದಾರೆ. ಯಾವ ಜಾಗಗಳಲ್ಲಿ ಹೆಚ್ಚು ಜನ ಸೇರುತ್ತಾರೆ ಅನ್ನೋ ಬಗ್ಗೆ ಪರಿಶೀಲನೆ ಕೂಡ ನಡೆಸಲಾಗುತ್ತಿದೆ. ಅಂತಹ ಜಾಗಗಳನ್ನ ಪಟ್ಟಿ ಮಾಡಿ ವಿಶೇಷ ನಿಗಾ ವಹಿಸಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಲು ಪೊಲೀಸ್ ಇನ್ಸ್‌ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ. ಇದನ್ನೂ ಓದಿ: RCB vs GT ಫೈನಲ್ ಫೈಟ್ – ಮಳೆಯಿಂದ ಇಂದು ಪಂದ್ಯ ರದ್ದಾದ್ರೆ ಮುಂದೇನು?
