ಮುಂಬೈ: ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡದ ಜಯದ ಓಟ ಮುಂದುವರಿದಿದೆ. ಶನಿವಾರ ನಡೆದ ಪಂದ್ಯದಲ್ಲಿ ನಾಯಕಿ ಸ್ಮೃತಿ ಮಂಧಾನ, ಜಾರ್ಜಿಯಾ ವೋಲ್ ಅರ್ಧಶತಕಗಳ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿದೆ.
ಮುಂಬೈನ ಡಿವೈ ಪಾಟೀಲ ಕ್ರೀಡಾಂಗಣದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್‌ಗಳಲ್ಲಿ 166 ರನ್‌ಗಳಿಗೆ ಆಲೌಟ್ ಆಯಿತು. ಗುರಿ ಬೆನ್ನಟ್ಟಿದ ಆರ್‌ಸಿಬಿ 18.2 ಓವರ್‌ಗಳಲ್ಲೇ 2 ವಿಕೆಟ್ ನಷ್ಟಕ್ಕೆ 169 ರನ್ ಬಾರಿಸಿ ಗೆಲುವು ಸಾಧಿಸಿತು.

ಸೆಂಚುರಿ ಜಸ್ಟ್ ಮಿಸ್
ಚೇಸಿಂಗ್ ಆರಂಭಿಸಿದ ಆರ್‌ಸಿಬಿ ಪರ ನಾಯಕಿ ಮಂಧಾನ ಸ್ಫೋಟಕ ಬ್ಯಾಟಿಂಗ್ ನಡೆದ ಮಂಧಾನ ಕೇವಲ 4 ರನ್‌ಗಳಿಂದ ಶತಕ ವಂಚಿತರಾದರು. ಈ ಮೂಲಕ ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ಚೊಚ್ಚಲ ಶತಕ ಸಿಡಿಸುವ ಅವಕಾಶ ಕಳೆದುಕೊಂಡರು. ಇದನ್ನೂ ಓದಿ: Indore Crisis | 3 ಲಕ್ಷ ರೂ. ಮೌಲ್ಯದ ನೀರು ಶುದ್ಧೀಕರಣ ಯಂತ್ರ ತಂದ ಕ್ಯಾಪ್ಟನ್ ಗಿಲ್

ಮಂಧಾನ 61 ಎಸೆತಗಳಲ್ಲಿ 13 ಬೌಂಡರಿ, 3 ಸಿಕ್ಸರ್ ಸಹಿತ 96 ರನ್ ಚಚ್ಚಿದ್ರೆ, ಜಾರ್ಜಿಯಾ ವೋಲ್ 42 ಎಸೆತಗಳಲ್ಲಿ ಅಜೇಯ 54 ರನ್ (5 ಬೌಂಡರಿ, 2 ಸಿಕ್ಸರ್), ರಿಚಾ ಘೋಷ್ 7 ರನ್, ಗ್ರೇಸ್ ಹ್ಯಾರಿಸ್ 1 ರನ್ ಗಳಿಸಿದ್ರು. ಇದನ್ನೂ ಓದಿ: RCB ಅಭಿಮಾನಿಗಳಿಗೆ ಗುಡ್ ನ್ಯೂಸ್ – ಚಿನ್ನಸ್ವಾಮಿಯಲ್ಲಿ ಪಂದ್ಯ ನಡೆಸಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಡೆಲ್ಲಿ ಪರ ಶಫಾಲಿ ವರ್ಮಾ ಏಕಾಂಗಿ ಹೋರಾಟ ನಡೆಸಿದ್ರು. ಶೆಫಾಲಿ 62 ರನ್, ಲೂಸಿ ಹ್ಯಾಮಿಲ್ಟನ್ 36 ರನ್, ಸ್ನೇಹ್ ರಾಣಾ 22 ರನ್ ಗಳಿಸಿದ್ದು ಬಿಟ್ಟರೆ, ಉಳಿದೆಲ್ಲರೂ ಅಲ್ಪ ಮೊತ್ತಕ್ಕೆ ಔಟಾದರು.

