ಬೆಂಗಳೂರು: ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ (Chinnaswamy Stadium) ಸೋಮವಾರ ನಡೆದ ಹೈವೋಲ್ಟೇಜ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ವಿರುದ್ಧ ಆರ್‌ಸಿಬಿ (RCB) ಸೋಲನುಭವಿಸಿದೆ. ಈ ವೇಳೆ ಅಲ್ಲಿದ್ದ ಆರ್‌ಸಿಬಿ ಅಭಿಮಾನಿಯೊಬ್ಬಳು ಅಳುತ್ತಿರುವ ವೀಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಐಪಿಎಲ್ ಸಮಯದಲ್ಲಿ ಅಪರಿಚಿತ ವ್ಯಕ್ತಿಗಳು ರಾತ್ರೋರಾತ್ರಿ ಫೇಮಸ್ ಆಗುವುದು ಇತ್ತೀಚಿನ ದಿನಗಳಲ್ಲಿ ಸಾಮಾನ್ಯವಾಗಿದೆ. ಈ ರೀತಿಯ ಘಟನೆ ಬೆಂಗಳೂರಿನ (Bengaluru) ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ನಡೆದಿದೆ. ಅಭಿಮಾನಿಯೊಬ್ಬಳು (Fan Girl) ಆರ್‌ಸಿಬಿ ಸೋತ ನಂತರ ಕಿವಿ ಮತ್ತು ಮುಖವನ್ನು ಮುಚ್ಚಿಕೊಂಡು ಕಣ್ಣೀರು ಹಾಕಿದ್ದಾಳೆ. ಈ ವೀಡಿಯೋ ಕ್ಯಾಮಾರಾದಲ್ಲಿ ಸೆರೆಯಾಗಿದ್ದು, ಇದೀಗ ಟ್ವಿಟ್ಟರ್‌ನಲ್ಲಿ ಹರಿದಾಡುತ್ತಿದೆ.
Advertisement
Most satisfying moment is to see RCB fans crying. ???????????? Peak RCB
RCB = Chokers, Chokers = Haarcb#RCBvsLSG #ViratKohli #LSGvRCBpic.twitter.com/JQS26tTJCu
— Daddy ???????? (@papa_b0lte_) April 10, 2023
Advertisement
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕೊಹ್ಲಿ, ಗ್ಲೇನ್ ಮ್ಯಾಕ್ಸ್‌ವೆಲ್, ಫಾಫ್ ಡುಪ್ಲೆಸಿಸ್ ಅವರ ಭರ್ಜರಿ ಬ್ಯಾಟಿಂಗ್ ಹೊರತಾಗಿಯೂ, ನಿಕೋಲಸ್ ಪೂರನ್, ಮಾರ್ಕಸ್ ಸ್ಟೋಯ್ನಿಸ್ ಬ್ಯಾಟಿಂಗ್ ಅಬ್ಬರಕ್ಕೆ ಆರ್‌ಸಿಬಿ ತಂಡ ಮಕಾಡೆ ಮಲಗಿತು. ಈ ಮೂಲಕ ತವರಿನಲ್ಲೇ ಸೋತು ತೀವ್ರ ಮುಖಭಂಗ ಅನುಭವಿಸಿದ್ದು, ಐಪಿಎಲ್‍ನಲ್ಲಿ ಸತತ 2 ಪಂದ್ಯಗಳನ್ನು ಸೋತಿದೆ.
Advertisement
Advertisement
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್‌ಸಿಬಿ ತಂಡ 20 ಓವರ್‌ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಕಲೆಹಾಕಿತು. 213 ರನ್‍ಗಳ ಬೃಹತ್ ಮೊತ್ತದ ಗುರಿ ಬೆನ್ನತ್ತಿದ್ದ ಲಕ್ನೋ ಸೂಪರ್ ಜೈಂಟ್ಸ್ (Lucknow Super Giants) ತಂಡವು ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ನಷ್ಟಕ್ಕೆ 213 ರನ್ ಗಳಿಸಿ ರೋಚಕ ಜಯ ಸಾಧಿಸಿತು.
Virat kolhi is not a player ????,he is emotion for the RCB fans????????????, After the loss RCB match,then fans crying ????????????,@imVkohli pic.twitter.com/cVlfLguqDl
— CSK fans ❣️❣️ (@Cskfans34) April 11, 2023
ರಣರೋಚಕ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದ ಆರ್‌ಸಿಬಿ ತಂಡದ ನಾಯಕ ಫಾಫ್ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ನಡೆಸಿದರು. ಸಿಕ್ಸರ್, ಬೌಂಡರಿ ಸಿಡಿಸುತ್ತಾ ಅಭಿಮಾನಿಗಳಿಗೆ ರಸದೌತಣ ನೀಡಿದರು. ಪ್ರತಿ ಹೊಡೆತವನ್ನೂ ಎಂಜಾಯ್ ಮಾಡಿದ ಅಭಿಮಾನಿಗಳು ಕೊಹ್ಲಿ, ಕೊಹ್ಲಿ, ಆರ್‌ಸಿಬಿ, ಆರ್‌ಸಿಬಿ ಎಂದು ಆಟಗಾರರನ್ನ ಹುರಿದುಂಬಿಸಿದರು. ಪ್ರತಿ ಬೌಂಡರಿ, ಸಿಕ್ಸರ್‌ಗಳನ್ನು ಎಂಜಾಯ್ ಮಾಡುತ್ತಾ ಹುಚ್ಚೆದ್ದು ಕುಣಿದರು. ಇದನ್ನೂ ಓದಿ: ಚಿನ್ನಸ್ವಾಮಿಯಲ್ಲಿ 115 ಮೀಟರ್ ಸಿಕ್ಸ್ – ಡುಪ್ಲೆಸಿಸ್ ಈಗ ಸಿಕ್ಸರ್ ವೀರ ಅಂದ್ರು ಫ್ಯಾನ್ಸ್
ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ನಿಧಾನಗತಿಯ ಓವರ್ ರೇಟ್ ಕಾಯ್ದುಕೊಂಡಿದ್ದಕ್ಕಾಗಿ ಆರ್‌ಸಿಬಿಗೆ ದಂಡ ವಿಧಿಸಲಾಗಿದೆ. ಈ ಮೂಲಕ ನಾಯಕ ಫಾಫ್ ಡು ಪ್ಲೆಸಿಸ್‍ಗೆ 12 ಲಕ್ಷ ರೂ. ದಂಡ ವಿಧಿಸಲಾಗಿದೆ. ಇದನ್ನೂ ಓದಿ: ಸಿಕ್ಸರ್, ಬೌಂಡರಿಗಳಿಂದಲೇ 50 ರನ್ – ಇಬ್ಬರು ವಿಶೇಷ ವ್ಯಕ್ತಿಗಳಿಗೆ ಅರ್ಧಶತಕ ಅರ್ಪಿಸಿದ ಪೂರನ್