– ಇಂಡಿಗನತ್ತ ಗ್ರಾಮದಲ್ಲಿ ಇವಿಎಂ, ಪೀಠೋಪಕರಣ ಧ್ವಂಸ ಮಾಡಿದ್ದ ಸ್ಥಳೀಯರು
ಚಾಮರಾಜನಗರ: ಲೋಕಸಭಾ ಚುನಾವಣೆಗೆ ಜನರಿಂದ ಮತದಾನ ಬಹಿಷ್ಕಾರಕ್ಕೆ ಒಳಗಾಗಿದ್ದ ಹನೂರು (Hanur) ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಗೆ ಏ.29 ರಂದು ಮರು ಮತದಾನ ನಡೆಯಲಿದೆ.
Advertisement
ಮತಗಟ್ಟೆ ಸಂಖ್ಯೆ 146 ಕ್ಕೆ ಸೋಮವಾರ ಬೆಳಗ್ಗೆ 7 ರಿಂದ ಸಂಜೆ 6 ಗಂಟೆ ವರೆಗೂ ಮರು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಶುಕ್ರವಾರ ಸ್ಥಳೀಯ ಜನರ ಗಲಾಟೆಯಿಂದಾಗಿ ಮತದಾನಕ್ಕೆ ಅಡ್ಡಿಯಾಗಿತ್ತು. ಇದನ್ನೂ ಓದಿ: ಚಾಮರಾಜನಗರದಲ್ಲಿ ಗ್ರಾಮಸ್ಥರಿಂದ ದಾಂಧಲೆ, ಇವಿಎಂ ಧ್ವಂಸ
Advertisement
Advertisement
ಶುಕ್ರವಾರ ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಿತು. ಆದರೆ ಹನೂರು ತಾಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಮತದಾನ ಬಹಿಷ್ಕರಿಸಿದ್ದ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದರು. ಅಲ್ಲದೇ ಮತಗಟ್ಟೆಯಲ್ಲಿದ್ದ ಇವಿಎಂ ಮತ್ತು ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದರು. ಅಧಿಕಾರಿಗಳು ಮನವೊಲಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಗ್ರಾಮದಲ್ಲಿ ಗದ್ದಲ ಸೃಷ್ಟಿಸಲಾಗಿತ್ತು. ಇದರಿಂದ ಮತದಾನ ನಡೆದಿರಲಿಲ್ಲ.
Advertisement
ಮೂಲಭೂತ ಸೌಕರ್ಯ ಕೊರತೆಯಿಂದ ಮಹದೇಶ್ವರ ಬೆಟ್ಟ (Mahadeshwara Hill) ವ್ಯಾಪ್ತಿಯ 5 ಗ್ರಾಮಗಳ ಗ್ರಾಮಸ್ಥರು ಮತದಾನದಿಂದ ದೂರ ಉಳಿದಿದ್ದರು. ಇಂಡಿಗನತ್ತ, ತೇಕಣೆ, ಮೆಂದಾರೆ ಹಾಗೂ ತುಳಸೀಕೆರೆ ಗ್ರಾಮಗಳಲ್ಲಿ ಮತದಾನ ಬಹಿಷ್ಕರಿಸಿದ್ದಾರೆ. ಗ್ರಾಮದಲ್ಲಿ ಮೂಲಭೂತ ಸೌಕರ್ಯಗಳಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಇದನ್ನೂ ಓದಿ: ಮೂಲಭೂತ ಸೌಕರ್ಯ ಕೊರತೆ ಆರೋಪ – ಮಹದೇಶ್ವರ ಬೆಟ್ಟ ವ್ಯಾಪ್ತಿಯ 5 ಗ್ರಾಮಗಳಲ್ಲಿ ಮತದಾನ ಬಹಿಷ್ಕಾರ