ವಾಷಿಂಗ್ಟನ್: ನೆರೆಯ ಭಾರತಕ್ಕೆ (India) ಒದಗಿಸುವ ದರದಲ್ಲಿ ರಷ್ಯಾದಿಂದ (Russia) ಇಂಧನವನ್ನು (Fuel) ಖರೀದಿಸಲು ತಮ್ಮ ದೇಶ ಸಿದ್ಧವಾಗಿದೆ ಎಂದು ಪಾಕಿಸ್ತಾನದ (Pakistan) ಹಣಕಾಸು ಸಚಿವ ಇಶಾಕ್ ದಾರ್ (Ishaq Dar) ಹೇಳಿದ್ದಾರೆ.
ದೇಶದ ನೂತನ ಹಣಕಾಸು ಸಚಿವರಾಗಿರುವ ಇಶಾಕ್ ದಾರ್ ಅವರು ಅಮೆರಿಕಗೆ ಅಧಿಕೃತ ಭೇಟಿಯ ಸಂದರ್ಭದಲ್ಲಿ ಈ ಹೇಳಿಕೆಗಳನ್ನು ನೀಡಿದ್ದಾರೆ. ಪಾಕಿಸ್ತಾನದಲ್ಲಿ ವಿನಾಶಕಾರಿ ಪ್ರವಾಹದಿಂದ ಸಂಕಷ್ಟ ಎದುರಾಗಿದ್ದರೂ ಪಾಶ್ಚಿಮಾತ್ಯ ದೇಶಗಳಿಂದ ರಿಯಾಯಿತಿ ದರದಲ್ಲಿ ಇಂಧನ ಆಮದು ಮಾಡಿಕೊಳ್ಳಲು ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕಾಲ್ತುಳಿತಕ್ಕೆ 130 ಮಂದಿಯ ಸಾವಾಗಿದ್ದ ಇಂಡೋನೇಷ್ಯಾದ ಸ್ಟೇಡಿಯಂ ನೆಲೆಸಮಕ್ಕೆ ನಿರ್ಧಾರ
Advertisement
Advertisement
ನಾನು ವಾಷಿಂಗ್ಟನ್‌ನಲ್ಲಿ 4 ದಿನಗಳ ವಾಸ್ತವ್ಯದ ಅವಧಿಯಲ್ಲಿ ಅಂತಾರಾಷ್ಟ್ರೀಯ ಹಣಕಾಸು ಸಂಸ್ಥೆಗಳ ಮುಖ್ಯಸ್ಥರು, ಯುಎಸ್, ಸೌದಿ ಅರೇಬಿಯಾ ಮತ್ತು ಇತರ ದೇಶಗಳ ಅಧಿಕಾರಿಗಳೊಂದಿಗೆ 58 ಸಭೆಗಳನ್ನು ನಡೆಸಿದ್ದೇನೆ ಇಶಾಕ್ ಮಾಹಿತಿ ನೀಡಿದ್ದಾರೆ.
Advertisement
ಪಾಕಿಸ್ತಾನದಲ್ಲಿನ ಪ್ರವಾಹದ ಕುರಿತು ಚರ್ಚಿಸಲು ಆಯೋಜಿಸಲಾದ ದುಂಡುಮೇಜಿನ ಸಮ್ಮೇಳನದಲ್ಲಿ, ಏಷ್ಯನ್ ಅಭಿವೃದ್ಧಿ ಬ್ಯಾಂಕ್ ಮತ್ತು ವಿಶ್ವಬ್ಯಾಂಕ್ ಅಧಿಕಾರಿಗಳು ಜಂಟಿ ವರದಿಯನ್ನು ಅಲ್ಲಿ ಮಂಡಿಸಿದರು ಎಂದು ಪಾಕಿಸ್ತಾನದ ಹಣಕಾಸು ಸಚಿವರು ತಿಳಿಸಿದ್ದಾರೆ. ಇದನ್ನೂ ಓದಿ: ರಷ್ಯಾದಿಂದ ಮತ್ತೆ ಡೆಡ್ಲಿ ಡ್ರೋನ್ ದಾಳಿ – ಉಕ್ರೇನ್‌ನಲ್ಲಿ ಅಲ್ಲೋಲ ಕಲ್ಲೋಲ
Advertisement
ಪ್ರವಾಹದಿಂದಾಗಿ ಪಾಕಿಸ್ತಾನವು 32.40 ಶತಕೋಟಿ ಡಾಲರ್ ನಷ್ಟ ಅನುಭವಿಸಿದೆ. 16 ಶತಕೋಟಿ ಡಾಲರ್‌ಗೂ ಹೆಚ್ಚು ಹಣ ಪುನರ್ವಸತಿ ಕಾರ್ಯಕ್ಕೆ ಪಾಕಿಸ್ತಾನಕ್ಕೆ ಅಗತ್ಯವಿದೆ ಎಂದು ಸಚಿವರು ಇದೇ ವೇಳೆ ಉಲ್ಲೇಖಿಸಿದ್ದಾರೆ.