ಭಯೋತ್ಪಾದನೆ ವಿರುದ್ಧ ಹೋರಾಡಲು ಆಗದಿದ್ರೆ ಪಾಕ್‌ಗೆ ಸಹಾಯ ಮಾಡಲು ಸಿದ್ಧ: ರಾಜನಾಥ್‌ ಸಿಂಗ್

Public TV
1 Min Read
rajnath singh rajya sabha

ನವದೆಹಲಿ: ಭಯೋತ್ಪಾದನೆ ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗದಿದ್ದರೆ, ಪಾಕಿಸ್ತಾನಕ್ಕೆ (Pakistan) ಸಹಾಯ ಮಾಡಲು ಭಾರತ (India) ಸಿದ್ಧ ಎಂದು ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ತಿಳಿಸಿದ್ದಾರೆ.

ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಆಪರೇಷನ್ ಸಿಂಧೂರ್ (Operation Sindoor) ಪಾಕಿಸ್ತಾನಕ್ಕೆ ಮಾತ್ರವಲ್ಲದೇ ಅದನ್ನು ಬೆಂಬಲಿಸುವವರಿಗೂ ಸ್ಪಷ್ಟ ಸಂದೇಶ ನೀಡಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: Operation Sindoor Debate | ಹೋರಾಡಿದ್ದು ಸೇನೆ, ಕ್ರೆಡಿಟ್‌ ಬಯಸುತ್ತಿರೋದು ಮೋದಿ – ಪ್ರಿಯಾಂಕಾ ಗಾಂಧಿ ಕಿಡಿ

india pakistan

ಏತನ್ಮಧ್ಯೆ, ಲೋಕಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಪಹಲ್ಗಾಮ್ ಭಯೋತ್ಪಾದಕ ದಾಳಿಯ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸುವಲ್ಲಿ ಭದ್ರತಾ ಸಂಸ್ಥೆಗಳು ವಿಫಲವಾದ ಬಗ್ಗೆ ಕಾಂಗ್ರೆಸ್ ಸಂಸದರು ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಭಯೋತ್ಪಾದಕ ದಾಳಿಯ ಸ್ಥಳದಲ್ಲಿ ಒಬ್ಬ ಭದ್ರತಾ ಸಿಬ್ಬಂದಿಯೂ ಏಕೆ ಇರಲಿಲ್ಲ ಎಂದು ಪ್ರಶ್ನಿಸಿದರು.

ಸಂಸತ್ತಿನಲ್ಲಿ ಆಪರೇಷನ್ ಸಿಂಧೂರ್ ಕುರಿತ ವಿಶೇಷ ಚರ್ಚೆ ಎರಡನೇ ದಿನವೂ ಮುಂದುವರಿದಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ಸಂಸದರು ಈ ವಿಷಯದ ಬಗ್ಗೆ ತಮ್ಮ ನಿಲುವನ್ನು ಮಂಡಿಸಿದರು. ಆಪರೇಷನ್ ಮಹಾದೇವ್‌ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಇವರು ಪಹಲ್ಗಾಮ್‌ ದಾಳಿಯಲ್ಲಿ ಪಾಲ್ಗೊಂಡಿದ್ದವರು ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ದೃಢಪಡಿಸಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ದಾಳಿ ಮಾಡಿದವ್ರು ಪಾಕಿಗಳು, ವೋಟರ್ ಐಡಿ, ಚಾಕ್ಲೆಟ್ ಸಾಕ್ಷ್ಯ – ವಿಪಕ್ಷಗಳಿಗೆ ಎಳೆಎಳೆಯಾಗಿ ಘಟನೆ ವಿವರಿಸಿದ ಅಮಿತ್ ಶಾ

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತದ ಮಿಲಿಟರಿ ಪ್ರತಿಕ್ರಿಯೆಯಾಗಿ ಆಪರೇಷನ್ ಸಿಂಧೂರ್ ನಡೆಸಿತು. ಪಹಲ್ಗಾಮ್‌ ದಾಳಿಯಲ್ಲಿ ಉಗ್ರರು 26 ಮಂದಿಯನ್ನು ಹತ್ಯೆ ಮಾಡಿದ್ದರು.

Share This Article