ಮೈಸೂರು: ಲೋಕಸಭಾ ಚುನಾವಣೆಯಲ್ಲಿ (Lok Sabha Election) ಸ್ಪರ್ಧಿಸಲು ಪಕ್ಷ ಸೂಚನೆ ನೀಡಿದರೆ ಆದೇಶ ಪಾಲಿಸಲು ನಾನು ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ (Yathindra Siddaramaiah) ನುಡಿದಿದ್ದಾರೆ
ಲೋಕಸಭೆಗೆ ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆ ಮಾಡಬೇಕೆಂದು ಬೆಂಬಲಿಗರು ಒತ್ತಾಯಿಸಿರುವ ವಿಚಾರದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಬಗ್ಗೆ ನಾನಾಗಲಿ, ತಂದೆಯವರಾಗಲಿ ಚರ್ಚೆ ನಡೆಸಿಲ್ಲ. ಪಕ್ಷ ಸೂಚಿಸಿದ್ರೆ ಆದೇಶ ಪಾಲಿಸಲು ಸಿದ್ಧ ಎಂದಿದ್ದಾರೆ.
Advertisement
Advertisement
ಚುನಾವಣೆಗೆ ಇನ್ನೂ 8 ತಿಂಗಳ ಕಾಲಾವಕಾಶ ಇದೆ. ಚುನಾವಣೆ ಸಮೀಪ ಯಾರು ಸೂಕ್ತ ಅಭ್ಯರ್ಥಿ ಎಂದು ಗೊತ್ತಾಗಲಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಬೇಕು ಅಷ್ಟೇ. ಆದ್ದರಿಂದ ಸೂಕ್ತ ವ್ಯಕ್ತಿಯನ್ನು ಆಯ್ಕೆ ಮಾಡುತ್ತೇವೆ. ಒಂದು ವೇಳೆ ನಾನು ಸ್ಪರ್ಧೆ ಮಾಡಬೇಕು ಎಂದು ಪಕ್ಷ ಸೂಚನೆ ನೀಡಿದ್ರೆ ಪಾಲನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: 40% ಕಮಿಷನ್ ಸೇರಿ ಎಲ್ಲದರ ತನಿಖೆಯಾಗ್ಲಿ- ಸಿದ್ದರಾಮಯ್ಯಗೆ ಬೊಮ್ಮಾಯಿ ಸವಾಲ್
Advertisement
ಸರ್ಕಾರಿ ಸ್ಥಾನಮಾನದ ನಿರೀಕ್ಷೆ:
ವರುಣ ಕ್ಷೇತ್ರಕ್ಕೆ ಸಿಎಂ ಸಿದ್ದರಾಮಯ್ಯ ಹೆಚ್ಚು ಸಮಯ ಕೊಡಲಾಗದ ಹಿನ್ನೆಲೆಯಲ್ಲಿ ಸರ್ಕಾರಿ ಸ್ಥಾನಮಾನದ ನಿರೀಕ್ಷೆಯಲ್ಲಿ ಯತೀಂದ್ರ ಅವರು ಇದ್ದಾರೆ. ಕ್ಷೇತ್ರದಲ್ಲಿ ತಂದೆಯ ಜವಾಬ್ದಾರಿ ನಿಭಾಯಿಸಲು ಯತೀಂದ್ರ ಸರ್ಕಾರಿ ಸ್ಥಾನಮಾನದ ಬಗ್ಗೆ ಒಲವು ವ್ಯಕ್ತಪಡಿಸಿದ್ದಾರೆ.
Advertisement
ಕಳೆದ ಬಾರಿಯಂತೆ ಸಣ್ಣ ಹುದ್ದೆ ನೀಡಿದರೂ ನಿಭಾಯಿಸುತ್ತೇನೆ. ತಂದೆಯವರು ಸಿಎಂ ಆಗಿರುವ ಕಾರಣ ಕ್ಷೇತ್ರದ ಜನರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಅವರನ್ನು ನೋಡಲು ಬರುವ ರಾಜ್ಯದ ಜನರನ್ನೆಲ್ಲ ಅವರು ಭೇಟಿಯಾಗಬೇಕು. ಆದ್ದರಿಂದ ವರುಣ ಕ್ಷೇತ್ರದ ಮತದಾರರಿಗೆ ಹೆಚ್ಚು ಸಮಯ ಕೊಡಲಾಗುತ್ತಿಲ್ಲ. ಜನರ ಸಮಸ್ಯೆಯನ್ನು ಅಧಿಕಾರಿಗಳೊಂದಿಗೆ ಚರ್ಚಿಸಬೇಕಿದೆ. ಅಧಿಕಾರಿಗಳಿಗೆ ಹೇಳಿ ಜನರ ಸಣ್ಣ ಪುಟ್ಟ ಸಮಸ್ಯೆ ಬಗೆಹರಿಸಲು ಸರ್ಕಾರಿ ಸ್ಥಾನಮಾನ ಇರಬೇಕು ಎಂದರು.
ನನಗೆ ಯಾವುದಾದರೂ ಚಿಕ್ಕದಾದ ಸ್ಥಾನಮಾನ ನೀಡಿದರೂ ಸಹಕಾರ ಆಗುತ್ತದೆ. ಕಳೆದ ಬಾರಿ ಆಶ್ರಯ ಸಮಿತಿಯ ಅಧ್ಯಕ್ಷ ಸ್ಥಾನ ನೀಡಿದ್ದರು. ಅದು ದೊಡ್ಡ ಹುದ್ದೆಯಲ್ಲ. ಆದರೂ ಅಂತದ್ದೇ ಸಣ್ಣ ಹುದ್ದೆ ಈ ಬಾರಿ ನೀಡಿದರೂ ಜನರ ಸೇವೆ ಮಾಡಲು ನಾನು ಸಿದ್ಧನಿದ್ದೇನೆ ಎಂದು ಮೈಸೂರಿನಲ್ಲಿ ಸಿಎಂ ಪುತ್ರ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಇದನ್ನೂ ಓದಿ: ನನ್ನ ಬಳಿ ದಾಖಲೆ ಇದೆ- ಹೆಚ್‍ಡಿಕೆ ಪೆನ್‍ಡ್ರೈವ್ ಬಾಂಬ್
Web Stories