ಮಡಿಕೇರಿ: ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ (Mysuru-Kodagu) ಬಿಜೆಪಿ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ (Yaduveer Krishnadatta Chamaraja Wadiyar) ಭಾನುವಾರ ಕೊಡಗಿನ ಹಲವೆಡೆಗಳಲ್ಲಿ ಬಿರುಬಿಸಿಲಿನಲ್ಲೂ ಸಂಚಾರ ನಡೆಸಿ ಜನರಿಂದ ಮತ ಯಾಚಿಸುತ್ತಿದ್ದಾರೆ.
ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲ್ಲೂಕಿನ ಹತ್ತಾರು ಗ್ರಾಮೀಣ ಪ್ರದೇಶಗಳಿಗೆ ತೆರಳಿ ಹಗಲು-ರಾತ್ರಿ ಎನ್ನದೇ ಮತಯಾಚನೆಯಲ್ಲಿ ತೊಡಗಿದ್ದಾರೆ. ಅಂದಿನ ಕಾಲದಲ್ಲಿ ಅರಸರು ಪ್ರತಿ ಮನೆಗೂ ತೆರಳಿ ತಂದೆಯ ರೀತಿಯಲ್ಲಿ ಕೆಲಸ ಮಾಡಿದ್ದಾರೆ. ಅದೇ ರೀತಿ, ಈಗ ನಿಮ್ಮೆಲ್ಲರ ಮನೆ ಮಗನಂತೆ ಕೆಲಸ ಮಾಡಲು ಸಿದ್ಧನಿದ್ದೇನೆ ಎಂದು ಯದುವೀರ್ ತಿಳಿಸಿದರು. ಇದನ್ನೂ ಓದಿ: ಸರ್ಕಾರ ಎಲ್ಲಾ ಪ್ರಜೆಗಳನ್ನು ಸಮಾನವಾಗಿ ಕಾಣಬೇಕು: ಪೇಜಾವರ ಶ್ರೀ
- Advertisement
ಕೇಂದ್ರದಲ್ಲಿ ಮತ್ತೊಮ್ಮೆ ಮೋದಿ ಅವರು ಪ್ರಧಾನಿಯಾಗಬೇಕು. ರಾಜ್ಯದಲ್ಲಿ ಮತ್ತಷ್ಟು ಅಭಿವೃದ್ಧಿ ಕಾರ್ಯಗಳು ನಡೆಯಬೇಕು. ಹೀಗಾಗಿ ತಮ್ಮ ಮತಗಳ ಮೂಲಕ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸಿ ಶ್ರೇಷ್ಠ ಭಾರತ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಕರೆ ನೀಡಿದರು.
- Advertisement
ಬಹಳಷ್ಟು ಪ್ರಶ್ನೆಗಳು ಜನರಿಗೆ ಇಂದಿಗೂ ಕಾಡುತ್ತಿದೆ. ಅರಮನೆಯಲ್ಲಿ ಬೆಳೆದ ವ್ಯಕ್ತಿ ರಾಜವಂಶದ ವಾತಾವರಣದಲ್ಲಿ ಬೆಳೆದ ವ್ಯಕ್ತಿ ಹೇಗೆ ಜನರ ಸಂಕಷ್ಟಕ್ಕೆ ಮಿಡಿಯುತ್ತಾರೆ ಎಂಬ ಪ್ರಶ್ನೆ ಎಲ್ಲರಲ್ಲಿಯೂ ಇದೆ. ಯಾರೂ ಸಹ ಅರಮನೆಗೆ ಬರುವ ಅವಶ್ಯಕತೆ ಇಲ್ಲ. ನಾನೇ ಅರಮನೆಯಿಂದ ಹೊರಗೆ ಬರುತ್ತೀನಿ ಎಂದು ತಿಳಿಸಿದರು. ಇದನ್ನೂ ಓದಿ: ಮೋದಿ ಮಾಡಿರುವ ಅನ್ಯಾಯ ಹೇಳಿದರೆ ಸಿದ್ದರಾಮಯ್ಯಗೆ ದುರಹಂಕಾರ ಅಂತಾರೆ: ಬಿಜೆಪಿ ವಿರುದ್ಧ ಸಿಎಂ ಗುಡುಗು