– 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದ ಆರೋಪಿಗಳು
ಬೆಳಗಾವಿ: 5 ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿ ಕಿಡ್ನ್ಯಾಪ್ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ (Satish Jarkiholi) ಆಪ್ತೆಯನ್ನು ಘಟಪ್ರಭಾ ಪೊಲೀಸರು (Ghataprabha Police) ಬಂಧಿಸಿದ್ದಾರೆ.
ಮಂಜುಳಾ ರಾಮಗನಟ್ಟಿ ಬಂಧಿತ ಆರೋಪಿ. ಇದನ್ನೂ ಓದಿ: ಕಾಂಗ್ರೆಸ್ ಕಾರ್ಯಕರ್ತೆ ಹಿಮಾನಿ ಶವ ಸೂಟ್‌ಕೇಸ್‌ನಲ್ಲಿ ಪತ್ತೆ – ಓರ್ವ ಶಂಕಿತ ಅರೆಸ್ಟ್
ಫೆ.14ರಂದು ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಆರೋಪಿಗಳು ಕಿಡ್ನ್ಯಾಪ್ ಮಾಡಿದ್ದರು. ಕಿಡ್ನ್ಯಾಪ್ ಮಾಡಿ 5 ಕೋಟಿ ಹಣಕ್ಕೆ ಬೇಡಿಕೆಯಿಟ್ಟಿದ್ದರು. ಕಿಡ್ನ್ಯಾಪ್ ಪ್ರಕರಣ ದಾಖಲಾದ 24 ಗಂಟೆಯಲ್ಲಿ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿದ್ದರು. ಇದನ್ನೂ ಓದಿ: ಕೋಲಾರ | ಇನ್ನೋವಾ ಕಾರಿಗೆ ಬೈಕ್ ಡಿಕ್ಕಿ – ನಾಲ್ವರು ಸ್ಥಳದಲ್ಲೇ ಸಾವು
ಪ್ರಕರಣ ಸಂಬಂಧ ಪೊಲೀಸರು 6 ಜನರನ್ನು ಬಂಧಿಸಿದ್ದರು. ತನಿಖೆ ವೇಳೆ ಕಿಡ್ನ್ಯಾಪ್‌ನ ಮಾಸ್ಟರ್ ಪ್ಲ್ಯಾನ್ ಮಾಡಿರುವುದು ಕಿಂಗ್‌ಪಿನ್ ಮಂಜುಳಾ ಎಂಬ ವಿಚಾರ ತಿಳಿದಿದೆ. ಮಂಜುಳಾ ಮಗ ಈಶ್ವರ ರಾಮಗನಟ್ಟಿಯನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ವಿಚಾರ ಬಹಿರಂಗವಾಗಿದೆ. ಇದನ್ನೂ ಓದಿ: ಇಂದಿನಿಂದ ಕಲಾಪ – ಸಾಲು ಸಾಲು ಪ್ರತಿಭಟನೆಗೆ ಪ್ಲ್ಯಾನ್, ವಿಧಾನಸೌಧ ಸುತ್ತಮುತ್ತ ನಿಷೇಧಾಜ್ಞೆ
ಮಗ ಮತ್ತು ಸ್ನೇಹಿತರು, ಮಂಜುಳಾ ನೀಡಿದ ಪ್ಲ್ಯಾನ್ ಮೇಲೆ ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆಯಿಟ್ಟಿರುವುದು ಬೆಳಕಿಗೆ ಬಂದಿದೆ. ತನಿಖೆ ಸಂದರ್ಭದಲ್ಲಿ ಸಿಕ್ಕ ತಾಂತ್ರಿಕ ಸಾಕ್ಷಿ ಸೇರಿ ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾನನ್ನ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣದಲ್ಲಿ 7 ಜನ ಆರೋಪಿಗಳನ್ನ ಘಟಪ್ರಭಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಹಕ್ಕಿ ಜ್ವರದ ಆತಂಕ – ಮಟನ್, ಫಿಶ್ ಮೊರೆಹೋದ ಚಿಕನ್ ಪ್ರಿಯರು