ಬೆಂಗಳೂರು: ಮದುವೆ ಸಂಭ್ರಮದಲ್ಲಿದ್ದ ರಿಯಲ್ ಎಸ್ಟೇಟ್ ಉದ್ಯಮಿಗೆ (Real Estate Entrepreneur) ಚಾಕು ಇರಿದು ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ಬಿಜಿಎಸ್ ಲೇಔಟ್‌ನ ನಿರ್ಮಾಣ ಹಂತದ ಕಟ್ಟಡದಲ್ಲಿ ನಡೆದಿದೆ.
ಮಾಗಡಿ ಶಾಸಕರ ಆಪ್ತ ಲೋಕನಾಥ್ ಸಿಂಗ್ (37) ಹತ್ಯೆಯಾದ ಉದ್ಯಮಿ. ಲೋಕನಾಥ್ ಸಿಂಗ್‌ಗೆ ಇದೇ ತಿಂಗಳು ಮದುವೆ ನಿಶ್ವಯವಾಗಿತ್ತು. ಕುತ್ತಿಗೆ ಭಾಗಕ್ಕೆ ಚಾಕುವಿನಿಂದ ಇರಿದು ಉದ್ಯಮಿಯನ್ನು ಕೊಲೆ ಮಾಡಲಾಗಿದೆ. ಘಟನೆಯಲ್ಲಿ ಲೋಕನಾಥ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಚಿಕ್ಕಮಗಳೂರು | 17 ಹಲ್ಲುಗಳನ್ನ ಕಳೆದುಕೊಂಡಿದ್ದಕ್ಕೆ ಮನನೊಂದು ಯುವಕ ಆತ್ಮಹತ್ಯೆ
ಘಟನೆ ಬಳಿಕ ಲೋಕನಾಥ್ ಗನ್‌ಮ್ಯಾನ್ ಪರಾರಿಯಾಗಿದ್ದು, ಪೊಲೀಸರು ಆತನಿಗಾಗಿ ತಲಾಷ್ ನಡೆಸುತ್ತಿದ್ದಾರೆ. ಘಟನಾ ಸ್ಥಳಕ್ಕೆ ಸೋಲದೇವನಹಳ್ಳಿ (Soladevanahalli) ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬಿಸಿಲಿನಿಂದ ಬರಿದಾದ ವೇದಾವತಿ ನದಿ ಒಡಲು – ತೀರದಲ್ಲೇ ಬೋರ್ ಕೊರೆಸಲು ರೈತರ ಸಾಹಸ