ಮಡಿಕೇರಿ: ಪತ್ನಿ ಜೊತೆ ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು (Real Estate Businessman) ನೇಣಿಗೆ ಶರಣಾದ ಘಟನೆ ಪಿರಿಯಾಪಟ್ಟಣ ತಾಲೂಕಿನಲ್ಲಿ ನಡೆದಿದೆ.
ಕೊಪ್ಪ ನಿವಾಸಿ ಜಯಣ್ಣ ಅವರ ಪುತ್ರ ಸುರೇಶ್ (40) ಹಾಗೂ ಅವರ ಪತ್ನಿ ಪಲ್ಲವಿ (28) ಮೃತ ದಂಪತಿ. ಇದನ್ನೂ ಓದಿ: ಪತ್ನಿ, ಮಗುವನ್ನು ಕೊಂದು ವ್ಯಕ್ತಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್ – ಕಾರ್ತಿಕ್ ಸಾಲದ ಸುಳಿಗೆ ಇಡೀ ಸಂಸಾರ ಬಲಿ?
ಬೈಲುಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ ದೊಡ್ಡಹೊನ್ನೂರು ಕಾವಲ್‌ನಲ್ಲಿರುವ ಜಮೀನಿನ ಹಳೆಯ ಖಾಲಿ ಮನೆಯೊಂದರಲ್ಲಿ ದಂಪತಿ ನೇಣಿಗೆ (Suicide) ಶರಣಾಗಿದ್ದಾರೆ.
ರಿಯಲ್ ಎಸ್ಟೇಟ್ ಮಾಫಿಯಾದ ಒತ್ತಡ, ಉದ್ಯಮದಲ್ಲಿ ನಷ್ಟ, ಸಾಲಗಾರರ ಕಿರುಕುಳದಿಂದ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ. ಸುರೇಶ್ ಅವರು ಡೆತ್‌ನೋಟ್ ಬರೆದಿದ್ದು ಸಾವಿಗೆ ಕೆಲವರ ಹೆಸರನ್ನು ಉಲ್ಲೇಖ ಮಾಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಬೈಲುಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.