Bengaluru CityCinemaKarnatakaLatestMain PostSandalwood

ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್‌ ತನ್ನಿ ಎಂದ ರಿಯಲ್‌ ಸ್ಟಾರ್‌ ಉಪೇಂದ್ರ

ಸ್ಯಾಂಡಲ್‌ವುಡ್‌ ರಿಯಲ್ ಸ್ಟಾರ್ ಉಪೇಂದ್ರ ಅವರ ಹುಟ್ಟುಹಬ್ಬಕ್ಕೆ ದಿನಗಣನೆ ಶುರುವಾಗಿದೆ. ಈ ಸಂದರ್ಭದಲ್ಲಿ ನಟ ಉಪೇಂದ್ರ ತಮ್ಮ ಅಭಿಮಾನಿಗಳಿಗೆ ವಿಶೇಷ ಮನವಿವೊಂದನ್ನ ಮಾಡಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ನಟ, ನಿರ್ದೇಶಕ, ಬರಹಗಾರ, ನಿರ್ಮಾಪಕನಾಗಿ ನಟ ಉಪೇಂದ್ರ ಅವರು ಛಾಪೂ ಮೂಡಿಸಿದ್ದಾರೆ. ಇನ್ನು ತಮ್ಮ ಹುಟ್ಟುಹಬ್ಬಕ್ಕೆ ಉಪೇಂದ್ರ ಅವರು ಬ್ರೇಕ್ ಹಾಕಿ, ಭಿನ್ನವಾಗಿ ಯೋಚಿಸಿದ್ದಾರೆ.ವಿಚಾರವಂತರಾಗೋಣಾ ಎಂದು ನಟ ಸಾಮಾಜಿಕ ಜಾಲತಾಣದಲ್ಲಿ ಹೇಳಿದ್ದಾರೆ. ಸೆಪ್ಟೆಂಬರ್ 18ರಂದು ಉಪೇಂದ್ರ, 53ನೇ ವಸಂತಕ್ಕೆ ಕಾಲಿಡುತ್ತಿದ್ದಾರೆ. ಈ ವೇಳೆ ಉಪ್ಪಿ ಶೇರ್ ಮಾಡಿರುವ ಪೋಸ್ಟ್ ಇದೀಗ ನೆಟ್ಟಿಗರ ಗಮನ ಸೆಳೆಯುತ್ತಿದೆ. ಇದನ್ನೂ ಓದಿ:ಮಿಸ್ ಮ್ಯಾಚ್ ಜೋಡಿ: ಅತೀ ಹೆಚ್ಚು ಟ್ರೋಲ್ ಗೆ ಒಳಗಾದ ನಟಿ ಮಹಾಲಕ್ಷ್ಮಿ ಮತ್ತು ನಿರ್ಮಾಪಕ ರವೀಂದರ್

ವಿಚಾರವಂತರಾಗೋಣಾ, ಇದೇ ಸೆಪ್ಟೆಂಬರ್ 18 ಅಭಿಮಾನಿಗಳ ದಿನದಂದು ನಿಮ್ಮನ್ನ ನಮ್ಮ ಮನೆಯಲ್ಲಿ ಭೇಟಿಯಾಗುತ್ತೇನೆ. ಆ ದಿನ ಕೇಕ್, ಹೂಗುಚ್ಚ ಗಿಫ್ಟ್ ಎಲ್ಲಾ ಬಿಟ್ಟು, ಒಂದು ಹಾಳೆಯಲ್ಲಿ 18 ಪದಗಳನ್ನು ಮೀರದಂತೆ ಏನಾದರೂ ಒಂದು ಉತ್ತಮ ವಿಚಾರವನ್ನು ಬರೆದು ತರುತ್ತೀರಾ. ಅತ್ಯುತ್ತಮವಾದ 18 ಬರವಣಿಗೆಗೆ ಸೂಕ್ತ ಬಹುಮಾನವಿರುತ್ತದೆ ಎಂದು ಉಪೇಂದ್ರ ತಮ್ಮ ಪೋಸ್ಟ್‌ನಲ್ಲಿ ಬರೆದುಕೊಂಡಿದ್ದಾರೆ. ಈ ಮೂಲಕ ತಮ್ಮ ಹುಟ್ಟುಹಬ್ಬದ ದಿನದಂದು ಅಭಿಮಾನಿಗಳಿಗೆ ಉಡುಗೊರೆ ನೀಡಲಿದ್ದಾರೆ.

Live Tv

Leave a Reply

Your email address will not be published. Required fields are marked *

Back to top button