ಬೆಂಗಳೂರು: ಹಿರಿಯ ನಟ, ನಿರ್ದೇಶಕ ಅಗಲಿಕೆಯ ಬಗ್ಗೆ ಅವರ ಶಿಷ್ಯ ನಟ ಉಪೇಂದ್ರ ಸಂತಾಪ ಸೂಚಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇದು ಶಾಕಿಂಗ್ ಅಂತಾ ಹೇಳಬಹುದು. ಇಷ್ಟು ಬೇಗ ನಮ್ಮಲ್ಲೆರನ್ನು ಬಿಟ್ಟು ಹೋಗುತ್ತಾರೆ ಅಂತಾ ಅಂದುಕೊಂಡಿರಲಿಲ್ಲ. ನನಗೆ ಅವರಿಗೆ ಉಷಾರಿಲ್ಲ ಅಂತಾ ಗೊತ್ತಿರಲಿಲ್ಲ. ಅವರು ಯಾರ ಬಳಿನೂ ಏನನ್ನು ಹೇಳಿಕೊಳ್ಳಲ್ಲ. ಬೆಳಿಗ್ಗೆ ಸುದ್ದಿ ಬಂದಾಗ ಶಾಕ್ ಆಯಿತು. ನನ್ನ ಪಾಲಿಗೆ ಮಾತ್ರ ಅವರು ದೇವರು. ಗುರು ಸಾಕ್ಷಾತ್ ಪರಬ್ರಹ್ಮ ತಸ್ಮೈ ಶ್ರೀ ಗುರುವೇ ನಮಃ. ನನ್ನ ದೇವರು ಅವರು. ಅವರ ಕುಟುಂಬದವರಿಗೆ, ಕನ್ನಡ ಚಿತ್ರರಂಗಕ್ಕೆ ತುಂಬಲಾಗದ ನಷ್ಟ ಇದು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದಾರೆ.
Advertisement
Advertisement
ಬೆಂಗಳೂರಿನ ಶ್ರೀಶಂಕರ್ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಕಾಶಿನಾಥ್ ನಿಧನರಾಗಿದ್ದಾರೆ. 2 ದಿನಗಳ ಹಿಂದೆ ಆಸ್ಪತ್ರೆಗೆ ದಾಖಲಾಗಿದ್ದರು. ಆದ್ರೆ ಚಿಕಿತ್ಸೆ ಫಲಿಸದೇ ಇಂದು ಸುಮಾರು ನಸುಕಿನ ಜಾವ 4 ಗಂಟೆಗೆ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಇಬ್ಬರು ಗಂಡು ಮಕ್ಕಳನ್ನ ಕಾಶಿನಾಥ್ ಅಗಲಿದ್ದಾರೆ.
Advertisement
43 ಸಿನಿಮಾಗಳಲ್ಲಿ ಕಾಶಿನಾಥ್ ನಟಿಸಿದ್ದರು. ಅಮರ ಮಧುರು ಪ್ರೇಮ, ಅನುಭವ, ಅನಾಮಿಕ, ಅಜಗಜಾಂತರ, ಶ್, ಅನಂತನ ಅವಾಂತರ, ಅವನೇ ನನ್ನ ಗಂಡ ಮುಂತಾದ ಸಿನಿಮಾಗಳಲ್ಲಿ ಕಾಶಿನಾಥ್ ನಟನೆ ಮಾಡಿದ್ದರು. ಉಪೇಂದ್ರರಂತಹ ಕಲಾವಿದರನ್ನ ಪರಿಚಯಿಸಿದ ಹೆಗ್ಗಳಿಕೆ ಕಾಶಿನಾಥ್ ಅವರದ್ದು. 11 ಕನ್ನಡ, 1 ಹಿಂದಿ ಹಾಗೂ 1 ತೆಲುಗು ಚಿತ್ರ ನಿರ್ಮಾಣ ಮಾಡಿದ್ದರು. 80ರ ದಶಕದ ಸ್ಯಾಂಡಲ್‍ವುಡ್‍ನ ಜನಪ್ರಿಯ ನಟ ಹಾಗೂ ನಿರ್ದೇಶಕರಾಗಿದ್ದರು. ಇತ್ತೀಚಿನ ಚೌಕ ಸಿನಿಮಾ ಕಾಶಿನಾಥ್ ಅವರ ಕೊನೆಯ ಸಿನಿಮಾ.
Advertisement