UI ಅಬ್ಬರ: ಉಪ್ಪಿ ನಟನೆ, ನಿರ್ದೇಶನಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಪ್ರೇಕ್ಷಕರು

Public TV
1 Min Read
upendra

ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ಸಿನಿಮಾ ಬಹುಭಾಷೆಯಲ್ಲಿ ಇಂದು (ಡಿ.20) ಅದ್ಧೂರಿಯಾಗಿ ರಿಲೀಸ್ ಆಗಿದೆ. ಫಸ್ಟ್ ಡೇ, ಫಸ್ಟ್ ಶೋ ನೋಡಿರುವ ಅಭಿಮಾನಿಗಳು ಚಿತ್ರ ನೋಡಿ ಮೆಚ್ಚಿದ್ದಾರೆ. ಇದನ್ನೂ ಓದಿ:ವ್ಯವಹಾರದಲ್ಲಿ ಲಾಸ್‌ ಆಗಿದ್ದಕ್ಕೆ ಬಿಗ್‌ ಬಾಸ್‌ನಿಂದ ನಿರ್ಗಮಿಸಿದ್ರಾ?: ಗೋಲ್ಡ್‌ ಸುರೇಶ್ ಸ್ಪಷ್ಟನೆ

UI ಸಿನಿಮಾದ ಮೂಲಕ ಮತ್ತೆ ಪ್ರೇಕ್ಷಕರ ತಲೆಗೆ ಉಪೇಂದ್ರ ಹುಳ ಬಿಟ್ಟಿದ್ದಾರೆ. ಚಿತ್ರದ ಕಥೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಇಂದು ಬೆಳಗ್ಗೆ 6:30ರಿಂದಲೇ ಚಿತ್ರದ ಪ್ರದರ್ಶನ ಶುರುವಾಗಿದೆ. ‘ಯುಐ’ ಚಿತ್ರ ನೋಡಿ ಫ್ಯೂಚರ್ ಫಿಲ್ಮ್, ಮತ್ತೊಮ್ಮೆ ಸಿನಿಮಾ ನೋಡಿದ್ರೆನೇ ಅರ್ಥವಾಗೋದು ಎಂದು ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಬಂದಿದೆ. ಎಂದಿಗೂ ಕಾಯಕವೇ ಕೈಲಾಸ, ಕೆಲಸ ಮಾಡಿ ಅಂತ ಹೇಳಿದ್ದಾರೆ. ಜೀವನದ ಬಗ್ಗೆ ಫೋಕಸ್ ಮಾಡಿ ಅನ್ನುವ ಸಂದೇಶ ಜನರಿಗೆ ನಟ ಕೊಟ್ಟಿದ್ದಾರೆ. ಉಪೇಂದ್ರ ನಟನೆ, ನಿರ್ದೇಶನಕ್ಕೆ ಫ್ಯಾನ್ಸ್ ಫುಲ್ ಮಾರ್ಕ್ಸ್ ಕೊಟ್ಟಿದ್ದಾರೆ.

ಇನ್ನೂ 2040 ಭವಿಷ್ಯದ ಅಸಲಿ ಕಥೆಯೊಂದಿಗೆ ಯುಐ ಸಿನಿಮಾ ಮೂಲಕ ಉಪೇಂದ್ರ ಅಬ್ಬರಿಸಿದ್ದಾರೆ. ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮನೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.

Share This Article