ರಿಯಲ್ ಸ್ಟಾರ್ ಉಪೇಂದ್ರ (Upendra) ನಟಿಸಿ, ನಿರ್ದೇಶನ ಮಾಡಿರುವ ‘ಯುಐ’ ವಾರ್ನರ್ (ಟ್ರೈಲರ್) ರಿಲೀಸ್ ಆಗಿದೆ. ಉಪೇಂದ್ರ ಸಿನಿಮಾಗಾಗಿ ಎದುರು ನೋಡುತ್ತಿದ್ದ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಸಿಕ್ಕಿದೆ. ಉಪ್ಪಿ ಟ್ರೈಲರ್‌ನಲ್ಲಿ ಡಿಫರೆಂಟ್ ಗೆಟಪ್ ಮತ್ತು ಕಾನ್ಸೆಪ್ಟ್‌ನಲ್ಲಿ ಮಿಂಚಿದ್ದಾರೆ. ಇದನ್ನೂ ಓದಿ:Pushpa 2: ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಸಿನಿಮಾಗೆ ಸಿಕ್ತು U/A ಸರ್ಟಿಫಿಕೇಟ್
#UITheMovie‘s #Warner YT Links:
Kannada: https://t.co/xvWxDEdrt5
Telugu: https://t.co/eIJVLJELJd
Hindi : https://t.co/8fAyhtK3Zo
Tamil: https://t.co/60bYwk9FtI
Malayalam: https://t.co/rnCSrT42Iu pic.twitter.com/PeGETj02QW
— Upendra (@nimmaupendra) December 2, 2024
Advertisement
AI ಯುಗದಲ್ಲಿ UI ಮ್ಯಾಜಿಕ್, ಟ್ರೈಲರ್‌ನಲ್ಲಿ ಮಸ್ತ್ ಆಗಿ ಮೂಡಿ ಬಂದಿದೆ. ಪ್ರೇಕ್ಷಕರ ಬುದ್ದಿವಂತಿಕೆಗೆ UI ವಾರ್ನರ್ (ಟ್ರೈಲರ್) ಸವಾಲು ಹಾಕುವಂತಿದೆ. ಹಸಿವಿಗಾಗಿ ಜನರ ಹೊಡೆದಾಟ, ರಕ್ತಪಾತ ಇದು UI ಟ್ರೈಲರ್‌ನಲ್ಲಿ ರೋಚಕವಾಗಿ ತೋರಿಸಲಾಗಿದೆ. ಜಾತಿ, ಅಧಿಕಾರ ಭಾರತಕ್ಕೆ ಮಾರಕವಾಗುತ್ತ? ಎಂಬ ಜಿದ್ದಾ ಜಿದ್ದಿಯ ನಡುವೆ ಧಿಕ್ಕಾರಕ್ಕಿಂತ ಅಧಿಕಾರಕ್ಕೆ ಬೆಲೆ ಜಾಸ್ತಿ ಎಂದು ಖಡಕ್ ಆಗಿ ಉಪೇಂದ್ರ ಡೈಲಾಗ್ ಹೊಡೆದಿದ್ದಾರೆ. ಗನ್ ಹಿಡಿದು ಜನಗಳ ಕಡೆ ಶೂಟ್ ಮಾಡುತ್ತ ಖಡಕ್ ಲುಕ್‌ನಲ್ಲಿ ಉಪ್ಪಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ UI ಸಿನಿಮಾ ಕಥೆಯ ಬಗ್ಗೆ ಫ್ಯಾನ್ಸ್‌ಗೆ ಕೌತುಕ ಮೂಡುವಂತೆ ಮಾಡಿದ್ದಾರೆ.
Advertisement
Advertisement
ಇನ್ನೂ 2040 ಭವಿಷ್ಯದ ಅಸಲಿ ಕಥೆ ಹೇಳಲು ‘ಯುಐ’ ಸಿನಿಮಾ ಮೂಲಕ ಉಪೇಂದ್ರ ಸಜ್ಜಾಗಿದ್ದಾರೆ. ಡಿ.20ಕ್ಕೆ ರಿಲೀಸ್ ಆಗಲಿರುವ ಈ ಸಿನಿಮಾದಲ್ಲಿ ಉಪೇಂದ್ರಗೆ ಕೊಡಗಿನ ಕುವರಿ ರೀಷ್ಮಾ ನಾಣಯ್ಯ (Reeshma Nanaiah) ಜೋಡಿಯಾಗಿದ್ದಾರೆ. ಲಹರಿ ಫಿಲಂಸ್ ಹಾಗೂ ವೀನಸ್ ಎಂಟರ್‌ಟೈನರ್ಸ್ ಮೂಲಕ ಮಹೋಹರ್ ನಾಯ್ಡು ಹಾಗೂ ಕೆ.ಪಿ ಶ್ರೀಕಾಂತ್ ಅದ್ಧೂರಿಯಾಗಿ ನಿರ್ಮಾಣ ಮಾಡಿದ್ದಾರೆ.
Advertisement