ನಮ್ಮದು ಜನಕಲ್ಯಾಣ, ಆರ್ಥಿಕ ಸ್ಥಿರತೆ ಸಾಧಿಸುವ ವಾಸ್ತವಿಕತೆಯ ಬಜೆಟ್: ಬೊಮ್ಮಾಯಿ

Public TV
3 Min Read
Basavaraj Bommai 6

ಬೆಂಗಳೂರು: ಹಣಕಾಸಿನ ಇತಿಮಿತಿಗಳು ಹಾಗೂ ಅವಶ್ಯಕ ಖರ್ಚುಗಳನ್ನು ನಿಭಾಯಿಸುವುದರ ನಡುವೆ ಉತ್ತಮ ಬಜೆಟ್ ನೀಡುವ ಮೂಲಕ ಆರ್ಥಿಕ ಅಭಿವೃದ್ಧಿ ವೇಗ, ಜನಕಲ್ಯಾಣ, ಆರ್ಥಿಕ ಸ್ಥಿರತೆಯನ್ನು ಸಾಧಿಸುವ ವಾಸ್ತವಿಕತೆಯ ಆಯವ್ಯಯ (Karnataka Budget 2023) ಮಂಡಿಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ (Basavaraj Bomma) ತಿಳಿಸಿದರು.

ವಿಧಾನಸಭೆಯಲ್ಲಿ (Assembly) ಬಜೆಟ್ ಮೇಲಿನ ಚರ್ಚೆಗೆ ಉತ್ತರ ನೀಡಿದ ಸಿಎಂ, ಆಯವ್ಯಯ ಎಂದರೆ ರಾಜ್ಯದ ಹಣಕಾಸಿನ ಸ್ಥಿತಿ. ಜನರ ಆಶೋತ್ತರಗಳನ್ನು ಈಡೇರಿಸುವ ಯೋಜನೆಗಳು, ಹಣಕಾಸಿನ ನಿರ್ವಹಣೆಯ ದಿಕ್ಸೂಚಿಯನ್ನು ತೋರಿಸುವ ಅಂದಾಜು. ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿದ್ದರೆ, ರಾಜ್ಯದ ಆದಾಯ ಹೆಚ್ಚುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಗೃಹಿಣಿ ಶಕ್ತಿ ಯೋಜನೆಯ ಮೊತ್ತ ಸಾವಿರ ರೂ.ಗಳಿಗೆ ಹೆಚ್ಚಳ: ಬೊಮ್ಮಾಯಿ

Sessin

ಬಜೆಟ್ ಗಾತ್ರ ಹೆಚ್ಚಳ ಆರ್ಥಿಕ ಪ್ರಗತಿಯ ಸಂಕೇತ: 2022-23ರಲ್ಲಿ 14,699 ಕೋಟಿ ವಿತ್ತೀಯ ಕೊರತೆ ಆಗಬಹುದೆಂದು ಅಂದಾಜಿಸಲಾಗಿತ್ತು. ಆದರೆ ಜವರಿವರೆಗೆ 5,996 ಕೋಟಿ ರೂ.ಗೆ ಕಡಿಮೆಗೊಳಿಸಲಾಗಿದೆ. 2023-24ರ ಆರ್ಥಿಕ ವರ್ಷದಲ್ಲಿ ಆದಾಯ ಹೆಚ್ಚಳ ಸಾಧಿಸುವ ಸಾಧ್ಯತೆ ಇದೆ. ಕರ್ನಾಟಕ ಆರ್ಥಿಕ ನಿರ್ವಹಣೆಯಲ್ಲಿ ಕ್ರಮಬದ್ಧತೆ ಸಾಧಿಸಿದೆ. ಕೋವಿಡ್ (Covid 19) ನಂತರದ ವರ್ಷದಲ್ಲಿ ರಾಜ್ಯದ ಆರ್ಥಿಕತೆ ಆದಾಯ ಹೆಚ್ಚಳವಾಗುತ್ತಿರುವುದು, ರಾಜ್ಯದ ಅಂತರ್ಗತವಾದ ಆರ್ಥಿಕ ಶಕ್ತಿ, ಜನರ ಪರಿಶ್ರಮದಿಂದ ಸಾಧ್ಯವಾಗಿರುವ ಕಾರಣ, ರಾಜ್ಯದ ಜನರನ್ನ ಅಭಿನಂದಿಸುತ್ತೇನೆ. ಈ ಬಾರಿಯ 3.9 ಲಕ್ಷ ಕೋಟಿ ರೂ.ಗಳ ಬಜೆಟ್ ಮಂಡಿಸಲಾಗಿದೆ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಶೇ.16 ರಷ್ಟು ಬಜೆಟ್ ಗಾತ್ರ ಹೆಚ್ಚಾಗಿದೆ. ಇದು ರಾಜ್ಯ ಆರ್ಥಿಕ ಪ್ರಗತಿಯ ವೇಗ ಉನ್ನತ ಮಟ್ಟದಲ್ಲಾಗುತ್ತಿರುವುದನ್ನು ನಿರೂಪಿಸುತ್ತದೆ ಎಂದು ವಿವರಿಸಿದರು.

Karnataka Budget Kiwi mele Hoova says Congress members. Former CM siddaramaiah seen wearing Chanduhoova inside Assembly

402 ಕೋಟಿ ರೂ. ಆದಾಯ ಹೆಚ್ಚಳ: ಕೇಂದ್ರದ ತೆರಿಗೆಯಲ್ಲಿ ರಾಜ್ಯದ ತೆರಿಗೆ ಪಾಲು 37252 ಕೋಟಿ ರೂ. ಗೆ ಹೆಚ್ಚಿಸುವ ಗುರಿ ಹೊಂದಲಾಗಿದೆ (ಕಳೆದ ಸಾಲಿಗಿಂತ ಶೇ. 25 ರಷ್ಟು ಹೆಚ್ಚಿನ ಗುರಿ). ಕೇಂದ್ರ ಸರ್ಕಾರದಿಂದ ಡಿಬಿಟಿ ಸೇರಿದಂತೆ ರಾಜ್ಯಕ್ಕೆ ಅನುದಾನ ಹೆಚ್ಚಾಗಿದೆ. 2023-24ರಲ್ಲಿ ಕರ್ನಾಟಕ ರಾಜ್ಯ 402 ಕೋಟಿ ಆದಾಯ ಹೆಚ್ಚಳವನ್ನು (Revenue Surplus) ಸಾಧಿಸಿರುವುದು, ರಾಜ್ಯದ ಆರ್ಥಿಕ ನಿರ್ವಹಣೆಯ ಪ್ರತಿಬಿಂಬವಾಗಿದೆ. ರಾಜಸ್ಥಾನ ಹಾಗೂ ಕೇರಳ ರಾಜ್ಯಗಳು ಆದಾಯ ಕೊರತೆಯನ್ನ (Revenue Deficit) ಎತ್ತಿ ತೋರಿಸುತ್ತಿವೆ ಎಂದರು. ಇದನ್ನೂ ಓದಿ: ಗೆಳೆಯರನ್ನ ಸೆಕ್ಸ್‌ಗಾಗಿ ಪೀಡಿಸುತ್ತಿದ್ದ ಮೂರು ಮಕ್ಕಳ ತಾಯಿ- ಕೊಲೆಗೆ ಸ್ಕೆಚ್ ಹಾಕಿದ್ದೇ ರೋಚಕ?

Basavaraj Bommai 2 2

ಬಂಡವಾಳ ವೆಚ್ಚಕ್ಕಾಗಿ ಸಾಲದ ಬಳಕೆ: ಒಟ್ಟು ಜಿಎಸ್‌ಡಿಪಿಯ ಶೇ.25 ರೊಳಗೆ ರಾಜ್ಯದ ಒಟ್ಟು ಸಾಲವಿರಬೇಕು ಎಂಬ ನಿಯಮವಿದೆ. ಈ ನಿಯಮವನ್ನು ಪಾಲಿಸಲಾಗಿರುವುದರಿಂದ ಈ ಬಾರಿಯ ಬಜೆಟ್ ಸರ್ಪ್ಲಸ್ ಬಜೆಟ್ ಆಗಿದೆ. ಕೋವಿಡ್‌ಗೂ ಮುನ್ನ ಹಾಗೂ ನಂತರದ ಆರ್ಥಿಕತೆ ಹೋಲಿಸುವುದು ಸೂಕ್ತವಲ್ಲ. ಕೋವಿಡ್ ಸಂದರ್ಭದಲ್ಲಿ ಆರ್ಥಿಕ ಹಿಂಜರಿಕೆಯಾಯಿತು. ನನ್ನ ಅವಧಿಯಲ್ಲಿ ಹೆಚ್ಚಿನ ಸಾಲ ಪಡೆಯುವ ಅವಕಾಶವಿದ್ದರೂ, ಸಾಲದ ಮೊತ್ತವನ್ನು ಕೇವಲ 67 ಸಾವಿರ ಕೋಟಿ ಸೀಮಿತಗೊಳಿಸಿದ್ದೇನೆ. ಈ ಸಾಲವನ್ನು ಕೇವಲ ಬಂಡವಾಳ ವೆಚ್ಚಗಳಿಗೆ ಬಳಕೆಯಾಗಿದೆ ಎಂದು ಮಾಹಿತಿ ನೀಡಿದರು.

ಸಾಲ ಹೆಚ್ಚಾಗಿದೆ ಎನ್ನೋದು ಸುಳ್ಳು: ರಾಜ್ಯ ಸರ್ಕಾರ 65 ವರ್ಷಗಳಲ್ಲಿ ಒಟ್ಟು 1,30,000 ಕೋಟಿ ಸಾಲ ಪಡೆದಿರಬಹುದು. ಆದರೆ ಕಾಂಗ್ರೆಸ್‌ನ ಸಿದ್ದರಾಮಯ್ಯ ಅವರ ಕಾಲದಲ್ಲಿ ಕೇವಲ 5 ವರ್ಷದ ಅವಧಿಯಲ್ಲಿ 1,30,000 ಕೋಟಿ ಸಾಲ ತೆಗೆದುಕೊಂಡರು. ಅವರ ಅವಧಿಯಲ್ಲಿ ಸಾಲ ಪಡೆಯಬಹುದಾದ ಗರಿಷ್ಟ ಮಿತಿಯಲ್ಲಿ ಶೇ. 82.3 ರಷ್ಟು ತೆಗೆದುಕೊಂಡರೆ, ನಮ್ಮ ಸರ್ಕಾರ ಕೇವಲ ಶೇ.71 ರಷ್ಟು ಅವಕಾಶ ಬಳಸಿಕೊಂಡಿದೆ. 2020-21 ರಲ್ಲಿ ಕೇಂದ್ರ ಸರ್ಕಾರದಿಂದ ಶೇ.5 ರಷ್ಟು ಮಾತ್ರ ಸಾಲ ಪಡೆಯಲು ಅವಕಾಶ ಕಲ್ಪಿಸಿದ್ದರೂ, ನಮ್ಮ ಸರ್ಕಾರ ಕೇವಲ ಶೇ.3 ರಷ್ಟನ್ನು ದಾಟಿಲ್ಲ. ಆದ್ದರಿಂದ ನಮ್ಮ ಅವಧಿಯಲ್ಲಿ ಬಹಳ ಸಾಲ ಮಾಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ಮಾತು. ಸಾಲವನ್ನು ತೀರಿಸುವ ಕ್ಷಮತೆ ನಮ್ಮ ಸರ್ಕಾರಕ್ಕಿದೆ ಎಂದರು.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
1 Comment

Leave a Reply

Your email address will not be published. Required fields are marked *