ಮುಂಬೈ: ಸೈಫ್ ಅಲಿ ಖಾನ್ (Saif Ali Khan) ಮೇಲೆ ಚಾಕು ಇರಿತ ದಾಳಿ ನಡೆದಿದ್ದು ನಿಜವೇ ಅಥವಾ 54 ವರ್ಷದ ನಟನ ನಟನೆಯೇ ಅಂತ ಬಿಜೆಪಿ ಮಹಾರಾಷ್ಟ್ರದ ಮೀನುಗಾರಿಕೆ ಸಚಿವರೂ ಆಗಿರುವ ಬಿಜೆಪಿ ನಾಯಕ ನಿತೇಶ್ ರಾಣೆ (Nitesh Rane) ಪ್ರಶ್ನೆ ಮಾಡಿದ್ದಾರೆ.
ಚಾಕು ಇರಿತದಿಂದ (stabbed) ಚೇತರಿಸಿಕೊಂಡು 5 ದಿನಗಳ ಬಳಿಕ ಆಸ್ಪತ್ರೆಯಿಂದ ಮನೆಗೆ ವಾಪಾಸ್ಸಾಗಿರುವ ಬಾಲಿವುಡ್ ನಟ ಸೈಫ್ ಅಲಿ ಖಾನ್ ವಿರುದ್ಧ ರಾಣೆ ವಾಗ್ದಾಳಿ ನಡೆಸಿದ್ದಾರೆ. ಪುಣೆಯ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ನಿತೇಶ್ ರಾಣೆ, ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿಯನ್ನು ಪ್ರಶ್ನಿಸಿದ್ದಾರೆ. ಸೈಫ್ ಅಲಿ ಖಾನ್ ಮೇಲಿನ ದಾಳಿ ನಿಜವೇ ಅಥವಾ 54 ವರ್ಷದ ನಟನ ʻಕೇವಲ ನಟನೆಯೇʼ ಎಂದು ಪ್ರಶ್ನೆ ಮಾಡಿದ್ದಾರೆ.
Advertisement
Advertisement
ಸೈಫ್ ಅಲಿ ಖಾನ್ ಡಿಸ್ಚಾರ್ಜ್ ಆದ ನಂತರ ಅವರನ್ನು ನೋಡಿದಾಗ, ಅವರು ನಿಜವಾಗಿಯೂ ಇರಿದಿದ್ದಾರೆಯೇ ಅಥವಾ ನಟಿಸಿದ್ದಾರೆಯೇ ಎಂದು ನನಗೆ ಅನುಮಾನವಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: Hyderabad | ಪತ್ನಿಯ ಹತ್ಯೆಗೈದು, ಕುಕ್ಕರ್‌ನಲ್ಲಿ ಬೇಯಿಸಿ ಕೆರೆಗೆ ಎಸೆದ ಮಾಜಿ ಸೈನಿಕ
Advertisement
ಮುಂದುವರಿದು, ಶಾರುಖ್ ಖಾನ್, ಸೈಫ್ ಅಲಿ ಖಾನ್ ಅವರಂತಹ ‘ಖಾನ್’ಗಳು ಗಾಯಗೊಂಡಾಗ ಎಲ್ಲರೂ ಅದರ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಾರೆ. ಸುಶಾಂತ್ ಸಿಂಗ್ ರಜಪೂತ್ ಅವರಂತಹ ಹಿಂದೂ ನಟ ಚಿತ್ರಹಿಂಸೆಗೊಳಗಾದಾಗ ಯಾರೂ ಏನನ್ನೂ ಹೇಳಲು ಮುಂದೆ ಬರುವುದಿಲ್ಲ ಎಂದು ಕಿಡಿಕಾರಿದ್ದಾರೆ.
Advertisement
ಹಿಂದೂ ಕಲಾವಿದರ ಬಗ್ಗೆ ಆ ಮುಂಬ್ರಾದ ಜೀತುದ್ದೀನ್ (ಜಿತೇಂದ್ರ ಅವ್ವಾದ್), ಬಾರಾಮತಿಯ ತಾಯಿ (ಸುಪ್ರಿಯಾ ಸುಳೆ) ಎಂದಾದರೂ ಚಿಂತಿಸುವುದನ್ನು ನೋಡಿದ್ದೀರಾ? ಅವರಿಗೆ ಸೈಫ್ ಅಲಿ ಖಾನ್, ಶಾರುಖ್ ಖಾನ್ ಮಗ ಮತ್ತು ನವಾಬ್ ಮಲಿಕ್ ಬಗ್ಗೆ ಮಾತ್ರ ಚಿಂತೆಯಿದೆ. ಈ ಎಲ್ಲಾ ವಿಷಯಗಳ ಬಗ್ಗೆ ಹಿಂದೂಗಳು ಗಮನಹರಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಾರ್ವಜನಿಕವಾಗಿ ಹಸು ಕೊಂದು ಅಡುಗೆ ಮಾಡಿದ ವೀಡಿಯೋ ಹರಿಬಿಟ್ರು – ಅಸ್ಸಾಂನಲ್ಲಿ 6 ಮಂದಿ ಬಂಧನ
ಸೈಫ್ ಅಲಿಖಾನ್ ಮನೆಗೆ ನುಗ್ಗಿದ ವ್ಯಕ್ತಿಯನ್ನು ಬಾಂಗ್ಲಾದೇಶಿ ಮೂಲದವನು ಎಂದು ಗುರುತಿಸಲಾಗಿದೆ. ಈ ಮೊದಲು ಬಾಂಗ್ಲಾದೇಶಿಗಳು ಮುಂಬೈ ಬಂದರಿನಲ್ಲಿ ತಂಗುತ್ತಿದ್ದರು. ಈಗ ಪರಿಸ್ಥಿತಿ ನೋಡಿ… ಮನೆಗಳಿಗೇ ನುಗ್ಗಲು ಪ್ರಾರಂಭಿಸಿದ್ದಾರೆ. ಬಹುಶಃ ಆ ಸಮಯದಲ್ಲಿ ನಟನನ್ನು ಕರೆದುಕೊಂಡು ಹೋಗಲು ಬಂದಿರಬಹುದು ಎಂದೂ ಹೇಳಿದ್ದಾರೆ.
ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಸೈಫ್ ಅಲಿ ಖಾನ್ ಮಂಗಳವಾರ ಡಿಸ್ಚಾರ್ಜ್ ಆಗಿದ್ದರು. ಇದನ್ನೂ ಓದಿ: ಮಹಾ ಕುಂಭಮೇಳದಲ್ಲಿ ಮಹಾಪ್ರಸಾದ ಬಡಿಸಿದ ಸುಧಾ ಮೂರ್ತಿ