ಮುಂಬೈ: ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯ ಎದ್ದಿರುವ ಶಿವಸೇನಾ ಶಾಸಕರು, ಅಸ್ಸಾಂನ ಪ್ರವಾಹ ಪರಿಹಾರ ನಿಧಿಗೆ 51 ಲಕ್ಷ ರೂ. ನೀಡಿದ್ದಾರೆ.
ಸಚಿವ ಏಕನಾಥ್ ಶಿಂಧೆ ನೇತೃತ್ವದಲ್ಲಿ ಶಿವಸೇನಾ ಶಾಸಕರು ಮಹಾರಾಷ್ಟ್ರ ಸರ್ಕಾರದ ವಿರುದ್ಧ ಬಂಡಾಯವೆದ್ದು ಗುಜರಾತ್‌ನ ಸೂರತ್‌ನ ಹೋಟೆಲ್‌ನಲ್ಲಿದ್ದರು. ನಂತರ ಅಸ್ಸಾಂನ ಗುವಾಹಟಿಯ ಹೋಟೆಲ್‌ಗೆ ಶಿಫ್ಟ್ ಆಗಿ ಕಳೆದ ಒಂದು ವಾರದಿಂದ ಅಲ್ಲಿ ಇದ್ದರು. ಇದನ್ನೂ ಓದಿ: ಮಹಾರಾಷ್ಟ್ರ ರಾಜಕೀಯ ಬಿಕ್ಕಟ್ಟು – ಸಂಜೆ 5 ಗಂಟೆಗೆ ಸುಪ್ರೀಂನಲ್ಲಿ ಮಹತ್ವದ ಅರ್ಜಿ ವಿಚಾರಣೆ
ಅಸ್ಸಾಂನ ಕೆಲವು ಭಾಗಗಳು ಭೀಕರ ಪ್ರವಾಹದಿಂದ ತತ್ತರಿಸಿರುವ ಸಂದರ್ಭದಲ್ಲೂ ಶಿವಸೇನಾ ಭಿನ್ನಮತೀಯರು ಗುವಾಹಟಿಯ ಐಷಾರಾಮಿ ಹೋಟೆಲ್‌ನಲ್ಲಿ ತಂಗಿದ್ದಾರೆ ಎಂಬ ಟೀಕೆಗಳು ಕೇಳಿಬಂದಿದ್ದವು. ಈ ನಡುವೆ ಶಿಂಧೆ ಅವರು ಅಸ್ಸಾಂ ಮುಖ್ಯಮಂತ್ರಿ ಪರಿಹಾರ ನಿಧಿಗೆ 51 ಲಕ್ಷ ರೂ. ನೀಡಿದ್ದಾರೆ.
ಸರ್ಕಾರದ ನಿರಂತರ ರಕ್ಷಣಾ ಕಾರ್ಯಕ್ಕೆ ಶಿಂಧೆ ಅವರು ಪರಿಹಾರ ನಿಧಿಗೆ ಧನ ಸಹಾಯ ಮಾಡಿದ್ದಾರೆ. ಇಲ್ಲಿನ ಜನರ ಕಷ್ಟವನ್ನು ನಾವು ನಿರ್ಲಕ್ಷಿಸುವಂತಿಲ್ಲ ಎಂದು ಬಂಡಾಯ ಶಾಸಕರ ತಂಡ ವಕ್ತಾರ ದೀಪಕ್ ಕೇಸಾರ್ಕರ್ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ರೆಬೆಲ್ ಶಾಸಕರು ನಾಳೆ ಮುಂಬೈಗೆ ಎಂಟ್ರಿ
ಅಸ್ಸಾಂನಲ್ಲಿ ಭೀಕರ ಪ್ರವಾಹ ಬಂದು ಸಂಕಷ್ಟ ಎದುರಾದ ಸಂದರ್ಭದಲ್ಲೇ ಶಿವಸೇನಾ ಬಂಡಾಯ ಶಾಸಕರು ಇಲ್ಲಿನ ಗುವಾಹಟಿಯ ಐಷರಾಮಿ ಹೋಟೆಲ್‌ಗೆ ಬಂದು ಬೀಡುಬಿಟ್ಟಿದ್ದರು. ಪ್ರವಾಹ ಪರಿಸ್ಥಿತಿ ಸಂದರ್ಭದಲ್ಲಿ ಇವರ ವರ್ತನೆಗೆ ಭಾರಿ ಟೀಕೆ ವ್ಯಕ್ತವಾಗಿತ್ತು. ಇಲ್ಲಿಂದ ಹೊರಡಿ ಎಂದು ಹೋಟೆಲ್ ಬಳಿ ಪ್ರತಿಭಟನೆ ಕೂಡ ನಡೆಸಲಾಗಿತ್ತು.
ನಾಳೆಯೇ ಬಹುಮತ ಸಾಬೀತುಪಡಿಸುವಂತೆ ಉದ್ಧವ್ ಠಾಕ್ರೆ ಅವರಿಗೆ ಮಹಾರಾಷ್ಟ್ರ ರಾಜ್ಯಪಾಲರು ಸೂಚನೆ ಕೊಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಬಂಡಾಯ ಶಾಸಕರು ಗುವಾಹಟಿಯಿಂದ ಮುಂಬೈಗೆ ಬರಲು ಸಿದ್ಧತೆ ನಡೆಸಿದ್ದಾರೆ.