LatestLeading NewsMain PostNational

6 ರಿಂದ 10 ಕಾಂಗ್ರೆಸ್ ಶಾಸಕರು ಬಿಜೆಪಿ ಸೇರ್ಪಡೆ?

Advertisements

ಪಣಜಿ: ಶಾಸಕ ದಿಗಂಬರ್ ಕಾಮತ್ ಅವರ ನೇತೃತ್ವದಲ್ಲಿ ಗೋವಾದ ಕಾಂಗ್ರೆಸ್ ಶಾಸಕರು ಬಂಡಾಯ ಏಳುವ ಅಂಚಿನಲ್ಲಿದ್ದು, ಕನಿಷ್ಠ 6 ರಿಂದ 10 ಮಂದಿ ಕಾಂಗ್ರೆಸ್ ಶಾಸಕರು ಬಿಜೆಪಿ ಸೇರುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ನಡುವೆ ಕಾಂಗ್ರೆಸ್ ಶಾಸಕ ಮೈಕಲ್ ಲೋಬೋ, ತಾನು ಬಿಜೆಪಿ ಸೇರುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಪಾಕ್ ಸೈನಿಕರಿಗೆ ಬಕ್ರೀದ್ ಶುಭಕೋರಿ ಸಿಹಿ ನೀಡಿದ ಭಾರತೀಯ ಯೋಧರು

Congress

ಬಿಜೆಪಿಯು ಕಾಂಗ್ರೆಸ್ ಶಾಸಕರಲ್ಲಿ ಗೊಂದಲ ಸೃಷ್ಟಿಸಿ ವದಂತಿ ಹಬ್ಬಿಸುತ್ತಿದೆ. ನಾನು ನನ್ನ ಮನೆಯಲ್ಲಿ ಕುಳಿತಿದ್ದೇನೆ. ಈ ಮಾತುಕತೆಗಳಲ್ಲಿ ಯಾವುದೇ ಸತ್ಯವಿಲ್ಲ. ವದಂತಿಗಳನ್ನು ಯಾರು ಹಬ್ಬಿಸುತ್ತಿದ್ದಾರೆಂದು ನನಗೆ ತಿಳಿದಿಲ್ಲ. ಆದರೆ ನಾನು ಎಲ್ಲಿಗೂ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ಸದ್ಯ ಗೋವಾದಲ್ಲಿ ಕಾಂಗ್ರೆಸ್ ಶಾಸಕರ ಸಭೆ ಕರೆಯಲಾಗಿದ್ದು, ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯ ಇಲ್ಲವೆಂದು ಕಾಂಗ್ರೆಸ್ ಹೇಳಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಮೋದಿ ಸೋಲಿಸಲು ಕಾಂಗ್ರೆಸ್‌ನವರು ಪಾಕಿಸ್ತಾನದ ಬೆಂಬಲ ಕೇಳಿದ್ರು – ಪ್ರಹ್ಲಾದ್ ಜೋಶಿ

40 ಸದಸ್ಯರ ಸದನದಲ್ಲಿ ಕಾಂಗ್ರೆಸ್‌ನ 11, ಬಿಜೆಪಿ 20, ಎಂಜಿಪಿ 2 ಹಾಗೂ ಮೂವರು ಪಕ್ಷೇತರ ಶಾಸಕರು ಇದ್ದಾರೆ. ಕಾಂಗ್ರೆಸ್‌ನ ಹಲವು ಶಾಸಕರನ್ನು ಬಿಜೆಪಿ ತನ್ನ ತೆಕ್ಕೆಗೆ ತೆಗೆದುಕೊಳ್ಳಲು ಮುಂದಾಗಿದ್ದು, ಇದು 2024ರ ಚುನಾವಣೆಯಲ್ಲಿ ಬಿಜೆಪಿಗೆ ಸುಗಮ ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.

Live Tv

Leave a Reply

Your email address will not be published.

Back to top button