ಮುಂಬೈ: ರಫೇಲ್ ವಿಮಾನ ಖರೀದಿ ವಿಚಾರದಲ್ಲಿ ಪ್ರಧಾನಿ ಮೋದಿ ಅನಿಲ್ ಅಂಬಾನಿಗೆ 30 ಸಾವಿರ ಕೋಟಿ ರೂ. ನೀಡಿದ್ದಾರೆ ಎಂದು ಆರೋಪಿಸುತ್ತಿರುವ ರಾಹುಲ್ ಗಾಂಧಿಗೆ ರಿಲಯನ್ಸ್ ಗ್ರೂಪ್ ತಿರುಗೇಟು ನೀಡಿದೆ.
ಈ ಸಂಬಂಧ ಹೇಳಿಕೆ ಬಿಡುಗಡೆ ಮಾಡಿರುವ ಅನಿಲ್ ಮಾಲೀಕತ್ವದ ರಿಲಯನ್ಸ್ ಕಂಪನಿ, ರಾಹುಲ್ ಗಾಂಧಿ ರಫೇಲ್ ಬಗ್ಗೆ ಮಾಡುತ್ತಿರುವ ಆರೋಪಗಳಿಗೆ ಯಾವುದೇ ಸಾಕ್ಷ್ಯ ನೀಡಿಲ್ಲ. ನಮ್ಮ ಕಂಪನಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಚುನಾವಣಾ ಸಮಯದಲ್ಲಿ ಸುಳ್ಳು ಆರೋಪ ಮಾಡಿದ ರಾಹುಲ್ ಗಾಂಧಿ ವಿರುದ್ಧ ಸುಪ್ರೀಂ ಕೋರ್ಟ್ ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆ ನಡೆಯುತ್ತಿದೆ ಎಂದು ಹೇಳಿದೆ.
Advertisement
Advertisement
ಕೇಂದ್ರದಲ್ಲಿ ಯುಪಿಎ ಅಧಿಕಾರದಲ್ಲಿದ್ದಾಗ 2004-2014ರ ಅವಧಿಯಲ್ಲಿ ರಿಲಯನ್ಸ್ ಗ್ರೂಪ್‍ಗೆ ಇಂಧನ, ಟೆಲಿಕಾಂ, ರಸ್ತೆ, ಮೆಟ್ರೋ ಸೇರಿದಂತೆ 1 ಲಕ್ಷ ಕೋಟಿ ರು. ಮೊತ್ತದ ಯೋಜನೆ ಗುತ್ತಿಗೆ ನೀಡಿತ್ತು. 10 ವರ್ಷಗಳ ಕಾಲ ಬೆಂಬಲಿಸಿದವರನ್ನು ಈಗ ಭ್ರಷ್ಟ ಉದ್ಯಮಿ ಎಂದು ಕರೆಯಲಾಗುತ್ತಿದೆ. ಹೀಗಾಗಿ 10 ವರ್ಷಗಳ ಕಾಲ ನಮಗೆ ಬೆಂಬಲ ನೀಡಿದ್ದು ಯಾರು ಎನ್ನುವುದನ್ನು ರಾಹುಲ್ ಗಾಂಧಿ ತಿಳಿಸಬೇಕು ಎಂದು ಆಗ್ರಹಿಸಿದೆ.
Advertisement
ಲೋಕಸಭಾ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ, ರಫೇಲ್ ವಿಮಾನ ಖರೀದಿಯಲ್ಲಿ ಮೋದಿ ಅಕ್ರಮ ಎಸಗಿದ್ದಾರೆ. ಅನಿಲ್ ಅಂಬಾನಿಗೆ ಲಾಭ ಮಾಡಿಕೊಟ್ಟಿದ್ದು 30 ಸಾವಿರ ಕೋಟಿ ರೂ. ನೀಡಿದ್ದಾರೆ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರಫೇಲ್ ವಿಮಾನ ಖರೀದಿಯ ಬಗ್ಗೆ ತನಿಖೆ ನಡೆಸುತ್ತದೆ ಎಂದು ಭಾಷಣದಲ್ಲಿ ಹೇಳುತ್ತಿದ್ದಾರೆ.