ಬೆಂಗಳೂರು: ಕುರುಬ ಸಮುದಾಯವನ್ನು (Kuruba Community) ಪರಿಶಿಷ್ಟ ಪಂಗಡ (ST) ಸಮುದಾಯಕ್ಕೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
ಮಂಗಳವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತು ನಿರ್ಧಾರ ಮಾಡಲಾಗಿದ್ದು, ಈ ಸಂಬಂಧ ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿಯಿಂದ ಕೇಂದ್ರ ಸರ್ಕಾರಕ್ಕೆ ಪತ್ರವನ್ನು ಕಳುಹಿಸಲಾಗಿದೆ. ಇದನ್ನೂ ಓದಿ: ವಿಪಕ್ಷ ನಾಯಕರಿಲ್ಲದೆ ಬಜೆಟ್ ಅಧಿವೇಶನ ನಡೀತಿರೋದು ಇದೇ ಮೊದಲು: ಬಿಜೆಪಿ ವಿರುದ್ಧ ಸಿಎಂ ಗುಡುಗು
Advertisement
Advertisement
ಈ ಹಿಂದೆ ಮೈಸೂರು, ಚಾಮರಾಜನಗರ ಜಿಲ್ಲೆಯ ಕೆಲ ಪ್ರದೇಶಗಳಲ್ಲಿ ಇದ್ದ ಕಾಡು ಕುರುಬರನ್ನು ಮಾತ್ರವೇ ಎಸ್ಟಿ ಪಂಗಡಕ್ಕೆ ಸೇರಿಸಲಾಗಿತ್ತು. ಬಳಿಕ 2020-21ರಲ್ಲಿ ರಾಜ್ಯಾದ್ಯಂತ ಎಲ್ಲಾ ಕುರುಬ ಸಮುದಾಯದವರನ್ನು ಎಸ್ಟಿ ಸಮುದಾಯಕ್ಕೆ ಸೇರಿಸುವಂತೆ ನಿರಂಜನಾನಂದ ಪುರಿ ಸ್ವಾಮೀಜಿ ಹಾಗೂ ಸಮುದಾಯದ ಮುಖಂಡರು ಕಾಗಿನೆಲೆಯಿಂದ ಬೆಂಗಳೂರಿನವರೆಗೂ ಬೃಹತ್ ಪಾದಯಾತ್ರೆ ನಡೆಸಿದ್ದರು. ಇದನ್ನೂ ಓದಿ: ಭಾರತದ ಶ್ರೀಮಂತ ಶಾಸಕರಲ್ಲಿ ಡಿ.ಕೆ. ಶಿವಕುಮಾರ್ ನಂ.1
Advertisement
ಈಗ ರಾಜ್ಯಾದ್ಯಂತ ಎಲ್ಲ ಕುರುಬ ಸಮುದಾಯದವರನ್ನು ಎಸ್ಟಿಗೆ ಸೇರಿಸುವಂತೆ ರಾಜ್ಯ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿದೆ.
Advertisement
Web Stories