ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನದ ಫೋಷಣೆಯನ್ನು ನಿನ್ನೆ ಮಾಡಲಾಗಿದ್ದು, ಈ ಹಿಂದೆಯೇ ಇವರಿಗೆ ಪದ್ಮಶ್ರೀಗೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗಿದೆ.
Advertisement
ಅಪ್ಪುಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನಿನ್ನೆ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು. ಈ ಹಿನ್ನೆಲೆ ಮುಂದಿನ ವಾರ ನವೆಂಬರ್ 26 ರಂದು ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಬಗ್ಗೆ ಮಹತ್ವದ ಚರ್ಚೆ ಮಾಡಲಾಗುವುದು. ಇದರ ಜೊತೆಗೆ ಪದ್ಮಶ್ರೀ ನೀಡಲು ಸಹ ಕೇಂದ್ರಕ್ಕೆ ಶಿಫಾರಸ್ಸು ಮಾಡಲು ತೀರ್ಮಾನಿಸಲಾಗುತ್ತೆ. ಇದನ್ನೂ ಓದಿ: ಪುನೀತ್ ರಾಜ್‌ಕುಮಾರ್‌ಗೆ ಕರ್ನಾಟಕ ರತ್ನ ಪ್ರಶಸ್ತಿ- ಸಿಎಂ ಘೋಷಣೆ
Advertisement
Advertisement
ಬೊಮ್ಮಾಯಿ ಅವರು ಸಚಿವ ಸಂಪುಟದಲ್ಲಿ ಸಹೋದ್ಯೋಗಿಗಳ ಜತೆ ಚರ್ಚಿಸಿ ಪ್ರಶಸ್ತಿ ಪ್ರದಾನಕ್ಕೆ ದಿನಾಂಕ ನಿಗದಿ ಪಡೆಸುತ್ತಾರೆ. ಬೊಮ್ಮಾಯಿ ಅವರು ಪ್ರಶಸ್ತಿ ಪ್ರದಾನಕ್ಕೆ ಅರ್ಥವತ್ತಾದ, ಅಚ್ಚುಕಟ್ಟು ಕಾರ್ಯಕ್ರಮ ಆಯೋಜಿಸಲೂ ಚರ್ಚಿಸಲಿದ್ದಾರೆ. ಅದು ಅಲ್ಲದೇ ನವೆಂಬರ್ 17 ರ ಸಂಪುಟ ಸಭೆಯಲ್ಲಿ ಅಪ್ಪುಗೆ ಮರಣೋತ್ತರ ಪದ್ಮಶ್ರೀ ಪ್ರಶಸ್ತಿಗೆ ಕೇಂದ್ರಕ್ಕೆ ಶಿಫಾರಸ್ಸು ಮಾಡುವ ಬಗ್ಗೆಯೂ ಚರ್ಚೆ ಮಾಡಲಿದ್ದಾರೆ. ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿ ಹಲವು ಅಭಿಮಾನಿಗಳಿಂದ ಪದ್ಮಶ್ರೀ ಪ್ರಶಸ್ತಿಗೂ ಒತ್ತಾಯ ಬರುತ್ತಿರುವ ಹಿನ್ನೆಲೆ ಕೇಂದ್ರಕ್ಕೆ ಪದ್ಮಶ್ರೀ ಶಿಫಾರಸ್ಸು ಮಾಡುವ ಬಗ್ಗೆ ಚರ್ಚಿಸಿ ನಿರ್ಧಾರ ಸಾಧ್ಯತೆ ಇದೆ. ಇದರ ಜೊತೆಗೆ ಪುನೀತ್ ಸ್ಮರಣಾರ್ಥಕ್ಕೆ ಮತ್ತೊಂದಷ್ಟು ಕಾರ್ಯಕ್ರಮ, ಯೋಜನೆಗಳ ಬಗ್ಗೆಯೂ ಬೊಮ್ಮಾಯಿ ಅವರು ಚರ್ಚಿಸಲಿದ್ದಾರೆ.
Advertisement
ಪ್ರಸ್ತುತ ಸರ್ಕಾರ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನಕ್ಕೆ ತಾತ್ಕಾಲಿಕವಾಗಿ ಮೂರು ಮುಹೂರ್ತಗಳನ್ನು ನಿಗದಿ ಮಾಡಿಕೊಂಡಿದೆ ಎನ್ನಲಾಗಿದೆ. ಚಳಿಗಾಲದ ಅಧಿವೇಶನದ ಬಳಿಕ ಪ್ರಶಸ್ತಿ ಪ್ರದಾನಕ್ಕೆ ಮುಹೂರ್ತ ನಿಗದಿ ಮಾಡುವ ಚಿಂತನೆ ಇದೆ. ಹೊಸ ವರ್ಷದ ಜನವರಿಯಲ್ಲಿ ಪ್ರಶಸ್ತಿ ಕೊಡುವ ಬಗ್ಗೆಯೂ ಚಿಂತನೆ ಇದೆ. ಪುನೀತ್ ಜನ್ಮದಿನವಾದ ಮಾರ್ಚ್ 17 ರಂದು ಪ್ರಶಸ್ತಿ ಪ್ರದಾನ ಮಾಡುವ ಸಾಧ್ಯತೆಯೂ ಇದೆ. ಈ ಮೂರು ಸಂದರ್ಭಗಳ ಪೈಕಿ ಸರ್ಕಾರ ಒಂದು ದಿನಾಂಕ ನಿಗದಿ ಮಾಡಲಿದೆ. ಇದನ್ನೂ ಓದಿ: ʼಅಪ್ಪುʼಗೆ ನನ್ನ ದೃಷ್ಟಿಯೇ ತಾಗಿತೇನೊ ಅನಿಸುತ್ತೆ: ತಮ್ಮನ ನೆನೆದು ಶಿವಣ್ಣ ಕಣ್ಣೀರು