-ವಾರ್ಷಿಕವಾಗಿ 5 ಸಾವಿರ ಟನ್ ತುಪ್ಪಕ್ಕೆ ಬೇಡಿಕೆಯಿಟ್ಟಿರುವ ಟಿಟಿಡಿ
ಅಮರಾವತಿ: ತಿರುಪತಿ ತಿಮ್ಮಪ್ಪನ ಸನ್ನಿಧಿಯಲ್ಲಿ (Tirupati Timmappa Temple) ದಾಖಲೆಯ ಕೆಎಂಎಫ್ (KMF) ನಂದಿನಿ ತುಪ್ಪ ರವಾನೆಯಾಗುತ್ತಿದ್ದು, ಬೇಡಿಕೆ ಹೆಚ್ಚಾಗಿದೆ.
ಹೌದು, ತಿರುಪತಿಯಲ್ಲಿ ಈ ಹಿಂದೆ ಬೇರೆ ಬ್ರ‍್ಯಾಂಡ್ ತುಪ್ಪ ಬಳಸಿ ಲಡ್ಡು ತಯಾರಿಸಲಾಗುತ್ತಿತ್ತು. ಆದರೆ ಇದೀಗ ಲಡ್ಡು ತಯಾರಿಕೆಗಾಗಿ ಕೆಎಂಎಫ್ ನಂದಿನಿ ತುಪ್ಪವನ್ನು ಮಾತ್ರ ಬಳಸುತ್ತಿದ್ದು, ಇದರ ಹೊರತಾಗಿ ಬೇರೆ ಯಾವುದೇ ತುಪ್ಪವನ್ನು ಬಳಸುತ್ತಿಲ್ಲ. ಸದ್ಯ ಯುಗಾದಿ ಸಮೀಪಿಸುತ್ತಿದ್ದು, ಈ ಹಿನ್ನೆಲೆ ಲಡ್ಡು ತಯಾರಿಕೆಗಾಗಿ ತುರ್ತು 2 ಸಾವಿರ ಟನ್ ತುಪ್ಪವನ್ನು ಕಳುಹಿಸಿಕೊಡುವಂತೆ ಟಿಟಿಡಿ (TTD) ಕೆಎಂಎಫ್‌ಗೆ ಸೂಚಿಸಿದ್ದು, ಈ ತಿಂಗಳಲ್ಲಿ ಸಪ್ಲೈ ಮಾಡುವಂತೆ ತಿಳಿಸಿದೆ.ಇದನ್ನೂ ಓದಿ: ಗೋಲ್ಡನ್ ಸ್ಟಾರ್ ಗಣೇಶ್‌ಗೆ ಜೋಡಿ- ಕನ್ನಡಕ್ಕೆ ಬಂದ ‘ಹನುಮಾನ್’ ಖ್ಯಾತಿಯ ಅಮೃತಾ ಅಯ್ಯರ್
ಸತತವಾಗಿ ಕೆಎಂಎಫ್ ನಂದಿನಿಗೆ ಮಾತ್ರ ಟಿಟಿಡಿ ಟೆಂಡರ್ ಕೊಡುತ್ತಿದೆ. ಈ ಮೊದಲು ತಿಮ್ಮಪ್ಪನ ಸನ್ನಿಧಾನಕ್ಕೆ ಎರಡು ದಿನಕ್ಕೆ ಒಮ್ಮೆ ತುಪ್ಪ ರವಾನೆಯಾಗುತ್ತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ಪ್ರತಿ ದಿನವೂ ತುಪ್ಪ ರವಾನೆಯಾಗುತ್ತಿದೆ. ಈ ವರ್ಷ 5 ಸಾವಿರ ಟನ್ ತುಪ್ಪವನ್ನು ರವಾನಿಸುವಂತೆ ಟಿಟಿಡಿ ಕೆಎಂಎಫ್‌ಗೆ ಬೇಡಿಕೆ ಇಟ್ಟಿದ್ದು, ಈಗಾಗಲೇ 600 ಟನ್ ತುಪ್ಪ ಕಳುಹಿಸಿಕೊಡಲಾಗಿದೆ.
ಬೇಸಿಗೆ ಕಾಲವಾಗಿರುವುದರಿಂದ ಹಾಲಿನ ಸಂಗ್ರಹದಲ್ಲಿಯೂ ಕುಸಿತ ಕಂಡಿದ್ದು, ಸಂಗ್ರಹವಿರುವ ಬೆಣ್ಣೆಯಲ್ಲಿ ಶೀಘ್ರ ತುಪ್ಪ ತಯಾರಿಕೆ ಮಾಡುವಂತೆ ಕೆಎಂಎಫ್ ಯೂನಿಯನ್‌ಗಳಿಗೆ ಸೂಚನೆ ನೀಡಿದೆ.ಇದನ್ನೂ ಓದಿ: ನಟಿ ರನ್ಯಾಗೆ ಸರ್ಕಾರ ಕ್ಲೀನ್‌ಚಿಟ್ ಕೊಟ್ಟರೂ ಆಶ್ಚರ್ಯ ಇಲ್ಲ: ಸುರೇಶ್ ಬಾಬು