ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಈ ವರ್ಷ ದಾಖಲೆಯ ಮಟ್ಟದಲ್ಲಿ ಡ್ರಿಂಕ್ ಅಂಡ್ ಡ್ರೈವ್ (Drink And Drive) ಕೇಸ್‍ಗಳು ದಾಖಲಾಗಿದೆ.
ಹೌದು. 2022 ಅಂತ್ಯಗೊಂಡು, 2023 ಪ್ರಾರಂಭವಾಗಲು ಐದೇ ದಿನ ಬಾಕಿಯಿದೆ. ಈಗಾಗಲೇ 2023ರ ಆಚರಣೆಗೆ ಅದ್ಧೂರಿಯ ಸಿದ್ಧತೆಯು ಪ್ರಾರಂಭಗೊಂಡಿದ್ದು, ಎಲ್ಲಾ ಪಬ್‍ಗಳು ಬುಕ್ ಆಗಿದೆ. ಆದರೆ ಕೇವಲ ಸಿಲಿಕಾನ್ ಸಿಟಿಯೊಂದರಲ್ಲಿ ಈ ವರ್ಷದ ನವೆಂಬರ್‌ವರೆಗೆ 26,017 ಮಂದಿಯ ವಿರುದ್ಧ ಡ್ರಿಂಕ್ ಅಂಡ್ ಡ್ರೈವ್ ಕೇಸ್‍ಗಳು ದಾಖಲಾಗಿದೆ ಎಂಬ ವಿಷಯ ಬೆಳಕಿಗೆ ಬಂದಿದೆ.
Advertisement
Advertisement
ಈ ಮೂಲಕ ಸರ್ಕಾರದ ಬೊಕ್ಕಸಕ್ಕೆ ವಾಹನ ಸವಾರರು 26 ಕೋಟಿ ರೂ. ಸಂದಾಯ ಮಾಡಿದ್ದಾರೆ. 2020 ಹಾಗೂ 2021ರಲ್ಲಿ ಕೋವಿಡ್ ಹಿನ್ನೆಲೆ ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ಅಷ್ಟಾಗಿ ನಡೆದಿರಲಿಲ್ಲ. ಆದರೆ ಈ ವರ್ಷ ಅಪಘಾತ ತಡೆಯುವ ಸಲುವಾಗಿ ಸಂಚಾರಿ ಪೊಲೀಸರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸಿದ್ದಾರೆ. ಇದನ್ನೂ ಓದಿ: ಇಂಧನ ಟ್ಯಾಂಕರ್ ಭೀಕರ ಸ್ಫೋಟ – 10 ಸಾವು, 40 ಮಂದಿಗೆ ಗಾಯ
Advertisement
Advertisement
2020ರಲ್ಲಿ 5,343 ಡ್ರಿಂಕ್ ಅಂಡ್ ಡ್ರೈವ್ ಕೇಸ್‍ಗಳು ದಾಖಲಾಗಿದ್ದವು. 2021ರಲ್ಲಿ 4,144 ಡ್ರಿಂಕ್ ಅಂಡ್ ಡ್ರೈವ್ ಕೇಸ್‍ಗಳು ದಾಖಲಾಗಿದ್ದವು. ಆದರೆ ಈ ಬಾರಿ ಸಾಕಷ್ಟು ಜನ ಕುಡಿದು ಗಾಡಿ ಓಡಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾರೆ. ಇದನ್ನೂ ಓದಿ: ಕೈ ನಾಯಕ ಅಲ್ತಾಫ್ ಖಾನ್ ಮನೆ ಬಳಿ ಹೊಂಚು ಹಾಕಿದ್ದ ಮೂವರು ವಶಕ್ಕೆ