ಬೆಂಗಳೂರು: ಬೆಂಗಳೂರು (Bengaluru) ನಗರದ ಬೃಹತ್ ಕಟ್ಟಡ ಸಮುಚ್ಚಯಗಳ ತ್ಯಾಜ್ಯ ನೀರನ್ನು ಸಂಸ್ಕರಿಸಿ, ಶುದ್ಧೀಕರಿಸಿ ಅದನ್ನು ಪುನರ್‌ಬಳಕೆಗೆ ಮಾರಾಟ ಮಾಡಲು ಅವಕಾಶ ನೀಡುವ ಕುರಿತಂತೆ ಮಾನದಂಡಗಳನ್ನು ರೂಪಿಸಿ 1 ವಾರದೊಳಗೆ ಸರ್ಕಾರಿ ಆದೇಶ ಹೊರಡಿಸಲಾಗುತ್ತದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ (Eshwara Khandre) ತಿಳಿಸಿದರು.
ಕರ್ನಾಟಕ ಚೌಗುಭೂಮಿ ಪ್ರಾಧಿಕಾರದ ಅಂತರ್ಜಾಲ ತಾಣಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ರಾಜ್ಯದ ರಾಜಧಾನಿಯಲ್ಲಿ ಜನಸಂಖ್ಯೆ ಹೆಚ್ಚಳವಾಗುತ್ತಿದ್ದು, ಅದಕ್ಕೆ ಅನುಗುಣವಾಗಿ ನೀರು ಪೂರೈಕೆ ಕಷ್ಟ ಸಾಧ್ಯವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಲಮೂಲಗಳ ರಕ್ಷಣೆ ಮತ್ತು ನೀರಿನ ಮರುಬಳಕೆಗೆ ಆದ್ಯತೆ ನೀಡುವ ಅಗತ್ಯವಿದೆ ಎಂದರು. ಇದನ್ನೂ ಓದಿ: ಬೆಂಗಳೂರು ಬಿಸಿ ಬಿಸಿ; 4 ವರ್ಷದ ದಾಖಲೆ ಮುರಿದ ಸಿಲಿಕಾನ್ ಸಿಟಿ
Advertisement
Advertisement
ಸೂಕ್ತ ರೀತಿಯಲ್ಲಿ ನೀರು ಸಂಸ್ಕರಿಸಿದರೆ ಬೆಂಗಳೂರು ನಗರದಲ್ಲಿ ನಿತ್ಯ 250ರಿಂದ 300 ಎಂಎಲ್‌ಡಿ ಯಷ್ಟು ನೀರು ಮರುಬಳಕೆಗೆ ಲಭಿಸಲಿದೆ. ಆದರೆ ಈ ನೀರನ್ನು ಯಾವುದೇ ಕಾರಣಕ್ಕೂ ಕುಡಿಯಲು, ಔಷಧ ಮತ್ತು ಆಹಾರ ತಯಾರಿಕೆಗೆ ಬಳಸದಂತೆ ನಿರ್ಬಂಧಿಸಲಾಗುವುದು. ಮಾರಾಟ ಮಾಡಲಾಗುವ ಮರುಬಳಕೆ ನೀರಿನ ಶುದ್ಧತೆಯ ಜವಾಬ್ದಾರಿ ಕಟ್ಟಡ ಸಮುಚ್ಚಯಗಳ ಸಂಘಗಳು, ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ಬಿಡಬ್ಲ್ಯುಎಸ್‌ಎಸ್‌ಬಿ ಮತ್ತಿತರ ಪೂರಕ ಸಂಸ್ಥೆಗಳ ಮೇಲೂ ಇರುತ್ತದೆ ಎಂದರು.
Advertisement
Advertisement
ಬಹುಮಹಡಿ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ತ್ಯಾಜ್ಯ ಜಲವನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಆ ನೀರನ್ನು ಹತ್ತಿರದ ಕೆರೆಗಳಿಗೆ ಕೊಳವೆಯ ಮೂಲಕ ಹರಿಸಿದರೆ ಕೆರೆಗಳಲ್ಲಿ ನೀರೂ ಇರುತ್ತದೆ. ಜೊತೆಗೆ ಅಂತರ್ಜಲ ಮಟ್ಟವೂ ಹೆಚ್ಚುತ್ತದೆ. ಈ ಕುರಿತಂತೆ ಇಂದು ಬಿಬಿಎಂಪಿ, ಬಿಡಿಎ, ನಗರಾಭಿವೃದ್ಧಿ ಇಲಾಖೆ, ಪರಿಸರ ಇಲಾಖೆಯ ಅಧಿಕಾರಿಗಳು ಮತ್ತು ಕಟ್ಟಡ ಸಮುಚ್ಚಯಗಳ ನಿವಾಸಿಗಳ ಸಂಘದ ಪ್ರತಿನಿಧಿಗಳ ಸಭೆಯಲ್ಲಿ ಸೂಚಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಬೆಂಗಳೂರಿನಲ್ಲಿ ಹೊಸ ನಿಯಮ – ಒಬ್ಬರಿಗೆ ಒಂದೇ ಕ್ಯಾನ್ ನೀರು!