ಬೆಂಗಳೂರು: ದೋಸ್ತಿ ಸರ್ಕಾರದ ಭವಿಷ್ಯ ಇಂದು ನಿರ್ಧಾರವಾಗಲಿದೆ. ಸರ್ಕಾರ ಉರುಳಿದರೆ ಏನಾಗುತ್ತೋ? ಉಳಿಯದಿದ್ದರೆ ಇನ್ನೇನೂ ಆಗುತ್ತೋ ಎನ್ನುವ ಆತಂಕ ಶುರುವಾಗಿದ್ದು, ಈ ಹಿನ್ನೆಲೆಯಲ್ಲಿ ಶುಕ್ರವಾರದಂದು ಇಡೀ ಬೆಂಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
Advertisement
ಬೆಂಗಳೂರಿನಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ ವಹಿಸಲಾಗಿದ್ದು, ಬರೋಬ್ಬರಿ 10 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ವಿಧಾನಸೌದ ಸುತ್ತಮುತ್ತ, ರಾಜಭವನದ ಸುತ್ತಮುತ್ತ ಬರೋಬ್ಬರಿ ಐದು ಸಾವಿರ ಪೊಲೀಸರನ್ನು ನಿಯೋಜನೆ ಮಾಡಿದ್ದು ಎಚ್ಚರಿಕೆ ವಹಿಸಲಾಗಿದೆ.
Advertisement
Advertisement
ಬೆಂಗಳೂರು ನಗರದ ಎಲ್ಲಾ ಪೊಲೀಸರು, ಬೆಂಗಳೂರು ಹೊರವಲಯದ ಪೊಲೀಸರು, 15 ಪೆಟ್ಲೋನ್ ಕೆಎಸ್‌ಆರ್‌ಪಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಅಲ್ಲದೇ ಎಲ್ಲಾ ಪ್ರಮುಖ ರಾಜಕಾರಣಿಗಳ ಮನೆಗೆ ಬಂದೋಬಸ್ತ್ ಮಾಡಲಾಗಿದೆ.
Advertisement
ಅದರಲ್ಲೂ ಅತೃಪ್ತ ಶಾಸಕರ ಮನೆಗಳಿಗೆ ಹೆಚ್ಚಿನ ಭದ್ರತೆ ನೀಡಲಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ವಿಧಾನಸೌದದ ಸುತ್ತ ನಿಷೇಧಾಜ್ಞೆ ಹೇರುವ ಸಾಧ್ಯತೆಯಿದೆ.