ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಕೇಂದ್ರ ಹವಾಮಾನ ಇಲಾಖೆ ಜುಲೈ 18ರಿಂದ 23 ರವರೆಗೆ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂಬ ಮುನ್ಸೂಚನೆ ನೀಡಿತ್ತು.
ಈ ಹಿನ್ನೆಲೆಯಲ್ಲಿ ಆರೆಂಜ್ ಅಲರ್ಟ್ ಮಾಡಲಾಗಿತ್ತು. ಆದರೆ ಆರೆಂಜ್ ಅಲರ್ಟ್ ಗಿಂತ ಹೆಚ್ಚಿನ ಅಂದ್ರೆ 204.5 ಎಂಎಂ ಮಳೆ ಬೀಳುವ ಸಾಧ್ಯತೆವಿರುವ ಹಿನ್ನೆಲೆಯಲ್ಲಿ ಇದೀಗ ಕೊಡಗಿನಲ್ಲಿ ಇಂದಿನಿಂದ 22ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
Advertisement
Advertisement
ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಹಾಗೂ ಪ್ರವಾಸಿಗರ ಸುರಕ್ಷತೆ ದೃಷ್ಟಿಯಿಂದ ಎಚ್ಚರದಿಂದ ಇರಲು ಕೊಡಗು ಜಿಲ್ಲಾಧಿಕಾರಿ ಅನೀಸ್ ಕಣ್ಮನಿ ಜಾಯ್ ಸೂಚನೆ ನೀಡಿದ್ದಾರೆ. ಈಗಾಗಲೇ ಎನ್‍ಡಿಆರ್‍ಎಫ್ ತಂಡ ಜಿಲ್ಲೆಯಲ್ಲಿ ಬೀಡು ಬಿಟ್ಟಿದ್ದು ಅನಾಹುತಗಳು ಸಂಭವಿಸಿದರೆ ತಕ್ಷಣವೇ ಅ ಸ್ಥಳಗಳಿಗೆ ತಲಪುವ ವ್ಯವಸ್ಥೆಗಳು ಹಾಗೂ ಜನರಿಗೆ ಧೈರ್ಯ ತುಂಬುವ ಕೆಲಸ ಆಗುತ್ತಿದೆ.
Advertisement
Advertisement
ಪ್ರಾಕೃತಿಕ ವಿಕೋಪ ಸಮಸ್ಯೆಗಳಿಗೆ ಸಹಾಯವಾಣಿ 08272 – 221077 ತುರ್ತು ಟೋಲ್ ಫ್ರೀ ನಂಬರ್ ಸಂಪರ್ಕಿಸುವಂತೆ ಕೊಡಗು ಜಿಲ್ಲಾಡಳಿತ ಮನವಿ ಮಾಡಿದೆ.