Bengaluru CityDistrictsKarnatakaLatestMain Post

ಮೇ 18ಕ್ಕೆ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ – ರೆಡ್ ಅಲರ್ಟ್ ಘೋಷಣೆ

ಬೆಂಗಳೂರು: ಮೇ 18ರಂದು ರಾಜ್ಯದ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಮೇ 17ಕ್ಕೆ ಆರೆಂಜ್ ಅಲರ್ಟ್ ನೀಡಿದ್ದು, ಮೇ 19 ರಿಂದ 21ರ ವರೆಗೆ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದರೊಂದಿಗೆ ದಕ್ಷಿಣ ಒಳನಾಡು ಭಾಗದಲ್ಲೂ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇದನ್ನೂ ಓದಿ: ಎರಡಂಕಿಗೆ ಇಳಿಕೆ ಕಂಡ ಕೊರೊನಾ – ನಿನ್ನೆಗಿಂತ ಇಂದು 28 ಕೇಸ್ ಇಳಿಮುಖ

ಅಲರ್ಟ್ ಘೋಷಣೆಯ ದಿನಗಳಲ್ಲಿ 100 ಮಿ.ಮೀ ಇಂದ 150 ಮಿ.ಮೀ ಮೇಲ್ಪಟ್ಟು ಮಳೆಯಾಗುವ ಸಾಧ್ಯತೆ ಇದೆ. 3 ದಿನಗಳಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಕರಾವಳಿ ಜಿಲ್ಲೆಗಳಲ್ಲಿ ತುರ್ತು ಮುಂಜಾಗೃತಾ ಕ್ರಮವನ್ನು ಕೈಗೊಳ್ಳಲಾಗಿದೆ.

ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿತೀರ, ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಎಚ್ಚರ ವಹಿಸಬೇಕು. ಅಲರ್ಟ್ ಘೋಷಿಸಿದ ದಿನಗಳಲ್ಲಿ ಮೀನುಗಾರರು ಕಡ್ಡಾಯವಾಗಿ ಮೀನುಗಾರಿಕೆಗೆ ಸಮುದ್ರಕ್ಕೆ ಇಳಿಯಬಾರದು. ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿ ತೀರಕ್ಕೆ ಹಾಗೂ ಸಮುದ್ರ ತೀರಕ್ಕೆ ತೆರಳದಂತೆ ವಿಪತ್ತು ನಿರ್ವಹಣಾ ಪ್ರಾಧಿಕಾರ ಎಚ್ಚರಿಕೆ ನೀಡಿದೆ. ಇದನ್ನೂ ಓದಿ: ಕೋವಿಡ್-19 ಲಸಿಕೆ ಕಾರ್ಬೆವಾಕ್ಸ್ ಬೆಲೆ 250 ರೂ.ಗೆ ಇಳಿಕೆ

6 ದಿನಕ್ಕೂ ಮೊದಲು ನೈರುತ್ಯ ಮುಂಗಾರು:
ಸೋಮವಾರ ನೈರುತ್ಯ ಮುಂಗಾರು ಅಂಡಮಾನ್ ಹಾಗೂ ನಿಕೋಬಾರ್ ದ್ವೀಪಗಳಿಗೆ ಆಗಮಿಸಿದ್ದು, ನಿಗದಿತ ಸಮಯಕ್ಕಿಂತಲೂ 6 ದಿನ ಮುಂಚಿತವಾಗಿ ಪ್ರಾರಂಭವಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ(ಐಎಂಡಿ) ತಿಳಿಸಿದೆ.

ಸೋಮವಾರದಿಂದ ಬುಧವಾರದವರೆಗೆ ತಮಿಳುನಾಡಿನಲ್ಲಿ ಹಾಗೂ ಮುಂದಿನ 2 ದಿನಗಳಲ್ಲಿ ಲಕ್ಷದ್ವೀಪ ಪ್ರದೇಶದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಬುಧವಾರ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

Leave a Reply

Your email address will not be published.

Back to top button