ಡೆಹ್ರಾಡೂನ್: ಆಗಸ್ಟ್ 14 ಮತ್ತು 15ರಂದು ಹವಾಮಾನ ಇಲಾಖೆಯು (Meteorological Department) ಉತ್ತರಾಖಂಡದಲ್ಲಿ (Uttarakhand) ರೆಡ್ ಅಲರ್ಟ್ ಘೋಷಿಸಿದ ಹಿನ್ನೆಲೆ ಚಾರ್ ಧಾಮ್ ಯಾತ್ರೆಯನ್ನು (Char Dham Yatra) ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ವರದಿಗಳು ತಿಳಿಸಿವೆ.
ಉತ್ತರಾಖಂಡದಲ್ಲಿ ಎಡೆಬಿಡದೆ ಮಳೆ (Rain) ಸುರಿಯುತ್ತಿರುವ ಪರಿಣಾಮ ಹಲವು ಕಡೆ ಭೂಕುಸಿತ ಉಂಟಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟವನ್ನು ಮೀರಿ ಹರಿಯುತ್ತಿದೆ. ಇದರಿಂದಾಗಿ ಬದರಿನಾಥ, ಕೇದಾರನಾಥ, ಗಂಗೋತ್ರಿಯಂತಹ ಪವಿತ್ರ ಕ್ಷೇತ್ರಗಳಿಗೆ ಹೋಗುವ ರಾಷ್ಟ್ರೀಯ ಹೆದ್ದಾರಿಗಳಿಗೆ ಅಡಚಣೆ ಉಂಟಾಗಿದೆ. ರುದ್ರಪ್ರಯಾಗ, ದೇವಪ್ರಯಾಗ ಮತ್ತು ಶ್ರೀನಗರದಲ್ಲಿ ಗಂಗಾ, ಮಂದಾಕಿನಿ ಮತ್ತು ಅಲಕಾನಂದ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಭಾರೀ ಮಳೆಯಿಂದ ಭೂಕುಸಿತ ಉಂಟಾಗಿ ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ಹಲವು ರಸ್ತೆಗಳು ಬಂದ್ ಆಗಿದೆ. ಇದನ್ನೂ ಓದಿ: ಭಾರೀ ಮಳೆಗೆ ಶಿಮ್ಲಾದಲ್ಲಿ ದೇವಾಲಯ ಕುಸಿತ – 9 ಸಾವು, ಹಲವರು ಸಿಲುಕಿರುವ ಶಂಕೆ
Advertisement
Advertisement
ಡೆಹ್ರಾಡೂನ್ ಮತ್ತು ನೈನಿತಾಲ್ ಸೇರಿದಂತೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ. ಸತತವಾಗಿ ಸುರಿಯುತ್ತಿರುವ ಮುಂಗಾರು ಮಳೆಯಿಂದ ಗುಡ್ಡಗಾಡು ರಾಜ್ಯಗಳು ತೀವ್ರವಾಗಿ ನಲುಗಿದ್ದು, 60 ಮಂದಿ ಸಾವನ್ನಪ್ಪಿದ್ದು, 17 ಮಂದಿ ನಾಪತ್ತೆಯಾಗಿದ್ದಾರೆ ಎಂದು ವರದಿಗಳು ತಿಳಿಸಿದೆ. ಇದನ್ನೂ ಓದಿ: 10,000 ಪೊಲೀಸರು.. ಆ್ಯಂಟಿ ಡ್ರೋನ್ ಸಿಸ್ಟಮ್, ಅತ್ಯಾಧುನಿಕ ಕ್ಯಾಮೆರಾ – ಸ್ವಾತಂತ್ರ್ಯೋತ್ಸವಕ್ಕೆ ಕೆಂಪು ಕೋಟೆಯಲ್ಲಿ ಬಿಗಿ ಭದ್ರತೆ
Advertisement
Advertisement
ಕಳೆದೆರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯು ಪಾಶ್ಚಿಮಾತ್ಯ ಪ್ರಕ್ಷ್ಯುಬ್ಧತೆಯ ಪರಿಣಾಮವಾಗಿದೆ. ಮಾನ್ಸೂನ್ ಟ್ರಫ್‌ನ (Mansoon Trough) ಸ್ಥಳವು ಹಿಮಾಲಯದ ತಪ್ಪಲಿನಲ್ಲಿರುವುದರಿಂದ ನೈಋತ್ಯ ಅರೇಬಿಯನ್ ಸಮುದ್ರದ ಮಾನ್ಸೂನ್ ಮಾರುತಗಳು ಹಿಮಾಲಯದ ತಪ್ಪಲನ್ನು ಹೊಡೆಯುತ್ತಿವೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ವರದಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ಹಿಮಾಚಲದಲ್ಲಿ ಮೇಘಸ್ಫೋಟಕ್ಕೆ 7 ಬಲಿ – ಕೊಚ್ಚಿ ಹೋದ ಮನೆಗಳು
Web Stories