ಉಡುಪಿ/ಕಾರವಾರ/ಮಂಗಳೂರು: ಉಡುಪಿ, ದಕ್ಷಿಣ ಕನ್ನಡ ಹಾಗೂ ಕಾರವಾರದಲ್ಲಿ ಭಾರೀ ಮಳೆಯ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ಶುಕ್ರವಾರ ರಜೆ ಘೋಷಿಸಲಾಗಿದೆ.
ಸತತ ಮೂರು ದಿನಗಳಿಂದ ಉಡುಪಿ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದೆ. ಶುಕ್ರವಾರ ಸಹ ಮಳೆ ಮುಂದುವರೆಯುವ ಸೂಚನೆ ಇದ್ದು, ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ರಜೆ ಘೋಷಣೆ ಮಾಡಿದ್ದಾರೆ. ಇದನ್ನೂ ಓದಿ: ಮಾನ ಮರ್ಯಾದೆ, ಕೊಲೆಗಡುಕ, ಕಿತ್ತುಹೋದವರು – ಹೆಚ್‌ಡಿಕೆ Vs ಚಲುವರಾಯಸ್ವಾಮಿ
Advertisement
Advertisement
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಭಾರೀ ಮಳೆ ಮುಂದುವರೆದಿದೆ. ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಸುರಕ್ಷತಾ ದೃಷ್ಟಿಯಿಂದ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.
Advertisement
Advertisement
ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಕುಮಟಾ, ಹೊನ್ನಾವರ, ಅಂಕೋಲ ಮತ್ತು ಭಟ್ಕಳ ತಾಲೂಕುಗಳ ಶಾಲೆ ಮತ್ತು ಪಿಯುಸಿ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಶಿರಸಿ ಶೈಕ್ಷಣಿಕ ಜಿಲ್ಲೆಯಲ್ಲಿ ಎಂದಿನಂತೆ ಶಾಲಾ ಕಾಲೇಜುಗಳು ನಡೆಯಲಿದೆ. ಕಾರವಾರ ಶೈಕ್ಷಣಿಕ ಜಿಲ್ಲೆಗೆ ಮಾತ್ರ ರಜೆ ಘೋಷಿಸಿ ಜಿಲ್ಲಾಧಿಕಾರಿ ಪ್ರಭು ಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಕಾಡಾನೆಯೊಂದಿಗೆ ಸೆಲ್ಫಿ – 20 ಸಾವಿರ ರೂ. ದಂಡ
Web Stories