– ಕೊಡಗಿನಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಿದ್ದು, ಭಾರೀ ಮಳೆಯಾಗುವ (Rain) ಸಾಧ್ಯತೆ ಹಿನ್ನೆಲೆ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಶುಕ್ರವಾರ (ಜು.25) ರಜೆ (Holiday) ಘೋಷಿಸಲಾಗಿದೆ.
ಅಂಗನವಾಡಿಯಿಂದ ದ್ವಿತೀಯ ಪಿಯುಸಿವರೆಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ. ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಏಷ್ಯಾಕಪ್ ಆಯೋಜನೆಗೆ ಬಿಸಿಸಿಐ ಒಪ್ಪಿಗೆ – ಸೆಪ್ಟೆಂಬರ್‌ನಲ್ಲಿ ಭಾರತ, ಪಾಕ್ ಮುಖಾಮುಖಿ?
ಕೊಡಗು (Kodagu) ಜಿಲ್ಲೆಯಲ್ಲಿ ನಾಳೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ. ಮುನ್ನಚ್ಚೆರಿಕಾ ಕ್ರಮವಾಗಿ ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ನಾಳೆ (ಶುಕ್ರವಾರ) ಅಂಗನವಾಡಿ, ಪ್ರಾಥಮಿಕ ಶಾಲೆ, ಪ್ರೌಢಶಾಲೆ ಹಾಗೂ ಪದವಿ ಪೂರ್ಜ ಕಾಲೇಜುಗಳಿಗೆ ರಜೆ ಘೋಷಿಸಿದ್ದಾರೆ. ಇದನ್ನೂ ಓದಿ: NFSA ಲಾಭಾರ್ಥಿಗಳ ಮಿತಿ ಹೆಚ್ಚಿಸುವಂತೆ ಕರ್ನಾಟಕ ಸರ್ಕಾರ ಮನವಿ
ಈ ನಡುವೆ ಜಿಲ್ಲೆಯಲ್ಲಿ ಮಳೆ ಅರ್ಭಟ ಹೆಚ್ಚಾಗುತ್ತಿದ್ದು, ಬೆಟ್ಟಗುಡ್ಡ ಹಾಗೂ ನದಿ ಪಾತ್ರದ ಜನರಲ್ಲಿ ಮತ್ತೆ ಅತಂಕಕ್ಕೆ ಒಳಗಾಗುತ್ತಿದ್ದಾರೆ. ಈ ನಡುವೆ ನಾಳೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ನಂತರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿವಿಧ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಿದ್ದಾರೆ. ಇದನ್ನೂ ಓದಿ: ಶಿವನ ದೇವಸ್ಥಾನಕ್ಕಾಗಿ ಥಾಯ್ಲೆಂಡ್, ಕಾಂಬೋಡಿಯಾ ಮಧ್ಯೆ ಗಡಿಯಲ್ಲಿ ಘರ್ಷಣೆ!