– ವಿರಾಜಪೇಟೆ, ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೂ ರಜೆ
ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಾದ್ಯಂತ ನಿರಂತರ ಮಳೆ (Rain) ಸುರಿಯುತ್ತಿರುವ ಹಿನ್ನೆಲೆ ನಾಳೆ (ಜೂ.27) ಜಿಲ್ಲೆಯ ಎಲ್ಲಾ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ (Holiday) ಘೋಷಿಸಲಾಗಿದೆ.
ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಇದನ್ನೂ ಓದಿ: ಕಾಶ್ಮೀರದಲ್ಲಿ ಮೂವರು ಉಗ್ರರನ್ನು ಬೇಟೆಯಾಡಿದ ಸೇನೆ
ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಿದ್ದು, ನದಿ ಮತ್ತು ಸಮುದ್ರ ತೀರದ ಜನರಿಗೆ ಎಚ್ಚರವಹಿಸಲು ಮಾಹಿತಿ ನೀಡಲಾಗಿದೆ. ಇನ್ನು ಭಾರೀ ಮಳೆ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ಗುರುವಾರ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದನ್ನೂ ಓದಿ: ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಆರೋಪ – ಪಕ್ಷದಿಂದ ಬಿಜೆಪಿ ನಾಯಕನ ಉಚ್ಚಾಟನೆ
ಇನ್ನು ಕೊಡಗು ಜಿಲ್ಲೆಯಲ್ಲೂ ಮಳೆಯಾರ್ಭಟ ಮುಂದುವರೆದಿದ್ದು, ಜಿಲ್ಲೆಯ ವಿರಾಜಪೇಟೆ ಹಾಗೂ ಪೊನ್ನಂಪೇಟೆ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಪ್ರಾಥಂಇಕ ಹಾಗೂ ಪ್ರೌಢಶಾಲೆಯ ಎಲ್ಲಾ ಸರ್ಕಾರಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಿಗೆ ರಜೆ ನೀಡಲಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನಿರ್ದೇಶನದ ಮೇಲೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಂ.ಪ್ರಕಾಶ್ ಆದೇಶ ಹೊರಡಿಸಿದ್ದಾರೆ. ಜೂ.28 ರವರೆಗೆ ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಇದನ್ನೂ ಓದಿ: ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಎನ್‌ಎಸ್‌ಜಿಯಿಂದ ಆ್ಯಂಟಿ- ಹೈಜಾಕ್ ಅಣುಕು ಪ್ರದರ್ಶನ