– ಭಾರೀ ಮಳೆಯಿಂದಾಗಿ ಉಡುಪಿಯಲ್ಲಿ ರೈಲು ಸಂಚಾರ ಸ್ಥಗಿತ
ಮಂಗಳೂರು/ಉಡುಪಿ: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯಾದ್ಯಂತ ರೆಡ್ ಅಲರ್ಟ್ (Red Alert) ಘೋಷಿಸಿದ್ದು, ಜುಲೈ 5ರಂದು ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ (Holiday) ಘೋಷಿಸಲಾಗಿದೆ.
ಭಾರತೀಯ ಹವಾಮಾನ ಇಲಾಖೆ (Meteorological Department) ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.5 ರವರೆಗೆ ರೆಡ್ ಅಲರ್ಟ್ ಘೋಷಣೆಯಾಗಿರುವ ಕಾರಣ ಬುಧವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ, ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪಾಲಕರು ಜಾಗ್ರತೆ ವಹಿಸುವುದು, ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಮಳೆಗೆ ಸಂಪೂರ್ಣ ಜಲಾವೃತಗೊಂಡ ಭಟ್ಕಳ ರಾಷ್ಟ್ರೀಯ ಹೆದ್ದಾರಿ – ಜನಜೀವನ ಅಸ್ತವ್ಯಸ್ತ
ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯ ಕೈಗೊಳ್ಳಬೇಕು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕರ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಚೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿಬೇಕು. ಪ್ರವಾಸಿಗರು, ಸಾರ್ವಜನಿಕರು ನದಿ, ಸಮುದ್ರ ತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಪ್ರತಿ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳಲು ಸೂಚಿಸಲಾಗಿದೆ. ಇದನ್ನೂ ಓದಿ: ಹೆಚ್ಚುತ್ತಿರುವ ಅಪಘಾತ ತಪ್ಪಿಸಲು ಎಕ್ಸ್‌ಪ್ರೆಸ್‌ವೇನಲ್ಲಿ Interceptor ಬಳಕೆ
ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ ಕಂಟ್ರೋಲ್ ರೂಮ್ 1077 ಹಾಗೂ ದೂರವಾಣಿ: 0824 – 2442590 ಸಂಪರ್ಕಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ, ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಸಂಪಾಜೆಯ ಕೊಯನಾಡು ಬಳಿ ಮತ್ತೆ ಹೆದ್ದಾರಿ ಕುಸಿಯುವ ಭೀತಿ
ಇನ್ನು ಭಾರೀ ಮಳೆಯ ಹಿನ್ನೆಲೆ ಉಡುಪಿ ಜಿಲ್ಲೆಯಲ್ಲಿ ಎಲ್ಲಾ ರೈಲು ಸಂಚಾರ ಸ್ಥಗಿತಗೊಂಡಿದೆ. ತೀವ್ರ ಮಳೆಯಿಂದಾಗಿ ಬ್ರಹ್ಮಾವರ ತಾಲೂಕಿನ ಮಟಪಾಡಿ ಗ್ರಾಮದಲ್ಲಿ ರೈಲ್ವೆಟ್ರ್ಯಾಕ್‌ನ ವಿದ್ಯುತ್ ಕಂಬದ ಮೇಲೆ ಮರವೊಂದು ಬಿದ್ದಿದ್ದು, ಎರಡು ಗಂಟೆಯಿಂದ ರೈಲು ಸಂಚಾರ ಸ್ಥಗಿತಗೊಂಡಿದೆ. ದೆಹಲಿ-ಕೇರಳ ನಡುವೆ ಸಂಚಾರ ನಡೆಸುವ ನಿಜಾಮುದ್ದೀನ್ – ತಿರುವನಂತಪುರ ರೈಲು ಸ್ಥಗಿತಗೊಂಡಿದ್ದು, ಉಡುಪಿ ಜಿಲ್ಲೆಯ ಟ್ರ್ಯಾಕ್‌ನಲ್ಲಿ ಸಂಚರಿಸುವ ಎಲ್ಲಾ ರೈಲನ್ನು ಸ್ಥಗಿತಗೊಳಿಸಲಾಗಿದೆ. ಈ ಬಗ್ಗೆ ರೈಲ್ವೆ ಇಲಾಖೆ ಮರ ತೆರವುಗೊಳಿಸಿ, ವಿದ್ಯುತ್ ಸಂಪರ್ಕಿಸುವ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ದಾಖಲೆ ಮೀರಿ ಗೋಧಿ ಉತ್ಪಾದನೆಯಾಗುತ್ತಿದ್ದರೂ ಬೆಲೆ ಏರಿಕೆ ಯಾಕೆ?
Web Stories