ರಾಯಚೂರು: ರಾಜ್ಯದಲ್ಲಿ ಭಾರೀ ಮಳೆ ಹಿನ್ನೆಲೆ ವಿದ್ಯುತ್ ಬೇಡಿಕೆಯಲ್ಲಿ ಇಳಿಕೆಯಾಗಿದ್ದು ರಾಯಚೂರಿನ ಶಕ್ತಿ ನಗರದಲ್ಲಿರುವ ಆರ್ ಟಿಪಿಎಸ್ ಶಾಖೋತ್ಪನ್ನ ವಿದ್ಯುತ್ ಕೇಂದ್ರದ ಐದು ಘಟಕಗಳು ಕಾರ್ಯ ಸ್ಥಗಿತಗೊಳಿಸಿವೆ.
ವಿದ್ಯುತ್ ಕೇಂದ್ರದ ಒಟ್ಟು ಎಂಟು ಘಟಕಗಳಲ್ಲಿ ಐದು ಸ್ಥಗಿತವಾಗಿವೆ. ಬೇಡಿಕೆ ಇಳಿಕೆ ಹಿನ್ನೆಲೆ ವಿದ್ಯುತ್ ಉತ್ಪಾದನೆಯಲ್ಲಿ ಭಾರೀ ಪ್ರಮಾಣದ ಇಳಿಕೆ ಮಾಡಲಾಗಿದೆ. 1,720 ಮೆಗಾ ವ್ಯಾಟ್ ಸಾಮರ್ಥ್ಯದ ಆರ್ ಟಿಪಿಎಸ್ ವಿದ್ಯುತ್ ಕೇಂದ್ರದಿಂದ ಕೇವಲ 399 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
Advertisement
Advertisement
ಬಳ್ಳಾರಿಯ ಬಿಟಿಪಿಎಸ್ ಸಹ ವಿದ್ಯುತ್ ಉತ್ಪಾದನೆಯಲ್ಲಿ ಕಡಿತಗೊಳಿಸಿದ್ದು, 1,700 ಮೆಗಾ ವ್ಯಾಟ್ ಸಾಮರ್ಥ್ಯದ ಬಿಟಿಪಿಎಸ್ ಕೇವಲ 243 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದಿಸುತ್ತಿದೆ. ಶರಾವತಿ, ನಾಗಜರಿ ಸೇರಿದಂತೆ ಜಲ ವಿದ್ಯುತ್ ಸ್ಥಾವರಗಳು ಹೆಚ್ಚು ಪ್ರಮಾಣದ ವಿದ್ಯುತ್ ಉತ್ಪಾದನೆ ಮಾಡುತ್ತಿರುವುದರಿಂದ ಶಾಖೋತ್ಪನ್ನ ವಿದ್ಯುತ್ ಕೇಂದ್ರಗಳ ಮೇಲೆ ಒತ್ತಡ ಕಡಿಮೆಯಾಗಿದೆ. ರಾಜ್ಯದಲ್ಲಿ ಒಟ್ಟು 6,504 ಮೆಗಾ ವ್ಯಾಟ್ ವಿದ್ಯುತ್ ಬೇಡಿಕೆಯಿದ್ದು ಎಲ್ಲ ಮೂಲಗಳಿಂದ 6,503 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.