ಬೆಂಗಳೂರು: ಗ್ಯಾರಂಟಿ ಯೋಜನೆಗಳಿಗೆ (Congress Guarantee) ಹಣ ಹೊಂದಿಸುವ ಭರದಲ್ಲಿ ರಾಜ್ಯ ಸರ್ಕಾರ ವಿಕಲಚೇತನರಿಗೆ ಅನುದಾನ (Fund) ಕಡಿತ ಮಾಡಿದ ಆರೋಪಕ್ಕೆ ಒಳಗಾಗಿದೆ.
ಕಲಚೇತನರ ಅನುದಾನ ಕಡಿತ ಮಾಡಲಾಗಿದೆ ಎಂದು ಆರೋಪಿಸಿ ಬಿಜೆಪಿ ಆಕ್ರೋಶ ಹೊರಹಾಕಿದೆ. ಕಳೆದ ವರ್ಷಕ್ಕಿಂತ ವಿಕಲಚೇತರ ಅನುದಾನದಲ್ಲಿ 80% ರಷ್ಟು ಹಣ ಕಡಿತ ಮಾಡಲಾಗಿದೆ ಎಂದು ಬಿಜೆಪಿ ಆಪಾದಿಸಿದೆ. ಇದನ್ನೂ ಓದಿ: ಸಭೆಗಳನ್ನು ರದ್ದು ಮಾಡಿ ದಿಢೀರ್ ಸ್ವಗ್ರಾಮಕ್ಕೆ ತೆರಳಿದ ಏಕನಾಥ್ ಶಿಂಧೆ
ಕರ್ನಾಟಕ ಸರ್ಕಾರವು ದಿವ್ಯಾಂಗರಿಗಾಗಿ ಮೀಸಲಾಗಿದ್ದ ನಿಧಿಯಲ್ಲಿ 80% ಕಡಿತ ಮಾಡಿರುವುದು ನಿಜಕ್ಕೂ ದುರದೃಷ್ಟಕರ. ಮತ್ತು ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ, ಸರ್ಕಾರ ಇದ್ದನ್ನು ಗಮನದಲ್ಲಿಟ್ಟು ಅವರಿಗೆ ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು…
— Pralhad Joshi (@JoshiPralhad) November 29, 2024
ಈ ವಿಚಾರವಾಗಿ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ (Pralhad Joshi), ಶೋಭಾ ಕರಂದ್ಲಾಜೆ (Shobha Karandlaje) ಎಕ್ಸ್‌ನಲ್ಲಿ ಆಕ್ರೋಶ ಹೊರಹಾಕಿದ್ದಾರೆ. ಕಳೆದ ವರ್ಷ ಸರ್ಕಾರ ವಿಕಲಚೇನರ ವಿವಿಧ ಯೋಜನೆಗಳಿಗೆ 53 ಕೋಟಿ ರೂ. ಅನುದಾನ ಮೀಸಲು ಇಡಲಾಗಿತ್ತು. ಆದರೆ ಪ್ರಸಕ್ತ ಹಣಕಾಸು ವರ್ಷದಲ್ಲಿ ಬರೀ 10 ಕೋಟಿ ರೂ. ಅನುದಾನ ಮಾತ್ರ ಹಂಚಿಕೆ ಮಾಡಲಾಗಿದೆ. ಇದು ನಿಜಕ್ಕೂ ದುರದೃಷ್ಟಕರ. ಇದು ದಿವ್ಯಾಂಗರಿಗೆ ಆಗುತ್ತಿರುವ ಅನ್ಯಾಯ. ಇದರಿಂದ ಅವರ ಅಗತ್ಯ ಸೇವೆಗಳಿಗೆ ಧಕ್ಕೆ ಆಗಲಿದೆ. ಮೀಸಲಿಟ್ಟ ನಿಧಿಯನ್ನು ಅವರಿಗಾಗಿ, ಅವರ ಸೇವೆಗಾಗಿ ಉಪಯೋಗಿಸಬೇಕು ಎಂದು ಜೋಶಿ ಆಗ್ರಹಿಸಿದ್ದಾರೆ.