ಬೆಂಗಳೂರು: ಸಿಪಿಸಿ ಹಾಗೂ ಸಿಹೆಚ್‌ಸಿ ಹುದ್ದೆಗಳಿಗೆ ಸಾಮಾನ್ಯ ವರ್ಗಾವಣೆಗೆ ನಿಗದಿಪಡಿಸಲಾಗಿದ್ದ ಕನಿಷ್ಠ ಸೇವಾ ಅವಧಿಯನ್ನು 6 ವರ್ಷಗಳ ಬದಲಿಗೆ 5 ವರ್ಷಕ್ಕೆ ಇಳಿಕೆ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಬೆಂಗಳೂರಿನ ಕಮಿಷನರ್ ವ್ಯಾಪ್ತಿಯಲ್ಲಿ ಕೆಲಸ ಮಾಡುವ ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೆ ಇದು ಅನ್ವಯವಾಗಲಿದೆ. ಒಂದೇ ಕಡೆ ಹಲವು ಠಾಣೆಗಳಲ್ಲಿ ಪೊಲೀಸ್ ಸಿಬ್ಬಂದಿ ಕೆಲಸ ಮಾಡುತ್ತಿದ್ದಾರೆ. ಒಂದೇ ಕಡೆ ಇದ್ದು ಹಲವು ಠಾಣೆಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿದ್ದ ಬಗ್ಗೆ ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ವರ್ಗಾವಣೆ ಅವಧಿಗೆ ತಿದ್ದುಪಡಿ ತರಲಾಗಿದೆ. ಇದನ್ನೂ ಓದಿ: ಹಿಂದಿನಂತೆ 5 ರೂಪಾಯಿ ಚಿಕಿತ್ಸೆ ಮುಂದುವರಿಸುತ್ತೇನೆ – ಸಂಪೂರ್ಣ ಚೇತರಿಕೆ ಕಂಡ ಡಾ.ಶಂಕರೇಗೌಡ
ರೌಡಿಶೀಟರ್, ಆರೋಪಿಗಳ ಜೊತೆ ಪೊಲೀಸರು ಕೈ ಜೋಡಿಸುತ್ತಿರುವುದು ಬೆಳಕಿಗೆ ಬಂದಿದೆ. ಡಿಸಿಪಿಗಳು ತಮ್ಮ ವ್ಯಾಪ್ತಿಯಲ್ಲಿ 6 ವರ್ಷದಿಂದ ಕೆಲಸ ಮಾಡುತ್ತಿದ್ದ ಕಾನ್ಸ್‌ಟೇಬಲ್ ವರ್ಗಾವಣೆ ಮಾಡುವಂತೆ ಸೂಚಿಸಿ ಆದೇಶ ಹೊರಡಿಸಲಾಗಿದೆ.