ನಿರ್ದೇಶಕ ಭರತ್ ಜಿ ನಿರ್ದೇಶಿಸುತ್ತಿರುವ “ಸ್ಪೂಕಿ ಕಾಲೇಜ್” ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಪೋಸ್ಟರ್, ಫಸ್ಟ್ ಲುಕ್ ಮೂಲಕ ಈಗಾಗಲೇ ಜನಮನ ಗೆದ್ದಿರುವ “ಸ್ಪೂಕಿ ಕಾಲೇಜ್” ಚಿತ್ರದ ಹಾಡೊಂದಕ್ಕೆ “ಏಕ್ ಲವ್ ಯಾ” ಬೆಡಗಿ ರೀಷ್ಮಾ ನಾಣಯ್ಯ ಹೆಜ್ಜೆ ಹಾಕಿದ್ದಾರೆ. ಡಾ||ರಾಜಕುಮಾರ್ ಅಭಿನಯದ “ವೀರಕೇಸರಿ” ಚಿತ್ರದ “ಮೆಲ್ಲುಸಿರೆ ಸವಿಗಾನ” ಹಾಡನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗಿದೆ. ನೂತನ ಶೈಲಿಯಲ್ಲಿ ಈ ಹಾಡು ಮೂಡಿಬಂದಿದೆ. ಭೂಷಣ್ ನೃತ್ಯ ನಿರ್ದೇಶನ ಮಾಡಿರುವ ಈ ಹಾಡಿಗೆ ರೀಷ್ಮಾ ನಾಣಯ್ಯ ಅದ್ಭುತವಾಗಿ ನೃತ್ಯ ಮಾಡಿದ್ದಾರೆ.
Advertisement
ಈ ಹಾಡನ್ನು ನಾವು ಬಲವಂತವಾಗಿ ತುರುಕಿಲ್ಲ. ಚಿತ್ರದ ಕಥೆಯನ್ನು ಹೇಳುವ ಹಾಡೊಂದು ಬೇಕಿತ್ತು. “ಮೆಲ್ಲುಸಿರೆ ಸವಿಗಾನ” ಹಾಡನ್ನು ಕೇಳಿದಾಗ, ಈ ಅದ್ಭುತ ಹಾಡು ಸೂಕ್ತ ಎನಿಸಿತು. ಹಾಗಾಗಿ ಈ ಹಾಡನ್ನು ಆಯ್ಕೆ ಮಾಡಿಕೊಂಡೆವು. ದಾಂಡೇಲಿಯ ಅರಣ್ಯ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅದ್ಭುತ ಸೆಟ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ. 250 ಕ್ಕೂ ಅಧಿಕ ತಂತ್ರಜ್ಞರ ಪಾಲ್ಗೊಳ್ಳುವಿಕೆಯಲ್ಲಿ ಈ ಹಾಡು ಅದ್ದೂರಿಯಾಗಿ ಬಂದಿದೆ ಎಂದು ಮಾಹಿತಿ ನೀಡಿರುವ ನಿರ್ದೇಶಕ ಭರತ್, ಹಾಡು ಉತ್ತಮವಾಗಿ ಮೂಡಿಬರಲು ಸಹಕಾರ ನೀಡಿದ ನಿರ್ಮಾಪಕ ಹೆಚ್.ಕೆ. ಪ್ರಕಾಶ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ. ಇದನ್ನೂ ಓದಿ: ‘ಜೊತೆ ಜೊತೆಯಲಿ’ ಧಾರಾವಾಹಿ: ಆರ್ಯವರ್ಧನ್ ಅಲ್ಲ, ಅವನ ಸಹೋದರನ ಪಾತ್ರದಲ್ಲಿ ಹರೀಶ್ ರಾಜ್
Advertisement
Advertisement
ಈ ಹಾಡಿನಲ್ಲಿ ಅಭಿನಯಿಸುವುದಕ್ಕೆ ರೀಷ್ಮಾ ನಾಣಯ್ಯ ಸಾಕಷ್ಟು ತಯಾರಿ ಮಾಡಿಕೊಂಡಿದರಂತೆ. ಅಣ್ಣವ್ರು ಅಭಿನಯಿಸಿದ್ದ ಜನಪ್ರಿಯ ಹಾಡಿಗೆ ನಾನು ನೃತ್ಯ ಮಾಡಿರುವುದು ಖುಷಿಯಾಗಿದೆ ಎನ್ನುತ್ತಾರೆ ರೀಷ್ಮಾ ನಾಣಯ್ಯ. “ಸ್ಪೂಕಿ ಕಾಲೇಜ್” ನ ಬಹುತೇಕ ಚಿತ್ರೀಕರಣ ಧಾರವಾಡದ ನೂರಕ್ಕೂ ಅಧಿಕ ವರ್ಷಗಳ ಇತಿಹಾಸವಿರುವ ಕಾಲೇಜೊಂದರಲ್ಲಿ ನಡೆದಿದೆ. ಅರಣ್ಯ ಭಾಗದ ಚಿತ್ರೀಕರಣವನ್ನು ದಾಂಡೇಲಿಯಲ್ಲಿ ಚಿತ್ರಿಸಲಾಗಿದೆ. ಆನಂತರ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. “ರಂಗಿತರಂಗ” , “ಅವನೇ ಶ್ರೀಮನ್ನಾರಾಯಣ” ಚಿತ್ರಗಳ ನಿರ್ಮಾಪಕ ಹೆಚ್.ಕೆ.ಪ್ರಕಾಶ್ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಕಥೆ, ಚಿತ್ರಕಥೆ ಹಾಗು ಸಂಭಾಷಣೆಯನ್ನು ನಿರ್ದೇಶಕ ಭರತ್ ಅವರೆ ಬರೆದಿದ್ದಾರೆ. ಮನೋಹರ್ ಜೋಶಿ ಛಾಯಾಗ್ರಹಣ, ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನ, ವಿಶ್ವಾಸ್ ಕಶ್ಯಪ್ ಕಲಾ ನಿರ್ದೇಶನ ಹಾಗೂ ಶ್ರೀಕಾಂತ್ (ಕೆ ಜಿ ಎಫ್) ಅವರ ಸಂಕಲನ ಈ ಚಿತ್ರಕ್ಕಿದೆ.
Advertisement
“ಪ್ರೀಮಿಯರ್ ಪದ್ಮಿನಿ” ಖ್ಯಾತಿಯ ವಿವೇಕ್ ಸಿಂಹ “ಸ್ಪೂಕಿ ಕಾಲೇಜ್” ನ ನಾಯಕ. “ದಿಯಾ” ಮೂಲಕ ಹೆಸರಾಗಿರುವ ಖುಷಿ ರವಿ ನಾಯಕಿ. ಅಜಯ್ ಪೃಥ್ವಿ, ಹನುಮಂತೇ ಗೌಡ, ಕೆ.ಎಸ್.ಶ್ರೀಧರ್, ವಿಜಯ್ ಚೆಂಡೂರ್, ಶರಣ್ಯ ಶೆಟ್ಟಿ, ರಘು ರಮಣಕೊಪ್ಪ ಹಾಗೂ “ಕಾಮಿಡಿ ಕಿಲಾಡಿಗಳು” ಶೋನ ಜನಪ್ರಿಯ ಕಲಾವಿದರು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ. ರೀಷ್ಮಾ ನಾಣಯ್ಯ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ.