ರಾಯಚೂರು: ಪ್ರೇಮ ವೈಫಲ್ಯ (Love Failure) ಹಿನ್ನೆಲೆ ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಲಿಂಗಸುಗೂರು ತಾಲೂಕಿನ ಕನಸಾವಿಯಲ್ಲಿ ನಡೆದಿದೆ.
ಸಂತೋಷ್ (22) ನೇಣುಬಿಗಿದುಕೊಂಡು ಸಾವಿಗೆ ಶರಣಾದ ಯುವಕ. ಮನೆಯಲ್ಲಿನ ಫ್ಯಾನ್‌ಗೆ ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆತ್ಮಹತ್ಯೆಗೂ ಮೊದಲು ನಾನು ಒಬ್ಬ ಹುಚ್ಚು ಪ್ರೇಮಿ ಎಂದು ವಾಟ್ಸಪ್‌ನಲ್ಲಿ ಸ್ಟೇಟಸ್ ಹಾಕಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಬೆಂಜ್ ಕಾರು – ಚಾಲಕ ಸಾವು
ಸಂತೋಷ್ ಅತ್ತಿಗೆ ತಂಗಿಯನ್ನು ಪ್ರೀತಿಸುತ್ತಿದ್ದ. ಮದುವೆಗೆ ಯುವತಿಯಿಂದ ಒಪ್ಪಿಗೆ ಸಿಗದಿದ್ದಾಗ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮುದಗಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಚೀನಾ ಗಡಿ ಭಾಗದಲ್ಲಿ ನದಿ ದಾಟುವಾಗ ಟ್ಯಾಂಕ್ ಅಪಘಾತ – ಐವರು ಭಾರತೀಯ ಯೋಧರು ಹುತಾತ್ಮ